ಅನ್ ಲಾಕ್ 1.0: ಭಕ್ತರಿಗೆ ತಿರುಪತಿ ದೇವಾಲಯದ ಮಹತ್ವದ ಪ್ರಕಟಣೆ

ತಿರುಪತಿ, ಜೂನ್ 2: ಕೇಂದ್ರ ಸರಕಾರದ ಮಾರ್ಗಸೂಚಿಯಂತೆ, ವಿಶ್ವದ ಶ್ರೀಮಂತ ಹಿಂದೂ ದೇವಾಲಯ, ತಿರುಮಲ ವೆಂಕಟೇಶ್ವರ ಸ್ವಾಮಿಯ ದೇವಾಲಯವನ್ನು ಭಕ್ತರಿಗೆ ಮುಕ್ತವಾಗಿಸಲು, ಆಂಧ್ರ ಪ್ರದೇಶ ಸರಕಾರ ಅನುಮತಿ ನೀಡಿದೆ.

ದೇವಾಲಯ ಆರಂಭಿಸಲು ಟಿಟಿಡಿ, ಸರಕಾರಕ್ಕೆ ಮನವಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಜಗನ್ ಸರಕಾರ, ಮಾರ್ಗಸೂಚಿಯಂತೆ, ಜೂನ್ ಎಂಟರಿಂದ ದೇಗುಲ ತೆರೆಯಲು ಅವಕಾಶ ಕಲ್ಪಿಸಿದೆ.

ಆರಂಭದ ದಿನಗಳಲ್ಲಿ ಎಲ್ಲಾ ಭಕ್ತರಿಗೆ ದರ್ಶನಕ್ಕೆ ಅನುಮತಿ ನೀಡುವುದಿಲ್ಲ ಎಂದು ಟಿಟಿಡಿ ಹೇಳಿದೆ. ಮೊದಲು ದೇವಸ್ಥಾನದ ಸಿಬ್ಬಂದಿ ಮತ್ತು ಸ್ಥಳೀಯರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಟಿಟಿಡಿ ಹೇಳಿದೆ.

Tirupati Venkateshwara Temple: Devotees Will Allowed For Darshan In Phased Manner From June 8

ಸಾಮಾನ್ಯ ದಿನಗಳಲ್ಲಿ ಸುಮಾರು ಒಂದು ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇದನ್ನು 25-30ಸಾವಿರಕ್ಕೆ ಇಳಿಸಲು ಟಿಟಿಡಿ ನಿರ್ಧರಿಸಿದೆ. ಪ್ರತಿ ಗಂಟೆಗೆ ಇಂತಿಷ್ಟು ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ದೇವಾಲಯದಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಸಿಬ್ಬಂದಿಗಳಿದ್ದಾರೆ. ಅವರನ್ನೆಲ್ಲಾ ಭಕ್ತರ ಹಾಗೇ ಕ್ಯೂನಲ್ಲಿ ನಿಲ್ಲಿಸಿ ತರಬೇತಿ ನೀಡಲಾಗುತ್ತಿದೆ ಎಂದು ಟಿಟಿಡಿ ಹೇಳಿದೆ.

ಸೋಷಿಯಲ್ ಡಿಸ್ಟನ್ಸ್, ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಮುಂತಾದವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಬೇರೆ ರಾಜ್ಯದ ಭಕ್ತರಿಗೆ ಸದ್ಯ ದರ್ಶನಕ್ಕೆ ಅವಕಾಶ ಕಲ್ಪಿಸುವುದು ಕಷ್ಟವಾಗುತ್ತದೆ, ಎಲ್ಲರೂ ಸಹಕರಿಸಬೇಕೆಂದು ಟಿಟಿಡಿ ಮನವಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+