ಭಾರತದಲ್ಲಿ ಶೇ.96.92ರಷ್ಟು ಕೊವಿಡ್-19 ಸೋಂಕಿತರು ಚೇತರಿಕೆ

ನವದೆಹಲಿ, ಜೂನ್ 30: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ಪ್ರಭಾವ ದಿನದಿಂದ ದಿನಕ್ಕೆ ತಗ್ಗುತ್ತಿದೆ. ಕೊವಿಡ್-19 ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಚೇತರಿಕೆ ಪ್ರಮಾಣ ಶೇ.96.92ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 45,951 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 817 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ 60,729 ಸೋಂಕಿತರು ಗುಣಮುಖರಾಗಿದ್ದಾರೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 3,03,62,848 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,94,27,330 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 3,98,454 ಮಂದಿ ಬಲಿಯಾಗಿದ್ದಾರೆ. ಇದರ ಹೊರತಾಗಿ 5,37,064 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

Till Today 96.92 Percent Covid-19 Patients Recovery In India

33,28,54,527 ಜನರಿಗೆ ಕೊವಿಡ್-19 ಲಸಿಕೆ:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.

ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ. ದೇಶದಲ್ಲಿ ಈವರೆಗೂ 33,28,54,527 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+