ಮಧ್ಯಪ್ರದೇಶದಲ್ಲಿ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಛತ್ತರ್ಪುರ, ಏಪ್ರಿಲ್ 26: ಮೂರು ವರ್ಷ ವಯಸ್ಸಿನ ಪುಟ್ಟ ಬಾಲಕಿಯ ಮೇಲೆ ಮಗುವಿನ ನೆರಮನೆಯವ ವ್ಯಕ್ತಿಯೇ ಅತ್ಯಾಚಾರ ಎಸಗಿದ ಧಾರುಣ ಘಟನೆ ಮಧ್ಯಪ್ರದೇಶ ಛತ್ತರ್ಪುರದಲ್ಲಿ ನಡೆದಿದೆ.

ಸಂತ್ರಸ್ತ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ಮಗು ಮನೆಯಲ್ಲಿ ಒಬ್ಬಳೇ ಇರುವುದನ್ನು ಮನಗಂಡ ನೆರಮನೆಯ ವ್ಯಕ್ತಿ ಬಾಲಕಿಯ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ತಕ್ಷಣವೇ ಆರೋಪಿಯನ್ನು ಬಂಧಿಸಲಾಗಿದ್ದು, ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Three year old girl raped in Madhya Pradesh

ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣ ಇತ್ತೀಚಿ ದಿನಗಳಲ್ಲಿ ಹೆಚ್ಚಾಗಿದ್ದು, ಕಾಶ್ಮೀರದ ಕತುವಾ ಮತ್ತು ಗುಜರಾತಿನ ಸೂರತ್ ಎಂಬಲ್ಲಿ ನಡೆದ ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳು ದೇಶದಾದ್ಯಂತ ಆಕ್ರೋಶ ಹುಟ್ಟಿಸಿದ್ದವು, ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳ ವಿರುದ್ಧ ಬಿಗಿ ಕಾನೂನು ಜಾರಿಯಾಗಬೇಕು ಎಂಬ ಕೂಗು ಕೇಳಿಬಂದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಪೋಕ್ಸೋ(Protection of Children from Sexual Offences Act )ಕಾಯ್ದೆಯಲ್ಲಿ ತಿದ್ದುಪಡಿ ತಂದಿದೆ.

ಪ್ರಸ್ತುತ 12 ವರ್ಷ ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸುವ ತಿದ್ದುಪಡಿಯನ್ನು ಪೋಕ್ಸೋ ಕಾಯ್ದೆಯಲ್ಲಿ ಕೇಂದ್ರ ಸರ್ಕಾರ ತಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+