ಮಧ್ಯಪ್ರದೇಶ ಚುನಾವಣೆ 2023; ಬಿಜೆಪಿ ಕೈತಪ್ಪಲಿದೆ ಅಧಿಕಾರ
ಭೋಪಾಲ್, ನವೆಂಬರ್ 30: ಮಧ್ಯಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 117 ಕ್ಷೇತ್ರದಲ್ಲಿ ಜಯಗಳಿಸುವ ಮೂಲಕ ಅಧಿಕಾರ ಕಳೆದುಕೊಳ್ಳಲಿದೆ ಎಂದು Times Now ETG ಚುನಾವಣೋತ್ತರ ಸಮೀಕ್ಷೆ ಹೇಳಿದೆ. ರಾಜ್ಯದ ಮುಖ್ಯಮಂತ್ರಿ ಯಾರಾಗಲಿದ್ದಾರೆ? ಕಾದು ನೋಡಬೇಕಿದೆ.
ಮಧ್ಯಪ್ರದೇಶ ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ದಾಖಲೆಯ 76.22ರಷ್ಟು ಮತದಾನವಾಗಿತ್ತು.

ಗುರುವಾರ ಸಂಜೆ ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಪ್ರಕಟವಾಗಿವೆ. ಡಿಸೆಂಬರ್ 3ರ ಭಾನುವಾರ ಮತ ಎಣಿಕೆ ನಡೆಯಲಿದೆ. ಯಾರಿಗೆ ಅಧಿಕಾರ ಸಿಗಲಿದೆ? ಎಂದು ಇಡೀ ದೇಶವೇ ಕಾದು ನೋಡುತ್ತಿದೆ. 2024ರ ಲೋಕಸಭಾ ಚುನಾವಣೆಗೂ ಮೊದಲು ನಡೆಯುತ್ತಿರುವ ಚುನಾವಣೆ ಇದಾಗಿದೆ.
Times Now ETG ನಡೆಸಿದ ಚುನಾವಣೋತ್ತರ ಸಮೀಕ್ಷೆ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ. ಕಾಂಗ್ರೆಸ್ 109-125 ಸ್ಥಾನಗಳಲ್ಲಿ ಜಯಗಳಿಸಲಿದೆ. ಅಲ್ಲದೇ ಕಾಂಗ್ರೆಸ್ ಪಕ್ಷ ಶೇ 43.83ರಷ್ಟು ಮತಗಳನ್ನು ಗಳಿಸಲಿದೆ.
ಬಿಜೆಪಿ 105-117 ಕ್ಷೇತ್ರದಲ್ಲಿ ಜಯಗಳಿಸಲಿದೆ. ಅಲ್ಲದೇ ಬಿಜೆಪಿ ಶೇ 42.23ರಷ್ಟು ಮತಗಳಿಕೆ ಮಾಡಲಿದೆ. ಇತರರು ಶೇ 13.94ರಷ್ಟು ಮತಗಳನ್ನು ಪಡೆಯಲಿದ್ದಾರೆ. ಹಲವು ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನವನ್ನು ನೀಡಿವೆ.












Click it and Unblock the Notifications