Tirupati Hundi: ತಿರುಮಲ ಶ್ರೀವಾರಿ ಹುಂಡಿಗೆ ಹಣದ ಮಳೆ.. ಅಕ್ಟೋಬರ್ ತಿಂಗಳಲ್ಲೂ ದಾಖಲೆ ಆದಾಯ!
ತಿರುಮಲ ಶ್ರೀವಾರಿ ದರ್ಶನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ಎರಡು ಬ್ರಹ್ಮೋತ್ಸವಗಳ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಇದರಿಂದ ತಿರುಮಲ ಶ್ರೀವಾರಿ ಹುಂಡಿಗೆ ಅಪಾರ ಆದಾಯ ಬಂದಿದೆ. ಅಕ್ಟೋಬರ್ ತಿಂಗಳಲ್ಲೂ ಶ್ರೀವಾರಿ ಹುಂಡಿಯ ಆದಾಯ 100 ಕೋಟಿ ರೂಪಾಯಿ ಆಗಿದೆ. ಕಳೆದ ತಿಂಗಳು (ಅಕ್ಟೋಬರ್) 21.75 ಲಕ್ಷ ಭಕ್ತರು ಶ್ರೀಗಳ ದರ್ಶನ ಪಡೆದಿದ್ದರು. ಒಟ್ಟು 8.30 ಲಕ್ಷ ಭಕ್ತರು ಸ್ವಾಮಿಗೆ ತಾಲನಿಲಗಳನ್ನು ಅರ್ಪಿಸಿ ಹರಕೆ ತೀರಿಸಿದರು.

ಟಿಟಿಡಿ ಪ್ರಕಾರ, ಅಕ್ಟೋಬರ್ ತಿಂಗಳು ಶ್ರೀವಾರಿ ಹುಂಡಿ ಮೂಲಕ 108.65 ಕೋಟಿ ರೂಪಾಯಿ ಸಂಗ್ರಹವಾಗಿದೆ. ಇದಲ್ಲದೆ ಅಕ್ಟೋಬರ್ ತಿಂಗಳಲ್ಲಿ 1.05 ಕೋಟಿ ಲಡ್ಡೂಗಳನ್ನು ಭಕ್ತರಿಗೆ ಟಿಟಿಡಿ ಮಾರಾಟ ಮಾಡಿದೆ. ಒಟ್ಟು 47.14 ಲಕ್ಷ ಭಕ್ತರು ಅನ್ನಪ್ರಸಾದ ಸ್ವೀಕರಿಸಿದ್ದಾರೆ.
ಕಳೆದ ವರ್ಷ ಮಾರ್ಚ್‌ನಿಂದ ತಿರುಮಲ ಶ್ರೀವಾರಿ ಹುಂಡಿಯ ಆದಾಯ 100 ಕೋಟಿ ರೂ.ಗಳ ಗಡಿ ತಲುಪುತ್ತಿದೆ. ಕೊರೊನಾದಿಂದಾಗಿ ಕಳೆದ ವರ್ಷ ಮಾರ್ಚ್‌ವರೆಗೆ ಭಕ್ತರ ದಂಡು ಅಷ್ಟಾಗಿ ಕಂಡುಬಂದಿರಲಿಲ್ಲ. ಅಂದಿನಿಂದ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಭಕ್ತಾದಿಗಳ ನೂಕುನುಗ್ಗಲು ಹೆಚ್ಚುತ್ತಿದೆ. ಹಬ್ಬ ಹಾಗೂ ವಾರಾಂತ್ಯದಲ್ಲಿ ಬೆಟ್ಟದಲ್ಲಿ ಜನಜಂಗುಳಿ ಇರುತ್ತದೆ. ಹೀಗಾಗಿ ಸ್ವಾಮಿಯ ಹುಂಡಿಯ ಆದಾಯವೂ ಹೆಚ್ಚುತ್ತಿದೆ. ಇದು ಸುಲಭವಾಗಿ 100 ಕೋಟಿ ರೂ. ಗಡಿ ಮುಟ್ಟುತ್ತಿದೆ.
ತಿರುಮಲ ತಿರುಪತಿ ದೇವಾಲಯವನ್ನು ಹಿಂದೂ ಧರ್ಮ ಗ್ರಂಥಗಳಲ್ಲಿ ವಿಷ್ಣು ದೇವನು ಕಲಿಯುಗದಲ್ಲಿ ವಾಸಿಸುವ ಐಹಿಕ ಸ್ಥಳವೆಂದು ವಿವರಿಸಲಾಗಿದೆ. ತಿರುಪತಿ ಬಾಲಾಜಿ ಅಥವಾ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯವು ಹಿಂದೂ ಪುರಾಣದ ಅತ್ಯಂತ ಪ್ರಮುಖ ಹೆಗ್ಗುರುತುಗಳಲ್ಲಿ ಇಂದಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಾವು ಈ ಅದ್ಬುತವಾದ ಹಾಗೂ ಪ್ರಭಾವಶಾಲಿಯಾದ ದೇವಾಲಯವನ್ನು ನೋಡಬಹುದು.
ತಿರುಪತಿ ಬಾಲಾಜಿ ದೇವಾಲಯವು ಭೂಮಿಯ ಮೇಲಿನ ಅತ್ಯಂತ ಜನಪ್ರಿಯ ದೇವಾಲಯವಾಗಿದ್ದು, ವರ್ಷದ ಯಾವುದೇ ದಿನ ಈ ದೇವಾಲಯಕ್ಕೆ ಭೇಟಿ ನೀಡಬಹುದು. ಲಕ್ಷಾಂತರ ಜನ ನಿತ್ಯ ತಿರುಪತಿಗೆ ಭೇಟಿ ನೀಡುತ್ತಾರೆ. ಇಲ್ಲಿ ಭಕ್ತರು ತಮ್ಮೆಲ್ಲಾ ಇಚ್ಚೆಯನ್ನು ಈಡೇರಿಸುವಂತೆ ಭಗವಂತನಲ್ಲಿ ಬೇಡಿಕೊಳ್ಳುತ್ತಾರೆ.
ತಿರುಪತಿ ಇತಿಹಾಸ
ವಿಜಯನಗರ ಸಾಮ್ರಾಜ್ಯದ ಅಂತ್ಯದ ನಂತರ, ದೇವಾಲಯವು ಜುಲೈ 1656 ರಲ್ಲಿ ಗೋಲ್ಕೊಂಡದ ಕೈಗೆ ಹೋಯಿತು. 19ನೇ ಶತಮಾನದ ಪೂರ್ವಾರ್ಧದಲ್ಲಿ ಬ್ರಿಟೀಷರು ದೇವಾಲಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದರು ಮತ್ತು ದೇವಾಲಯದ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಲಿಲ್ಲ. 1933 ರಲ್ಲಿ ಟಿಟಿಡಿ ಕಾಯಿದೆಯ ಪರಿಣಾಮವಾಗಿ ತಿರುಮಲ ತಿರುಪತಿ ದೇವಸ್ಥಾನಗಳ ರಚನೆಯಾಯಿತು.
ಇಲ್ಲಿನ ವೆಂಕಟೇಶ್ವರ ಸ್ವಾಮಿಯ ಮುಖ್ಯ ವಿಗ್ರಹವು ತುಂಬಾ ವಿಶಿಷ್ಟ ಮತ್ತು ಶಕ್ತಿಯುತವಾಗಿದೆ ಎಂದು ಹೇಳಲಾಗುತ್ತದೆ. ಆಕರ್ಷಕ ವಿಗ್ರಹವು ಹಲವಾರು ಪವಾಡದ ಲಕ್ಷಣಗಳನ್ನು ಹೊಂದಿದೆ. ಪ್ರತಿದಿನವೂ, ವಿಗ್ರಹವನ್ನು ಹೂವುಗಳಿಂದ, ಉಡುಪುಗಳಿಂದ ಮತ್ತು ಆಭರಣಗಳಿಂದಭವ್ಯವಾದ ಅಲಂಕರಿಸಲಾಗುತ್ತದೆ. ನಿತ್ಯ ವಿಶೇಷ ಪೂಜೆಗಳನ್ನು ಕೈಗೊಳ್ಳಲಾಗುತ್ತದೆ. ಇದರಿಂದಾಗಿ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯೂ ಅಧಿಕ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications