Toll Fee Hike: ಸೋಮವಾರದಿಂದ ದೇಶಾದ್ಯಂತ ಟೋಲ್ ದರ ಹೆಚ್ಚಳ
ಸೋಮವಾರದಿಂದ ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕವನ್ನು 3-5% ರಷ್ಟು ಹೆಚ್ಚಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಕಾರಣದಿಂದಾಗಿ ಏಪ್ರಿಲ್‌ನಲ್ಲಿ ವಾರ್ಷಿಕ ಹೆಚ್ಚಳವನ್ನು ತಡೆ ಹಿಡಿಯಲಾಗಿತ್ತು.
ಭಾರತದಲ್ಲಿನ ಟೋಲ್ ಶುಲ್ಕಗಳನ್ನು ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಪರಿಷ್ಕರಿಸಲಾಗುತ್ತದೆ ಮತ್ತು ಹೆದ್ದಾರಿ ನಿರ್ವಾಹಕರು ಸೋಮವಾರದಿಂದ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ 3% ರಿಂದ 5% ರಷ್ಟು ಹೆಚ್ಚಳ ಮಾಡಲಿದ್ದು, ಸ್ಥಳೀಯ ಪತ್ರಿಕೆಗಳಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ವರದಿಯಾಗಿದೆ.

"ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿದಿದ್ದು, ನೀತಿ ಸಂಹಿತೆ ಕಾರಣ ತಡೆಹಿಡಿಯಲಾದ ಬಳಕೆದಾರರ ಶುಲ್ಕ ದರಗಳ ಪರಿಷ್ಕರಣೆಯು ಜೂನ್ 3 ರಿಂದ ಜಾರಿಗೆ ಬರಲಿದೆ" ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಪ್ರಯಾಣಿಕರಿಗೆ ಹೆಚ್ಚಿನ ಹೊರೆ
ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣೆಗೆ ಟೋಲ್ ಶುಲ್ಕಗಳು ಮತ್ತು ಇಂಧನ ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಳವು ಸಹಾಯ ಮಾಡುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿರೋಧ ಪಕ್ಷಗಳು ಮತ್ತು ಅನೇಕ ವಾಹನ ಚಾಲಕರು ವಾರ್ಷಿಕ ಶುಲ್ಕಗಳ ಏರಿಕೆಯಿಂದ ಕೋಪಗೊಂಡಿದ್ದಾರೆ. ಟೋಲ್ ದರ ಹೆಚ್ಚಳದಿಂದ ಅಗತ್ಯ ಸರಕುಗಳ ಸಾರಿಗೆ ವೆಚ್ಚ ಹೆಚ್ಚಾಗುತ್ತದೆ ಮತ್ತು ಪ್ರಯಾಣಿಕರಿಗೆ ಹೊರೆಯಾಗಿದೆ ಎಂದು ಹೇಳಿದರು.
ಐಆರ್‌ಬಿ ಇನ್‌ಫ್ರಾಸ್ಟ್ರಕ್ಚರ್ ಡೆವಲಪರ್ಸ್ ಮತ್ತು ಅಶೋಕ್ ಬಿಲ್ಡ್‌ಕಾನ್ ಲಿಮಿಟೆಡ್‌ನಂತಹ ಟೋಲ್ ಪ್ಲಾಜಾಗಳನ್ನು ನಿರ್ವಹಣೆ ಮಾಡುವವರು ಹೆಚ್ಚಿನ ಲಾಭ ಪಡೆಯಲಿದ್ದಾರೆ.
ಭಾರತ ಕಳೆದ ದಶಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ವಿಸ್ತರಣೆ ಮತ್ತು ಅಭಿವೃದ್ಧಿಗೆ ಶತಕೋಟಿ ಡಾಲರ್‌ಗಳನ್ನು ಹೂಡಿಕೆ ಮಾಡಿದೆ, ಸುಮಾರು 146,000 ಕಿಲೋಮೀಟರ್‌ಗಳಷ್ಟು ಹೆದ್ದಾರಿ ನಿರ್ಮಿಸಲಾಗಿದೆ.
2018/19 ರಲ್ಲಿ 252 ಶತಕೋಟಿಯಿಂದ 2022/23 ಹಣಕಾಸು ವರ್ಷದಲ್ಲಿ 540 ಶತಕೋಟಿ ರೂಪಾಯಿಗಳಿಗೆ ಟೋಲ್ ಸಂಗ್ರಹಣೆ ಹೆಚ್ಚಿದೆ.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications