ತಬ್ಲಿಘಿ ಜಮಾತ್‌ನಲ್ಲಿ ರೊಹಿಂಗ್ಯಾ ಮುಸ್ಲಿಮರು ಭಾಗಿ: ಪರೀಕ್ಷೆಗೆ ಸೂಚನೆ
ನವದೆಹಲಿ, ಏಪ್ರಿಲ್ 18: ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ರೋಹಿಂಗ್ಯಾ ಮುಸ್ಲಿಮರೂ ಕೂಡ ಪಾಲ್ಗೊಂಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ದೇಶದಲ್ಲಿ ಕೊರೊನಾ ಸೋಂಕು ಹರಡುತ್ತಿರಲು ತಬ್ಲಿಘಿ ಜಮಾತ್ ಹಾಟ್‌ಸ್ಪಾಟ್ ಆಗಿತ್ತು. ಮ್ಯಾನ್ಮಾರ್ ನಿಂದ ವಲಸೆ ಬಂದಿರುವ ರೊಹಿಂಗ್ಯಾ ಮುಸ್ಲಿಮರೂ ಕೂಡ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಎಲ್ಲರನ್ನೂ ಪರೀಕ್ಷೆಗೊಳಪಡಿಸುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಶುಕ್ರವಾರ ಸೂಚನೆ ನೀಡಿದೆ.
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ತಬ್ಲಿಘಿ ಜಮಾತ್ ಹಮ್ಮಿಕೊಕಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾರತದಲ್ಲಿರುವ ರೊಹಿಂಗ್ಯಾ ಮುಸ್ಲಿಮರು ಸಾಕಷ್ಟು ಸಂಖ್ಯೆಯಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ರೊಹಿಂಗ್ಯಾ ಮುಸ್ಲಿಮರನ್ನು ಕೊರೋನಾ ಪತ್ತೆ ಪರೀಕ್ಷೆಗೊಳಪಡಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಗೃಹ ಸಚಿವಾಲಯ ತಿಳಿಸಿದೆ.
ಪ್ರಸಕ್ತ ದೆಹಲಿ, ಜಮ್ಮು, ಹೈದರಾಬಾದ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ 40,000ಕ್ಕೂ ಹೆಚ್ಚು ರೊಹಿಂಗ್ಯಾ ವಲಸಿಗರು ವಾಸಿಸುತ್ತಿದ್ದಾರೆ.












Click it and Unblock the Notifications