Thrissur: ತ್ರಿಶೂರ್ ಪಟಾಕಿ ತಯಾರಿಕಾ ಕೇಂದ್ರದಲ್ಲಿ ಭೀಕರ ಸ್ಫೋಟ; ಮೂವರು ಕಾರ್ಮಿಕರು ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

ಕೇರಳದ ಸಾಂಸ್ಕೃತಿಕ ಉತ್ಸವ 'ತ್ರಿಶೂರ್ ಪೂರಂ' ಸಂಭ್ರಮಕ್ಕೆ ಸಿದ್ಧತೆಗಳು ನಡೆಯುತ್ತಿದ್ದಾಗಲೇ ಭೀಕರ ದುರಂತವೊಂದು ಸಂಭವಿಸಿದೆ. ಮಂಗಳವಾರ ತ್ರಿಶೂರ್ ಜಿಲ್ಲೆಯ ಮುಂಡತಿಕೋಡ್ ಪ್ರದೇಶದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪಟಾಕಿ ತಯಾರಿಕಾ ಶೆಡ್‌ವೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಈ ಘಟನೆಯು ತ್ರಿಶೂರ್ ಪೂರಂ ಹಬ್ಬದ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ವರದಿಗಳ ಪ್ರಕಾರ ತ್ರಿಶೂರ್ ಪೂರಂನ ಪ್ರಮುಖ ಭಾಗವಾಗಿರುವ 'ತಿರುವಂಬಾಡಿ' (Thiruvambady) ವಿಭಾಗಕ್ಕಾಗಿ ಪಟಾಕಿಗಳನ್ನು ಸಿದ್ಧಪಡಿಸುತ್ತಿದ್ದ ಸ್ಥಳದಲ್ಲಿ ಈ ಅವಘಡ ಸಂಭವಿಸಿದೆ. ಹಬ್ಬದ ಪ್ರಯುಕ್ತ ಸಿಡಿಸುವ ಪಟಾಕಿಗಳಿಗೆ ಮದ್ದು ತುಂಬಿಸುವ ಕೆಲಸದಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಈ ಸ್ಫೋಟ ಉಂಟಾಗಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಪಟಾಕಿ ತಯಾರಿಕಾ ಶೆಡ್ ಸಂಪೂರ್ಣವಾಗಿ ಧ್ವಂಸವಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು.

Thrissur

ಘಟನೆಗೆ ಕಾರಣವೇನು?

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ದೌಡಾಯಿಸಿದ್ದಾರೆ. ತ್ರಿಶೂರ್ ಪೂರಂ ಹಬ್ಬದ ಪ್ರಮುಖ ಭಾಗವಾದ 'ತಿರುವಂಬಾಡಿ' ವಿಭಾಗದ ಪಟಾಕಿ ಪ್ರದರ್ಶನಕ್ಕಾಗಿ ಇಲ್ಲಿ ಪಟಾಕಿಗಳನ್ನು ಸಿದ್ಧಪಡಿಸಿ ಸಂಗ್ರಹಿಸಿಡಲಾಗಿತ್ತು. ಮದ್ದು ತುಂಬಿಸುವ ಕೆಲಸ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಪಟಾಕಿ ತಯಾರಿಕಾ ಶೆಡ್ ಸಂಪೂರ್ಣವಾಗಿ ನೆಲಸಮವಾಗಿದ್ದು, ಘಟನಾ ಸ್ಥಳದ ದೃಶ್ಯಗಳು ಭೀಕರವಾಗಿವೆ.

ಈ ದುರಂತದಲ್ಲಿ ಈವರೆಗೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಸುಮಾರು 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರಲ್ಲಿ 8 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಬ್ಬದ ಸೀಸನ್ ಆರಂಭವಾಗುವ ಮುನ್ನವೇ ಪಟಾಕಿಗಳನ್ನು ಜೋಡಿಸಿ ಸಂಗ್ರಹಿಸಿಡುವ ವೇಳೆ ಈ ಅವಘಡ ನಡೆದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿದ್ದು, ಪರಿಹಾರ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣವೇನು ಮತ್ತು ಸುರಕ್ಷತಾ ಕ್ರಮಗಳಲ್ಲಿ ಲೋಪವಾಗಿದೆಯೇ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಈ ಘಟನೆಯಿಂದಾಗಿ ತ್ರಿಸೂರು ಪೂರಂ ಹಬ್ಬದ ಸಂಭ್ರಮದ ನಡುವೆ ಶೋಕದ ಛಾಯೆ ಆವರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+