ಇಂದು ಡಾ. ಶಿವಕುಮಾರ ಶ್ರೀಗಳ 117ನೇ ಜಯಂತಿ: ಮೋದಿ ನಮನ

ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ಖ್ಯಾತಿವೆತ್ತ ಸಿದ್ದಗಂಗೆಯ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ ಹಾಗೂ ಗುರುವಂದನ ಮಹೋತ್ಸವ ಇಂದು ಸಿದ್ದಗಂಗಾ ಮಠದಲ್ಲಿ ನಡೆಯುತ್ತಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ನಮನ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಶಿವಕುಮಾರ ಶ್ರೀಗಳ 117ನೇ ಜಯಂತಿ ಹಿನ್ನೆಲೆ ಎಕ್ಸ್ ಮೂಲಕ ಕನ್ನಡದಲ್ಲಿ ಬರೆಯುವ ಮೂಲಕ ನಮನ ಸಲ್ಲಿಸಿದ್ದಾರೆ. 'ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ ಮಾನವೀಯ ಸೇವೆಗೆ ಅತ್ಯುನ್ನತ ಉದಾಹರಣೆಯಾಗಿದೆ. ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ' ಎಂದು 'ಎಕ್ಸ್‌' ನಲ್ಲಿ ಬರೆದಿದ್ದಾರೆ.

Today 117th birth anniversary of Shivakumar swami Modi messege

ತುಮಕೂರು ಶ್ರೀಮಠದಲ್ಲಿ ಬೆಳಗ್ಗೆಯ ಕಾರ್ಯಕ್ರಮವನ್ನು ಪತಂಜಲಿ ಯೋಗಪೀಠದ ಬಾಬಾ ರಾಮದೇವ್ ಉದ್ಘಾಟನೆ ಮಾಡಿದರು. ಸಿದ್ದಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

ಜೊತೆಗೆ ಮುಂಡರಗಿ ಅನ್ನದಾನೇಶ್ವರ ಮಠಾಧ್ಯಕ್ಷ ಡಾ. ಅನ್ನದಾನೇಶ್ವರ ಸ್ವಾಮೀಜಿ, ಧಾರವಾಡ ಶ್ರೀ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ, ಗದಗದ ಶ್ರೀ ವೀರೇಶ್ವರ ಪುಣ್ಯಾಶ್ರಮದ ಅಧ್ಯಕ್ಷರಾದ ಶ್ರೀ ಕಲ್ಲಯ್ಯ ಅಜ್ಜನವರು, ಸಿದ್ದಗಂಗಾ ಮಠದ ಉತ್ತರಾಧಿಕಾರಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಅವರೂ ಈ ವೇಳೆ ಉಪಸ್ಥಿತರಿದ್ದರು.

ಈ ದಿನ ಆರು ಕಡೆ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಒಂದೇ ಬಾರಿಗೆ ಮೂವತ್ತು ಸಾವಿರ ಭಕ್ತರು ಕುಳಿತು ಊಟ ಮಾಡುವ ವ್ಯವಸ್ಥೆ ಕೂಡ ಮಾಡಲಾಗಿದೆ. ಬೆಳಗ್ಗೆಯಿಂದ ರಾತ್ರಿವರೆಗೂ ದಾಸೋಹ ನಡೆಯಲಿದೆ.

Today 117th birth anniversary of Shivakumar swami Modi messege

ಇದುವರೆಗೆ 128 ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿರುವ ಸಿದ್ದಗಂಗಾ ಶ್ರೀಗಳು, ಎಪ್ಪತ್ತರ ದಶಕದ ಸುಮಾರಿನಲ್ಲಿ ಎರಡು ಸಾವಿರ ವಿದ್ಯಾರ್ಥಿಗಳ ಮೂಲಕ ಅಕ್ಷರ ದಾಸೋಹ ಆರಂಭಿಸಿದ್ದರು.ಭಕ್ತರು ಬೆಳೆದರೆ, ಮಠ ಬೆಳೆಯುತ್ತದೆ, ಮಠ ಬೆಳೆದರೆ ನಮ್ಮಂತಹ ಸ್ವಾಮೀಜಿಗಳು ಬೆಳೆಯುತ್ತಾರೆ ಎನ್ನುತ್ತಿದ್ದ ಸಿದ್ದಗಂಗಾ ಶ್ರೀಗಳು, ತಮ್ಮ ಪ್ರವಚನ ಮತ್ತು ಭಾಷಣದಲ್ಲಿ ಈ ರೀತಿಯ ಹಲವಾರು ವಾಣಿಗಳನ್ನು ಹೇಳುತ್ತಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+