ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣಾ ಪೂರ್ವ ಸಮೀಕ್ಷೆ: ಪುದುಚೇರಿಯಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ

|
Google Oneindia Kannada News

ಪುದುಚೇರಿ ಮಾರ್ಚ್ 8: ಏಪ್ರಿಲ್ 6 ರಂದು ನಡೆಯಲಿರುವ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 30 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮೈತ್ರಿಕೂಟ ಸರ್ಕಾರ ರಚಿಸುವ ಸಾಧ್ಯತೆಯಿದೆ ಎಂದು ಟೈಮ್ಸ್ ನೌ ಮತ್ತು ಸಿ-ವೋಟರ್ ಸಮೀಕ್ಷೆ ಸಂಗ್ರಹದಲ್ಲಿ ಅಂದಾಜಿಸಿದೆ.

ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ, ಭಾರತೀಯ ಜನತಾ ಪಕ್ಷದ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ 16 ರಿಂದ 20 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಲಾಗಿದೆ. ಮತ ಎಣಿಕೆ ಕಾರ್ಯ ಮೇ 2 ರಂದು ನಡೆಯಲಿದೆ.

2016ರ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 12 ಸ್ಥಾನಗಳನ್ನು ಗೆದ್ದಿತ್ತು. ಇದೇ ವೇಳೆ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಮೈತ್ರಿಯು ಸುಮಾರು 12 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದ್ದು, 10 ರಿಂದ 14 ಸ್ಥಾನಗಳ ನಡುವೆ ಎಷ್ಟಾದರೂ ಗೆಲ್ಲಬಹುದು. ಅದೇ ರೀತಿ ಪುದುಚೇರಿಯಲ್ಲಿ ಇತರ ಅಭ್ಯರ್ಥಿಗಳು 1 ಸ್ಥಾನ ಗೆಲ್ಲುವ ನಿರೀಕ್ಷೆಯಿದೆ.

Puducherry Pre-Poll Survey: NDA Alliance Will Gain Power In Puducherry

ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಅವರೊಂದಿಗಿನ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು 2016ರಲ್ಲಿ 17 ವಿಧಾನಸಭಾ ಸ್ಥಾನಗಳನ್ನು ತಮ್ಮದಾಗಿಸಿಕೊಂಡು ಜಯ ದಾಖಲಿಸಿತ್ತು.

English summary
The Times Now and C-Voter poll estimates that the National Democratic Alliance (NDA) is likely to form an alliance government by winning 18 seats out of a total of 30 seats in the Puducherry Assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X