ಭಾರತದ 150 ಜನರಲ್ಲಿ ಬ್ರಿಟನ್ ಮೂಲದ ಕೊರೊನಾವೈರಸ್
ನವದೆಹಲಿ, ಜನವರಿ.24: ಭಾರತದಲ್ಲಿ ಬ್ರಿಟನ್ ರೂಪಾಂತರಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 150ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಎಲ್ಲ 150 ಮಂದಿ ಸೋಂಕಿತರನ್ನು ಪ್ರತ್ಯೇಕ ಕೊಠಡಿಗಳಲ್ಲಿ ಐಸೋಲೇಟೆಡ್ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಪ್ರತಿಯೊಬ್ಬ ಸೋಂಕಿತರ ಆರೋಗ್ಯ ಸ್ಥಿತಿ ಮತ್ತು ವೈದ್ಯಕೀಯ ಪರೀಕ್ಷೆಯ ಹೊಣೆಯನ್ನು ಆಯಾ ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆಗೆ ವಹಿಸಲಾಗಿದೆ.
ರೂಪಾಂತರಿ ಕೊರೊನಾವೈರಸ್ ಸೋಂಕು ದೃಢಪಟ್ಟವರ ಜೊತೆ ಸಂಪರ್ಕದಲ್ಲಿದ್ದವರನ್ನು ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ. ಸೋಂಕಿತರೊಂದಿಗೆ ಪ್ರಮಾಣಿಸಿದವರು ಮತ್ತು ಕುಟುಂಬ ಸದಸ್ಯರನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿದೆ. ಬ್ರಿಟನ್ ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸೂಚನೆ ನೀಡಲಾಗುತ್ತಿದ್ದು, ವೈದ್ಯಕೀಯ ಪರೀಕ್ಷೆ ಮತ್ತು ಮಾದರಿ ತಪಾಸಣೆ ಮೇಲೆ ಲಕ್ಷ್ಯ ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ.

ಯಾವ ರಾಷ್ಟ್ರಗಳಲ್ಲಿ ಬ್ರಿಟನ್ ವೈರಸ್ ಹಾವಳಿ:
ಬ್ರಿಟನ್ನಿನ ರೂಪಾಂತರಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಈಗಾಗಲೇ ಹಲವು ರಾಷ್ಟ್ರಗಳಲ್ಲಿ ಪತ್ತೆಯಾಗಿವೆ. ಭಾರತದಲ್ಲಿ ಬ್ರಿಟನ್ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 150ಕ್ಕೆ ಏರಿಕೆಯಾಗಿದೆ. ಡೆನ್ಮಾರ್ಕ್, ನೆದರ್ ಲ್ಯಾಂಡ್, ಆಸ್ಟ್ರೇಲಿಯಾ, ಇಟಲಿ, ಸ್ವಿಡನ್, ಫ್ರಾನ್ಸ್, ಸ್ಪೇನ್, ಸ್ವಿಡ್ಜರ್ ಲ್ಯಾಂಡ್, ಜರ್ಮನಿ, ಕೆನಡಾ, ಜಪಾನ್ ಮತ್ತು ಸಿಂಗಾಪೂರ್ ನಲ್ಲಿ ಬ್ರಿಟನ್ ರೂಪಾಂತರಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications