ಇಬ್ಬರು ಲಷ್ಕರ್ ಕಮಾಂಡರ್ ಗಳನ್ನ ಹೊಡೆದುರುಳಿಸಿದ ಸೇನೆ

ಶ್ರೀನಗರ. ಅಕ್ಟೋಬರ್ 14 : ಶನಿವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮನಲ್ಲಿ ಭಾರತೀಯ ಸೇನೆ ಮತ್ತು ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಲಷ್ಕರ್ ಕಮಾಂಡರ್ ಗಳು ಹತರಾಗಿದ್ದಾರೆ.

ಸುಮಾರು ಅರ್ಧ ಗಂಟೆಗೂ ಹೆಚ್ಚು ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಇಬ್ಬರು ಲಷ್ಕರ್ ಕಮಾಂಡರ್ ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದು, ಪುಲ್ವಾಮದಲ್ಲಿ ಉಗ್ರರ ವಿರುದ್ಧದ ಭಾರತೀಯ ಸೇನೆಯ ಕಾರ್ಯಾಚರಣೆ ಮುಂದುವರೆದಿದೆ.

Top Lashkar terrorist among 2 killed in J&K's Pulwama

ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಕೂಡಲೇ ಪುಲ್ವಾಮದ ಲಿಟ್ಟರ್ ಪ್ರಾಂತ್ಯವನ್ನು ಸುತ್ತುವರೆದಿದ್ದಾರೆ. ಸೇನಾಪಡೆಗಳನ್ನು ಕಂಡ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಸೈನಿಕರು ಪ್ರತಿದಾಳಿ ನಡೆಸಿದ್ದಾರೆ.

ಮೃತ ಉಗ್ರರರನ್ನು ಕುಖ್ಯಾತ ಉಗ್ರ ಸಂಘಟನೆ ಲಷ್ಕರ್ ಇ ತೊಯ್ಬಾದ ಪ್ರಮುಖ ಕಮಾಂಡರ್ ಗಳಾದ ವಸೀಂ ಶಾ ಮತ್ತು ನಿಸಾರ್ ಅಹ್ಮದ್ ಮಿರ್ ಎಂದು ಗುರುತಿಸಲಾಗಿದೆ.

ಇಬ್ಬರೂ ಲಷ್ಕರ್ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಗಳಾಗಿದ್ದು, ಯುವಕರಿಗೆ ಉಗ್ರ ತರಬೇತಿ ಮತ್ತು ವಿಧ್ವಂಸಕ ಕೃತ್ಯಗಳ ಯೋಜನೆ ರೂಪಿಸುತ್ತಿದ್ದರು ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+