Tirupati January Ticket: ತಿರುಪತಿ ತಿಮ್ಮಪ್ಪನ ಸೇವೆ ಮಾಡಲು ಬಯಸುವಿರಾ..? ಇಲ್ಲಿದೆ ಅವಕಾಶ..
ನೀವೇನಾದರೂ ತಿರುಪತಿ ತಿಮ್ಮಪ್ಪನ ಸೇವೆ ಮಾಡಲು ಬಯಸಿದ್ದರೆ ಟಿಟಿಡಿ ಇದಕ್ಕೆ ಅವಕಾಶ ನೀಡಲಿದೆ. ತಿರುಪತಿಯಲ್ಲಿ ಸೇವೆ ಮಾಡಲು ಬಯಸುವ ಭಕ್ತರು ಟಿಟಿಡಿ ಸೂಚಿಸಿದ ಕೆಲ ನಿಯಮಗಳನ್ನು ಪಾಲಿಸಲು ಸಿದ್ಧರಿದ್ದರೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹಾಗಾದರೆ ಅರ್ಜಿ ಯಾವಾಗ? ಹೇಗೆ ಸಲ್ಲಿಸಬೇಕು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ತಿರುಮಲ ಶ್ರೀವಾರಿಯ ಭಕ್ತರಿಗೆ ಮುಖ್ಯವಾದ ಸೂಚನೆಯನ್ನು ಟಿಟಿಡಿ ನೀಡಿದೆ. ತಿರುಮಲ ತಿರುಪತಿ ದೇವಸ್ಥಾನಂ ಬೋರ್ಡ್ ಜನವರಿ 2025ರ ಶ್ರೀವಾರಿ ಸೇವಾ ಟಿಕೆಟ್ ಕೋಟಾವನ್ನು ಅಕ್ಟೋಬರ್ 19ರಂದು ಬಿಡುಗಡೆ ಮಾಡುತ್ತದೆ. ಟಿಕೆಟ್‌ಗಳ ಕೋಟಾವನ್ನು ಅಕ್ಟೋಬರ್ 19 ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಆನ್‌ಲೈನ್ ನೋಂದಣಿಯನ್ನು ಅಕ್ಟೋಬರ್ 21 ರಂದು ಬೆಳಿಗ್ಗೆ 10 ಗಂಟೆಯವರೆಗೆ ಮಾಡಬಹುದು ಎಂದು ಟಿಟಿಡಿ ತಿಳಿಸಿದೆ.

ಟಿಕೆಟ್ ಪಡೆದ ಭಕ್ತರು ಅಕ್ಟೋಬರ್ 23 ರಂದು ಮಧ್ಯಾಹ್ನ 12 ಗಂಟೆಯೊಳಗೆ ಹಣವನ್ನು ಪಾವತಿಸಬೇಕು. ಪಾವತಿಸಿದ ಭಕ್ತರಿಗೆ ಲಕ್ಕಿಡಿಪ್ ಮೂಲಕ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ. ಅಕ್ಟೋಬರ್ 22 ರಂದು ಬೆಳಿಗ್ಗೆ 10 ಗಂಟೆಗೆ ತಿರುಮಲ ಶ್ರೀವಾರಿ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ ಮತ್ತು ಸಹಸ್ರದೀಪಾಲಂಕರ ಸೇವಾ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.
ಅಲ್ಲದೆ, ಅಕ್ಟೋಬರ್ 22 ರಂದು ಮಧ್ಯಾಹ್ನ 3 ಗಂಟೆಗೆ ವರ್ಚುವಲ್ ಸೇವೆಗಳಿಗಾಗಿ ಟಿಟಿಡಿ ಜನವರಿ ಕೋಟಾ ಟಿಕೆಟ್‌ಗಳನ್ನು ಬಿಡುಗಡೆ ಮಾಡುತ್ತದೆ. ಜನವರಿ ತಿಂಗಳಿಗೆ ಸಂಬಂಧಿಸಿದಂತೆ, ಶ್ರೀವಾರಿ ಅಂಗಪ್ರದಕ್ಷಿಣಂ ಟೋಕನ್‌ಗಳ ಕೋಟಾವನ್ನು ಅಕ್ಟೋಬರ್ 23 ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.
ಅಕ್ಟೋಬರ್ 23 ರಂದು ಮಧ್ಯಾಹ್ನ 3 ಗಂಟೆಗೆ ಟಿಟಿಡಿ ವಯೋವೃದ್ಧರು, ಅಂಗವಿಕಲರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ಉಚಿತ ವಿಶೇಷ ದರ್ಶನ ಟಿಕೆಟ್‌ಗಳ ಕೋಟಾವನ್ನು ಬಿಡುಗಡೆ ಮಾಡಲಿದೆ. ಅಲ್ಲದೆ, ಜನವರಿ 2025 ರ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳ ಕೋಟಾವನ್ನು ಅಕ್ಟೋಬರ್ 24 ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ರೂಮ್ ಕೋಟಾ ಅಕ್ಟೋಬರ್ 24 ರಂದು ಮಧ್ಯಾಹ್ನ 3 ಗಂಟೆಗೆ ಬಿಡುಗಡೆಯಾಗಲಿದೆ. ಶ್ರೀವಾರಿ ದರ್ಶನ ಮತ್ತು ಸೇವಾಟಿಕೆಟ್‌ಗಳನ್ನು ಅಧಿಕೃತ ವೆಬ್‌ಸೈಟ್ ಮೂಲಕ ಬುಕ್ ಮಾಡಲು ಟಿಟಿಡಿ ಸಲಹೆ ನೀಡಿದೆ.
ಅಕ್ಟೋಬರ್ 17 ರಂದು ಹುಣ್ಣಿಮೆ ಗರುಡ ಸೇವೆ
ಮತ್ತೊಂದೆಡೆ ಪ್ರತಿ ತಿಂಗಳಂತೆ ಈ ತಿಂಗಳೂ ತಿರುಮಲದಲ್ಲಿ ಪೌರ್ಣಮಿ ಗರುಡ ಸೇವೆ ನಡೆಯಲಿದೆ. ಅಕ್ಟೋಬರ್ 17 ರಂದು ಅಂದರೆ ಇಂದು ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ಹುಣ್ಣಿಮೆ ಗರುಡಸೇವೆ ನಡೆಯಲಿದೆ. ಪ್ರತಿ ತಿಂಗಳ ಹುಣ್ಣಿಮೆಯಂದು ಟಿಟಿಡಿ ಗರುಡ ಸೇವೆ ಆಯೋಜಿಸುವುದು ವಾಡಿಕೆಯಾಗಿದ್ದು, ಇದರ ಅಂಗವಾಗಿ ಇಂದು ಸಂಜೆ 7 ರಿಂದ 9 ಗಂಟೆಯವರೆಗೆ ಮಲಯಪ್ಪಸ್ವಾಮಿ ಗರುಡ ತಿರುಮದ ಬೀದಿಗಳಲ್ಲಿ ಸಂಚರಿಸಿ ಭಕ್ತರಿಗೆ ದರ್ಶನ ನೀಡಲಿದ್ದಾರೆ. ಪೌರ್ಣಮಿ ಗರುಡ ಸೇವೆಯಲ್ಲಿ ಪಾಲ್ಗೊಳ್ಳಲು ಭಕ್ತ ಸಾಗರ ಹರಿದು ಬರುತ್ತದೆ.












Click it and Unblock the Notifications