ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಚಿಪುರಂನಲ್ಲಿಂದು ಕಂಚೀಶ್ರೀಗಳಿಗೆ ಅಂತಿಮ ವಿದಾಯ

|
Google Oneindia Kannada News

ಕಾಂಚಿಪುರಂ, ಮಾರ್ಚ್ 01: ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಂಚಿ ಕಾಮಕೋಟಿ ಪೀಠದ 69 ನೇ ಜಗದ್ಗುರುಗಳಾಗಿದ್ದ ಶ್ರೀ ಜಯೇಂದ್ರ ಸರಸ್ವತಿ ಸ್ವಾಮಿಗಳು(82) ನಿನ್ನೆ(ಫೆ.28) ಅಸ್ತಂಗತರಾದರು. ಅವರ ಅಂತ್ಯ ಸಂಸ್ಕಾರ ಇಂದು(ಮಾ.01) ನಡೆಯಲಿದ್ದು, ಕಂಚಿ ಶಂಕರ ಮಠದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಬೆಳಿಗ್ಗೆ 7:30 ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಬೆಳಿಗ್ಗೆ 8 ಕ್ಕೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮಠದ ಮೂಲಗಳು ತಿಳಿಸಿವೆ.

TN: Thousands pay homage to Kanchi Shankaracharya Jayendra Saraswati

ಕಂಚಿ ಕಾಮಕೋಟಿ ಪೀಠದ ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿ ಅಸ್ತಂಗತಕಂಚಿ ಕಾಮಕೋಟಿ ಪೀಠದ ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿ ಅಸ್ತಂಗತ

ನಿನ್ನೆಯಿಂದ ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಸ್ವಾಮೀಜಿಯವರ ಅಂತಿಮ ದರ್ಶನ ಪಡೆದಿದ್ದಾರೆ.

1994 ರಲ್ಲಿ ಕಂಚಿ ಕಾಮಕೋಟಿ ಪೀಠದ 69ನೇ ಜಗದ್ಗುರುಗಳಾಗಿ ಅವರು ಪೀಠಾರೋಹಣ ಮಾಡಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಫೆ.25 ರಂದು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬೆಳಗ್ಗೆ ಇಹಲೋಕ ತ್ಯಜಿಸಿದ್ದರು.

English summary
Scores of people gathered here to pay their last respects to Kanchi Shankaracharya Jayendra Saraswati, who passed away on Wednesday(Feb 28). The body of the pontiff will remain for public viewing until 7:30 a.m. today, following which rituals will begin at around 8 a.m.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X