ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು, ಏಪ್ರಿಲ್ 23: ಕರ್ನಾಟಕ ಸೇರಿದಂತೆ 4 ರಾಜ್ಯಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಒಳನಾಡಿನ ಜಿಲ್ಲೆಗಳಲ್ಲಿ ಸಾಕಷ್ಟು ಮಳೆಯಾಗಲಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮುಂದುವರಿಯುವ ಸಾಧ್ಯತೆಗಳಿವೆ. ಭಾಗಶಃ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆ ಮುಂದುವರಿಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್. ಪ್ರಕಾಶ್ ತಿಳಿಸಿದರು.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪೂರ್ವ ಮುಂಗಾರು ಮಳೆ ಮುಂದುವರಿದಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದ್ದು, ಏ.24ರ ವರೆಗೂ ಮುಂದುವರಿಯುವ ಮುನ್ಸೂಚನೆಗಳಿವೆ ಎಂದು ಹೇಳಿದರು.

9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ 9 ಜಿಲ್ಲೆಗಳಿಗೆ ಮಳೆಯ ಎಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ತುಮಕೂರು, ಶಿವಮೊಗ್ಗ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಹಾರಂಗಿ, ಮೂರ್ನಾಡು, ಕುಣಿಗಲ್, ಭಾಗಮಂಡಲ, ಸಿದ್ದಾಪುರ, ಸಾಗರ,ಕುಶಾಲನಗರ, ಮದ್ದೂರು, ಸುಬ್ರಹ್ಮಣ್ಯ, ಸುಳ್ಯ, ಮಳವಳ್ಳಿ, ಸೋಮವಾರಪೇಟೆ, ಹಳೆಬೀಡು, ಹಿರಿಯೂರು, ಮಲವಳ್ಳಿ, ಭರಮಸಾಗರ, ಥೊಂಡೆಬಾವಿಯಲ್ಲಿ ಮಳೆಯಾಗಿದೆ.

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, 34 ಡಿಗ್ರಿ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದದೆ. ನಗರದಲ್ಲಿ 34.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.1ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 35.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಒಳನಾಡಿನಲ್ಲಿ ಮಳೆ

ಉತ್ತರ ಒಳನಾಡಿನಲ್ಲಿ ಮಳೆ

ಬೆಳಗಾವಿ, ಬಾಗಲಕೋಟೆ, ಬೀದರ್, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.

ದೆಹಲಿ, ಒಡಿಶಾದಲ್ಲೂ ಮಳೆ

ದೆಹಲಿ, ಒಡಿಶಾದಲ್ಲೂ ಮಳೆ

ಪಂಜಾಬ್‌ನಲ್ಲಿ ಚಂಡಮಾರುತ ಶುರುವಾಗುತ್ತಿದ್ದು, ಅದರ ಪರಿಣಾಮ ದೆಹಲಿ, ಒಡಿಶಾ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ. ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಮಣಿಪುರ, ಸಿಕ್ಕಿಂ, ತ್ರಿಪುರಾ, ಕೇರಳ, ಪಶ್ಚಿಮ ಬಂಗಾಳ, ತೆಲಂಗಾಣ, ಉತ್ತರ ಪ್ರದೇಶ,ಪಪಂಜಾಬ್, ಹರ್ಯಾಣ, ತಮಿಳುಣಾಡು, ಕರ್ನಾಟಕ, ಅಂಡಮಾನ್ ನಿಕೋಬಾರ್‌ನಲ್ಲಿ ಕೂಡ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+