Times now Exit Poll Result 2024: ಮತ್ತೆ ಮೋದಿ ಮ್ಯಾಜಿಕ್- INDIA ಒಕ್ಕೂಟ ಗೆದ್ದ ಸ್ಥಾನಗಳೆಷ್ಟು?
ನವದೆಹಲಿ, ಜೂನ್ 01: ದೇಶದಲ್ಲಿ ಒಟ್ಟು 7 ಹಂತದಲ್ಲಿ ಲೋಕಸಭೆ ಚುನಾವಣೆ 2024 ನಡೆಯಿತು. ಮೊದಲ ಹಂತದ ಮತದಾನ ಏಪ್ರಿಲ್ 19, ಏಪ್ರಿಲ್ 26ರಂದು 2ನೇ ಹಂತ, ಮೇ 7ರಂದು 3ನೇ ಹಂತ, ಮೇ 13ರಂದು 4ನೇ ಹಂತ, ಮೇ 20ರಂದು 5ನೇ ಹಂತ, ಮೇ 25ರಂದು 6ನೇ ಹಂತ ಮತ್ತು ಜೂನ್ 1ರಂದು 7ನೇ ಹಂತದ ಮತದಾನ ಮುಕ್ತಾಯಗೊಂಡಿದೆ.
ಚುನಾವಣೆ ಮುಗಿಯುತ್ತಿದ್ದಂತೆ ವಿವಿಧ ರಾಷ್ಟ್ರೀಯ ವಾಹಿನಿಗಳು ಚುನಾವಣೋತ್ತರ ಸಮೀಕ್ಷೆಯನ್ನು ನಡೆಸಿವೆ. 543 ಸದಸ್ಯ ಬಲದ ಲೋಕಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 272 ಬೇಕಾಗಿದೆ. ಇನ್ನೂ ಕಳೆದ ಎರಡು ಬಾರಿ ಕೇಂದ್ರದಲ್ಲಿ ಮೋದಿ ಸರ್ಕಾರ ಆಡಳಿತ ನಡೆಸಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 2014, 2019ರ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿ ಎರಡು ಬಾರಿ ಅಧಿಕಾರ ನಡೆಸಿದೆ. ಈ ಬಾರಿ 400ಕ್ಕೂ ಅಧಿಕ ಕೇತ್ರಗಳಲ್ಲಿ ಗೆಲ್ಲುವ ಮೂಲಕ ಮತ್ತೊಮ್ಮೆ ಸರ್ಕಾರ ರಚನೆ ಮಾಡುತ್ತೇವೆ ಎಂಬ ವಿಶ್ವಾಸದಲ್ಲಿದ್ದಾರೆ.

ಇತ್ತ ಸರ್ಕಾರ ರಚಿಸಲು ಪಣ ತೊಟ್ಟಿರುವ ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಎದುರಿಸಲು ಕಾಂಗ್ರೆಸ್ ನೇತೃತ್ವದಲ್ಲಿ 26 ಪಕ್ಷಗಳನ್ನು ಸೇರಿಸಿಕೊಂಡು 'ಇಂಡಿಯಾ' ಮೈತ್ರಿಕೂಟ ರಚಿಸಲಾಗಿದೆ. ಕಾಂಗ್ರೆಸ್ ಸೀಟು ಹಂಚಿಕೆ ಮಾಡಿಕೊಂಡು ವಿವಿಧ ಪಕ್ಷಗಳ ಜೊತೆ ಚುನಾವಣೆ ಎದುರಿಸಿದೆ. ಮತ್ತೊಮ್ಮೆ ಮೋದಿಯೇ ಅಧಿಕಾರಕ್ಕೆ ಬರುತ್ತಾರೆ ಎಂದು ಟೈಮ್ಸ್ ನೌ ಸಮೀಕ್ಷೆ ಈ ಹಿಂದೆ ಹೇಳಿತ್ತು. ಟೈಮ್ಸ್ ನೌ- ಇಟಿಜಿ ಸಮೀಕ್ಷೆಯ ಅಂಕಿಅಂಶಗಳ ಪ್ರಕಾರ, ಪ್ರಧಾನಿ ಮೋದಿ ಮ್ಯಾಜಿಕ್ ಮುಂದುವರಿಯಲಿದೆ. ಈಗಾಗಲೇ ಎರಡು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ಮೋದಿ ಮೂರನೇ ಬಾರಿಯೂ ಆಯ್ಕೆಯಾಗಲಿದ್ದಾರೆ. ಎನ್‌ಡಿಎ ಮೈತ್ರಿಕೂಟ ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿತ್ತು.
ಎನ್ ಡಿಎ ಮೈತ್ರಿ ಕೂಟ (ಬಿಜೆಪಿ) 358 ಸ್ಥಾನಗಳನ್ನ ಗೆಲ್ಲಲಿದ್ದು, ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟವು 153 ಸ್ಥಾನಗಳನ್ನು ಗೆಲುವ ನಿರೀಕ್ಷೆಯಿದೆ. ಇನ್ನೂ ಇತರೆ 33 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ಸಾಧ್ಯತೆ ಇದೆ ಎಂದು ಟೈಮ್ಸ್ ನೌ ಸಮೀಕ್ಷೆ ಹೇಳಿದೆ. ಟೈಮ್ಸ್ ನೌ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟವು ಹಲವು ರೀತಿಯಲ್ಲಿ ಪ್ರಯತ್ನಪಟ್ಟರೂ ಮೋದಿ ಮ್ಯಾಜಿಕ್‌ಗೆ ತಡೆಯೊಡ್ಡಲು ಸಾಧ್ಯವಿಲ್ಲ ಎಂದು ಸಮೀಕ್ಷೆ ಹೇಳಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications