ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ಮೈಲಿಗಲ್ಲು ನಿರ್ಮಿಸಿದ 2018 ರ ಸುಪ್ರೀಂ ಐತಿಹಾಸಿಕ ತೀರ್ಪುಗಳು

|
Google Oneindia Kannada News

ನವದೆಹಲಿ, ಡಿಸೆಂಬರ್ 06: ಭಾರತದ ನ್ಯಾಯಾಂಗದ ಇತಿಹಾಸದಲ್ಲಿ 2018 ನ್ನು ಸುವರ್ಣ ವರ್ಷವೆಂದೇ ಕರೆದರೂ ತಪ್ಪಿಲ್ಲ. ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ, ಸಲಿಂಗಕಾಮ ಅಪರಾಧವಲ್ಲ, ಆಧಾರ್ ಸಾಂವಿಧಾನಿಕ ಮಾನ್ಯತೆ ಸೇರಿದಂತೆ ಹತ್ತು ಹಲವು ಮಹತ್ವದ ತೀರ್ಪುಗಳನ್ನು ಈ ವರ್ಷ ಸುಪ್ರೀಂ ಕೋರ್ಟ್ ನೀಡಿದೆ.

ಆಗಿನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ತಮ್ಮ ನಿವೃತ್ತಿಗೂ ಮುನ್ನ ನೀಡಿದ ಈ ಎಲ್ಲ ತೀರ್ಪುಗಳೂ ದೇಶದ ನ್ಯಾಯಾಂಗ ವ್ಯವಸ್ಥೆಯ ಹೊಸ ಮೈಲಿಗಲ್ಲು ಎನ್ನಿಸಿದವು.

ಸಹಮತದ ಸಲಿಂಗಕಾಮ ಅಪರಾಧವಲ್ಲ: ಸುಪ್ರೀಂ ತೀರ್ಪಿಗೆ ಗಣ್ಯರೇನಂತಾರೆ? ಸಹಮತದ ಸಲಿಂಗಕಾಮ ಅಪರಾಧವಲ್ಲ: ಸುಪ್ರೀಂ ತೀರ್ಪಿಗೆ ಗಣ್ಯರೇನಂತಾರೆ?

ವರ್ಷಾರಂಭದಲ್ಲಿ ಮುಖ್ಯನ್ಯಾಯಮೂರ್ತಿಗಳ ವಿರುದ್ಧ ನಾಲ್ವರು ಹಿರಿಯ ನ್ಯಾಯಾಧೀಶರು ಪತ್ರಿಕಾ ಗೋಷ್ಠಿ ನಡೆಸಿ, ನ್ಯಾಯಾಂಗದ ಬಗ್ಗೆ ಜನಸಾಮಾನ್ಯನಲ್ಲಿ ಅನುಮಾನ ಹುಟ್ಟುವ ಸನ್ನಿವೇಶ ಸೃಷ್ಟಿಸಿದ್ದರು. ಆದರೆ ಆ ಎಲ್ಲ ವಿವಾದಗಳನ್ನು ಮರೆಸುವಂತೆ ಈ ವರ್ಷ ಸುಪ್ರೀಂ ಕೋರ್ಟ್ ನೀಡಿದ ತೀರ್ಪುಗಳು ಮಹತ್ವದ 8 ತೀರ್ಪುಗಳಯತ್ತ ಒಂದು ಅವಲೋಕನ ಇಲ್ಲಿದೆ.

1.ಸಹಮತದ ಸಲಿಂಗಕಾಮ ಅಪರಾಧವಲ್ಲ!

1.ಸಹಮತದ ಸಲಿಂಗಕಾಮ ಅಪರಾಧವಲ್ಲ!

ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್ 377 ರ ಪ್ರಕಾರ ಸಲಿಂಗಕಾಮವನ್ನು ಅಪರಾಧ ಎಂದು ಪರಿಗಣಿಸಲಾಗುತ್ತಿತ್ತು. ಈ ಅಪರಾಧಕ್ಕೆ 10 ವರ್ಷಗಳ ವರೆಗೆ ಶಿಕ್ಷೆಯನ್ನೂ ನೀಡಬಹುದಿತ್ತು. ಇದರಿಂದ ಸಲಿಂಗಿಗಳ ಹಕ್ಕಿಗೆ ಧಕ್ಕೆ ಬರುತ್ತದೆ ಎಂದು ದೂರಿ, ಸೆಕ್ಷನ್ 377 ಅನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚೃಣೆ ನಡೆಸಿದ ಸುಪ್ರೀಂ ಕೋರ್ಟ್ ಜುಲೈ 17 ರಂದು ಸೆಕ್ಷನ್ 377 ಅನ್ನು ಅಸಿಂಧು ಎಂದು ಉಚ್ಚರಿಸಿ, ಸಹಮತದ ಸಲಿಂಗ ಕಾಮ ಅಪರಾಧವಲ್ಲ ಎಂದಿತ್ತು.

ಆಧಾರ್ ಸಾಂವಿಧಾನಿಕ ಮಾನ್ಯತೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ಆಧಾರ್ ಸಾಂವಿಧಾನಿಕ ಮಾನ್ಯತೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಆಧಾರ್ ತೀರ್ಪು

ಆಧಾರ್ ತೀರ್ಪು

ಸಾರ್ವತ್ರಿಕ ಗುರುತಿನ ಚೀಟಿಯಾದ ಆಧಾರ್ ಮಾನ್ಯತೆಯನ್ನು ಸೆಪ್ಟೆಂಬರ್ 26 ರಂದು ನೀಡಿದ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು. ಆಧಾರ್ ಅನ್ನು ಎಲ್ಲಾ ಸರ್ಕಾರಿ ಯೋಜನೆಗಳಿಗೂ ಕಡ್ಡಾಯವಾಗಿ ಬಳಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದರೂ, ಹಲವು ಕಾರ್ಯಗಳಿಗೆ ಆಧಾರ್ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಖಾಸಗೀತನ ಮೂಲಭೂತ ಹಕ್ಕು ಎಂದು ಕಳೆದ ವರ್ಷ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಈ ತೀರ್ಪಿಗೆ ಪೂರಕವಾಗುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.

3. SC/ST ಬಡ್ತಿ ಮೀಸಲಾತಿ

3. SC/ST ಬಡ್ತಿ ಮೀಸಲಾತಿ

ಎಸ್ಸಿ ಎಸ್ಟಿ ಬಡ್ತಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣದ ತೀರ್ಪನ್ನು ಸೆಪ್ಟೆಂಬರ್ 26 ರಂದು ನೀಡಿದ ಸರ್ವೋಚ್ಚ ನ್ಯಾಯಾಲಯ, ಬಡ್ತಿ ನೀಡುವಾಗ ಮೀಸಲಾತಿ ಅಗತ್ಯವಿಲ್ಲ ಎಂದಿತ್ತು. ಪ್ರಕರಣವನ್ನು ಸಪ್ತ ಸದಸ್ಯ ಪೀಠಕ್ಕೆ ವರ್ಗಾವಣೆ ಮಾಡಲು ನಿರಾಕರಸಿದ್ದ ನ್ಯಾಯಾಲಯ SC/ST ಮತ್ತು OBC ಉದ್ಯೋಗಿಗಳ ದತ್ತಾಂಶ ಸಂಗ್ರಹಿಸುವ ಅಗತ್ಯವಿಲ್ಲ, ಬಡ್ತಿ ಮೀಸಲಾತಿ ಪ್ರಮಾಣ ನಿರ್ಧರಿಸುವುದು ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದ್ದು ಎಂದಿತ್ತು.

ಸುಪ್ರೀಂ ಕೋರ್ಟ್ ಕಲಾಪ ನೇರ ಪ್ರಸಾರಕ್ಕೆ ಒಪ್ಪಿಗೆ

ಸುಪ್ರೀಂ ಕೋರ್ಟ್ ಕಲಾಪ ನೇರ ಪ್ರಸಾರಕ್ಕೆ ಒಪ್ಪಿಗೆ

ಸುಪ್ರೀಂ ಕೋರ್ಟ್ ವಿಚಾರಣೆಗಳ ನೇರಪ್ರಸಾರಕ್ಕೆ ಅವಕಾಶನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ನೇರಪ್ರವೇಶಕ್ಕೆ ಅನುಮತಿ ನೀಡಿತ್ತು. ನ್ಯಾಯಾಂಗದಲ್ಲಿ ಪಾರದರ್ಶಕತೆ ನೀಡುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸುಪ್ರೀಂ ಕೋರ್ತ್ ಹೇಳಲಿದ್ದು. ಈ ತೀರ್ಪು ಸಹ ಹೊರಬಿದ್ದಿದ್ದು ಸೆಪ್ಟೆಂಬರ್ 26 ರಂದೇ.

ನಮಾಜ್ ಮಾಡಲು ಮಸೀದಿಯೇ ಬೇಕಿಲ್ಲ

ನಮಾಜ್ ಮಾಡಲು ಮಸೀದಿಯೇ ಬೇಕಿಲ್ಲ

ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದೇನಿಲ್ಲ ಎಂದು 1994ರ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ ಸೆ.27 ರಂದು ಎತ್ತಿಹಿಡಿದಿತ್ತು. ಜೊತೆಗೆ ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ತೀರ್ಮಾನಿಸಿದೆ. 1994ರ ಇಸ್ಮಾಯಿಲ್ ಫಾರೂಕಿ ಕೇಸಿಗೆ ಸಂಬಂಧಿಸಿದಂತೆ ಮಸೀದಿ ಕುರಿತು ಕೆಲ ಮುಸ್ಲಿಂ ಸಂಘಟನೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ ಸಿಜೆಐ ದೀಪಕ್ ಮಿಶ್ರಾ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿ, 1994ರ ಕೆಳ ಹಂತದ ನ್ಯಾಯಾಲಯ ನೀಡಿದ ತೀರ್ಪಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿತ್ತು.

ಶಬರಿಮಲೆಗೆ ಮಹಿಳೆಯರ ಪ್ರವೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಸೆ.28 ರಂದು ನೀಡಿದ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ತೆರವುಗೊಳಿಸಿತ್ತು. 10-60 ವರ್ಷ ವಯಸ್ಸಿನ ಋತುಮತಿಯಾಗುವ ಮಹಿಳೆಯರು ದೇವಾಲಯ ಪ್ರವೇಶಿಸುವುದರಿಂದ ದೇವಾಲಯದ ಪಾವಿತ್ರ್ಯ ಹಾಳಾಗುತ್ತದೆ ಎಂಬ ವಾದಕ್ಕೆ ಪ್ರತಿಯಾಗಿ, ಸಮಾನತೆಯ ಆಧಾರದ ಮೇಲೆ ಮಹಿಳೆಯರೂ ಈ ದೇವಾಲಯಕ್ಕೆ ಪ್ರವೇಶಿಸಬಹುದು ಎಂದು ಸುಪ್ರೀಂ ತೀರ್ಪು ನೀಡಿತ್ತು.

ವ್ಯಭಿಚಾರ ಅಪರಾಧವಲ್ಲ!

ವ್ಯಭಿಚಾರ ಅಪರಾಧವಲ್ಲ!

ವ್ಯಭಿಚಾರಕ್ಕೆ ಶಿಕ್ಷೆ ವಿಧಿಸುವ ಐಪಿಸಿ(ಭಾರತೀಯ ದಂಡ ಸಂಹಿತೆ)ಯ ಸೆಕ್ಷನ್ 497 ಅನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೆ.27 ರಂದು ತೀರ್ಪು ನೀಡಿತ್ತು. ಅಂದಿನ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ ವ್ಯಭಿಚಾರ ಅಪರಾಧವಲ್ಲ ಎಂದಿತ್ತು. ಸೆಕ್ಷನ್ 497 ಅಸಾಂವಿಧಾನಿಕ ಎಂದಿತ್ತು.

ತ್ರಿವಳಿ ತಲಾಖ್

ತ್ರಿವಳಿ ತಲಾಖ್

ಮುಸ್ಲಿಂ ಮಹಿಳೆಯರ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದ ತ್ರಿವಳಿ ತಲಾಖ್ ಗೆ ಸಾಂವಿಧಾನಿಕ ಮಾನ್ಯತೆ ಇಲ್ಲ ಎಂಬ ಮಹತ್ವದ ತೀರ್ಪನ್ನು ಆಗಸ್ಟ್ 22 ರಂದು ಸುಪ್ರೀಂ ಕೋರ್ಟ್ ನೀಡಿತ್ತು. ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲವಾದ್ದರಿಂದ ತ್ರಿವಳಿ ತಲಾಖ್ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿತ್ತು.

English summary
Top 8 verdicts of Supreme court in 2018. In his final week as chief justice, Dipak Misra has passed various judgments on important cases, ranging from the one on the constitutionality of Aadhaar to the case on the entry of women into the Ayyappa temple at Sabarimala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X