Tirupati Laddu Row: ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ ಎಸ್‌ಐಟಿ ತಂಡ
ಪವಿತ್ರ ಕ್ಷೇತ್ರ ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಬಳಕೆ ವಿವಾದಕ್ಕೆ ಸಂಬಂಧಿಸಿದಂತೆ ಪರಿಶೀಲನೆಗಾಗಿ ಇಂದು ವಿಶೇಷ ತನಿಖಾ ತಂಡ ದೇವಸ್ಥಾನಕ್ಕೆ ಭೇಟಿ ನೀಡಿದೆ. ಆರು ಸದಸ್ಯರ ಎಸ್‌ಐಟಿ ತಂಡ ಇಂದು (ಡಿಸೆಂಬರ್ 14) ಬೆಳಗ್ಗೆ ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಆಗಮಿಸಿ ದೇವಸ್ಥಾನದ ಅಡುಗೆ ಕೋಣೆಯನ್ನು ಪರಿಶೀಲಿಸಿತು.
ಹೌದು... ಇಂದು ಆರು ಸದಸ್ಯರ ಎಸ್‌ಐಟಿ ತಂಡ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಅಡುಗೆ ಮನೆ ಮತ್ತು ಪ್ರಯೋಗಾಲಯವನ್ನು ಪರಿಶೀಲಿಸಿದೆ. ಇದೇ ವೇಳೆ ತಿರುಪತಿಯಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳ ಗುಣಮಟ್ಟ ಪರೀಕ್ಷೆ ನಡೆಸುವ ಪ್ರಯೋಗಾಲಯವನ್ನು ಕೂಡ ಪರಿಶೀಲನೆ ಮಾಡಲಾಗಿದೆ. ಜೊತೆಗೆ ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಂಡದ ಅಧಿಕಾರಿಗಳು ಗಮನಿಸಿದ್ದಾರೆ. ಹಿಟ್ಟಿನ ಗಿರಣಿಯಲ್ಲಿಯೂ ಎಸ್‌ಐಟಿ ತಂಡ ತಪಾಸಣೆ ನಡೆಸಿದೆ.

ಮೂರು ವಾರಗಳ ಹಿಂದೆ ಎಸ್‌ಐಟಿ ತಂಡವು ತಿರುಪತಿಗೆ ಭೇಟಿ ನೀಡಿ ಪವಿತ್ರ ಅನ್ನ ನೈವೇದ್ಯದಲ್ಲಿ (ಪ್ರಸಾದ) ಬಳಸುವ ತುಪ್ಪದ ಕಲಬೆರಕೆ ಬಗ್ಗೆ ತನಿಖೆ ನಡೆಸಿತ್ತು. ಸುಪ್ರೀಂ ಆದೇಶದ ಬೆನ್ನಲ್ಲೆ ತಂಡವು ತಿರುಪತಿ ಮತ್ತು ತಿರುಮಲದಲ್ಲಿ ವಿಸ್ತೃತ ತನಿಖೆ ನಡೆಸುತ್ತಿದೆ. ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಈ ತಪಾಸಣೆಯನ್ನು ನಡೆಸುತ್ತಿದೆ ಎಸ್‌ಐಟಿ ತಂಡ.
ಏನಿದು ಲಡ್ಡು ವಿವಾದ?
ಹಿಂದಿನ ವೈಎಸ್‌ಆರ್‌ಸಿಪಿ ಅವಧಿಯಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ನೀಡಲಾಗುತ್ತಿದ್ದ ಪ್ರಸಾದದ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಸೇರಿದಂತೆ ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿಕೆ ನೀಡಿದ ನಂತರ ತಿರುಪತಿ ಪ್ರಸಾದದ (ಲಡ್ಡುಗಳು) ಬಗ್ಗೆ ಗೊಂದಲ ಶುರುವಾಗಿದೆ.
ನಂತರ ಸುಪ್ರೀಂ ಕೋರ್ಟ್ ಲಡ್ಡು ಪ್ರಸಾದ ವಿಚಾರವಾಗಿ ಸಿಬಿಐ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿತ್ತು. ಈ ತಂಡ ರಾಜ್ಯ ಪೊಲೀಸ್ ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಅಧಿಕಾರಿಗಳನ್ನು ಒಳಗೊಂಡಿರುತ್ತದೆ.
ತಿರುಮಲದಲ್ಲಿ ರಾಜಕೀಯ ಹೇಳಿಕೆ ನಿಷೇಧ
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಎಂದು ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಯನ್ನು ನೀಡಿದ್ದರು. ಇದು ಆಂಧ್ರದಲ್ಲಿ ಮಾತ್ರವಲ್ಲದೆ ದೇಶದ ತಿರುಪತಿ ತಿಮ್ಮಪ್ಪನ ಭಕ್ತರ ಆಕ್ರೋಶಕ್ಕೆ ಗುರಿಯಾಗಿದೆ.
ಹೀಗಾಗಿ ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ಟ್ರಸ್ಟ್ ಬೋರ್ಡ್ ತಿರುಮಲದಲ್ಲಿ ರಾಜಕೀಯ ಹೇಳಿಕೆಗಳನ್ನು ನಿಷೇಧಿಸುವ ನಿರ್ಣಯವನ್ನು ಅಂಗೀಕರಿಸಿದ್ದು, ಉಲ್ಲಂಘಿಸುವವರ ವಿರುದ್ಧ ಮತ್ತು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.
ಘಟನೆ ಬಳಿಕ ಎಚ್ಚೆತ್ತುಕೊಂಡ ಟಿಟಿಡಿ ಟ್ರಸ್ಟ್ ಬೋರ್ಡ್ ಶ್ರೀವಾರಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟದ ತುಪ್ಪವನ್ನು ಬಳಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ತಿರುಮಲದ ಅನ್ನಮಯ್ಯ ಭವನದಲ್ಲಿ ಸೋಮವಾರ ಬಿಆರ್ ನಾಯ್ಡು ಅವರ ಅಧ್ಯಕ್ಷತೆಯಲ್ಲಿ ನಡೆದ ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ಟ್ರಸ್ಟ್ ಬೋರ್ಡ್‌ನ ಮೊದಲ ಸಭೆಯಲ್ಲಿ ಈ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಪಾಲಿಕೆ ಸದಸ್ಯರು 80 ಪ್ರಮುಖ ವಿಷಯಗಳ ಕುರಿತು ಚರ್ಚಿಸಿ ಹಲವು ನಿರ್ಣಯಗಳನ್ನು ಅಂಗೀಕರಿಸಿದ್ದಾರೆಂದು ತಿಳಿದು ಬಂದಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications