ಪಂಜಾಬ್: ಮೂರು ವರ್ಷ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ
ಪಟಿಯಾಲ, ಮೇ 04: ಮೂರು ವರ್ಷ ವಯಸ್ಸಿನ ಬಾಲಕಿಯ ಮೇಲೆ ಆಕೆ ತಂದೆ-ತಾಯಿ ಕೆಲಸ ಮಾಡುತ್ತಿದ್ದ ಜಮೀನಿನ ಮಾಲೀಕನೇ ಅತ್ಯಾಚಾರ ನಡೆಸಿದ ಘಟನೆ ಪಂಜಾಬಿನ ಪಟಿಯಾಲ ಎಂಬಲ್ಲಿ ನಡೆದಿದೆ.
ಮಗು ಇದ್ದಕ್ಕಿದ್ದಂತೆ ಹೊಟ್ಟೆ ನೋವು ಎಂದು ಅಳುತ್ತಿದ್ದುದರಿಂದ ಆಕೆಯನ್ನು ಪಾಲಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆಯ ಮೇಲೆ ಅತ್ಯಾಚಾರ ನಡೆದಿರುವುದನ್ನು ಖಚಿತಪಡಿಸಿದ್ದರು.
ಆಕೆಯನ್ನು ಜಮೀನಿನ ಮಾಲೀಕ ಕರೆದೊಯ್ದಿದ್ದನ್ನು ನೋಡಿರುವುದಾಗ ಬಾಲಕನೊಬ್ಬ ಹೇಳಿದ್ದ. ಆದರೆ ಆರೋಪಿ ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ಬಲೆಬೀಸಿದ್ದಾರೆ.

ಇತ್ತೀಚೆಗಷ್ಟೇ ಆಂಧ್ರಪ್ರದೇಶದ ಗುಂಟೂರಿನಲ್ಲಿ 9 ವರ್ಷ ವಯಸ್ಸಿನ ಬಾಲಕಿಯ ಮೇಲೆ 50 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ ಘಟನೆ ನಡೆದಿತ್ತು.
ಇತ್ತೀಚೆಗಷ್ಟೇ ಪೋಕ್ಸೋ(protection of children from sexual offences) ಕಾಯ್ದೆಯಲ್ಲಿ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರ 12 ವರ್ಷ ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ ಅಪರಅಧಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೆ ತರುತ್ತಿರುವುದನ್ನು ಇಲ್ಲಿ ಉಲ್ಲೇಖಿಸಬಹುದು.












Click it and Unblock the Notifications