ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್‌ಡೌನ್: ಇಂದಿನಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಆರಂಭ

|
Google Oneindia Kannada News

ಮುಂಬೈ, ಏಪ್ರಿಲ್ 20: ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಇಂದಿನಿಂದ ಪುನರಾರಂಭಗೊಂಡಿದೆ.

ಕೊರೊನಾ ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಇಂದಿನಿಂದ ಮತ್ತೆ ಆರಂಭವಾಗಿದೆ.

ಸ್ಥಗಿತಗೊಂಡ ಆರ್ಥಿಕ ಚಟುವಟಿಕೆಗಳನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಭಾರತವು ಇಂದಿನಿಂದ ಕೊರೊನಾವೈರಸ್ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಿಸುತ್ತಿರುವ ಭಾಗವಾಗಿ ಈ ಉಪಕ್ರಮ ಜಾರಿಯಾಗಿದೆ.

ಮಾರ್ಚ್ 24 ರಂದು 21 ದಿನಗಳ ರಾಷ್ಟ್ರವ್ಯಾಪಿ ಲಾಕ್ ಡೌನ್ ಘೋಷಣೆಯಾದ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಿತ್ತು.

ಮುಂಬೈನಲ್ಲಿ ಮಾಸ್ಕ್‌ ಧರಿಸಿ ನೌಕರರ ಆಗಮನ

ಮುಂಬೈನಲ್ಲಿ ಮಾಸ್ಕ್‌ ಧರಿಸಿ ನೌಕರರ ಆಗಮನ

ಮುಂಬೈನ ವಾಶಿ, ನಾಗ್ಪುರದ ಬೋರ್ಖೆಡಿ, ಗುರುಗ್ರಾಮ್, ಚೆನ್ನೈನ ಪುರೂರ್ ವಾರಣಾಸಿಯ ದಾಫಿಯಲ್ಲಿ ಟೋಲ್ ಪ್ಲಾಜಾಗಳು ಚಾಲನೆಗೊಂಡಿದ್ದು ಅಲ್ಲಿನ ನೌಕರರು ಕೈಗವಸು ಮತ್ತು ಮಾಸ್ಕ್ ಧರಿಸಿರುವುದು ಕಂಡುಬಂದಿದೆ.

ಮೇ 3ರವರೆಗೆ ಲಾಕ್‌ಡೌನ್ ವಿಸ್ತರಣೆ

ಮೇ 3ರವರೆಗೆ ಲಾಕ್‌ಡೌನ್ ವಿಸ್ತರಣೆ

ಭಾರತವು ರಾಷ್ಟ್ರವ್ಯಾಪಿ ಲಾಕ್ ಡೌನ್ ಆಗಿದ್ದು ಏಪ್ರಿಲ್ 14 ರಂದು ಮತ್ತೊಮ್ಮೆ ಲಾಕ್ ಡೌನ್ ವಿಸ್ತರಣೆಯಾಗಿದೆ. ದೇಶದಲ್ಲಿ 500 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಕೊರೋನಾವೈರಸ್ ಹರಡುವಿಕೆ ತಡೆಗಾಗಿ ಕೇಂದ್ರ ಸರ್ಕಾರ ಈ ಮಹತ್ವದ ಕ್ರಮ ತೆಗೆದುಕೊಂಡಿದೆ. ಏಪ್ರಿಲ್ 14 ರಂದು ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 3 ರವರೆಗೆ ಲಾಕ್‌ಡೌನ್ ವಿಸ್ತರಿಸುವುದಾಗಿ ಘೋಷಿಸಿದರು ಮತ್ತು ಏಪ್ರಿಲ್ 20 ರ ನಂತರ ಹಾಟ್‌ಸ್ಪಾಟ್ ಇಲ್ಲದ ಸ್ಥಳಗಳಲ್ಲಿ ನಿರ್ಬಂಧವನ್ನು ಸಡಿಲಿಕೆ ಮಾಡುವುದಾಗಿ ಅವರು ಹೇಳಿದ್ದರು.

ನಗದು-ಟ್ಯಾಗ್‌ಲೈನ್ ಕಾರ್ಯನಿರ್ವಹಣೆ

ನಗದು-ಟ್ಯಾಗ್‌ಲೈನ್ ಕಾರ್ಯನಿರ್ವಹಣೆ

"ನಾವು ಕೇವಲ 2 ಮಾರ್ಗಗಳನ್ನು (ನಗದು ಮತ್ತು ಟ್ಯಾಗ್ ಲೇನ್) ಮಾತ್ರ ನಿರ್ವಹಿಸುತ್ತಿದ್ದೇವೆ. ಟೋಲ್ ಬೂತ್ ನಿರ್ವಾಹಕರು ಮಾಸ್ಕ್ ಗಳು ಮತ್ತು ಸ್ಯಾನಿಟೈಸರ್ಗಳನ್ನು ಬಳಸುತ್ತಿದ್ದಾರೆ" ಎಂದು ವಾರಣಾಸಿಯ ರಾಷ್ಟ್ರೀಯ ಹೆದ್ದಾರಿ 2 ರಲ್ಲಿರುವ ದಾಫಿ ಟೋಲ್ ಪ್ಲಾಜಾದಲ್ಲಿ ಉಪ ಟೋಲ್ ಪ್ಲಾಜಾ ವ್ಯವಸ್ಥಾಪಕ ಹೇಳಿದ್ದಾರೆ.

ಹೊಸ ಮಾರ್ಗಸೂಚಿಗಳ ಬಿಡುಗಡೆ

ಹೊಸ ಮಾರ್ಗಸೂಚಿಗಳ ಬಿಡುಗಡೆ

ಆಯ್ದ ಆರ್ಥಿಕ ಚಟುವಟಿಕೆಗಳ ಪಟ್ಟಿಗಾಗಿ ದೇಶಕ್ಕೆ ಹೊಸ ಲಾಕ್‌ಡೌನ್-ಮಾರ್ಗಸೂಚಿಗಳನ್ನು ಏಪ್ರಿಲ್ 15 ರಂದು ಗೃಹ ಸಚಿವಾಲಯ ಬಿಡುಗಡೆ ಮಾಡಿದೆ. ಇದು ಭಾರತದ ಕೊಕೊನಾ ಪರಿಸ್ಥಿತಿಯ ಪರಿಶೀಲನೆಯ ನಂತರ ಏಪ್ರಿಲ್ 20 ರ ನಂತರ ಜಾರಿಗೆ ಬರಲಿದೆ.

English summary
NHAI to resume toll collection on national highways from April 20. The NHAI had rolled out the electronic toll collection programme across India in December on its over 500 toll plazas while doubling toll charges from the vehicles entering FASTag lanes without the tag.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X