ಭಾರತದಲ್ಲಿ ಸಕ್ರಿಯ ಪ್ರಕರಣಗಳು 2,81,919ಕ್ಕೆ ಇಳಿಕೆ

ನವದೆಹಲಿ, ಡಿಸೆಂಬರ್ 25: ಭಾರತದಲ್ಲಿ ಇಂದು 23,068 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದರಿಂದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,01,46,846ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 336 ಕೊರೊನಾ ವೈರಸ್ ಸೋಂಕಿತರು ಮೃತಪಟ್ಟಿದ್ದಾರೆ.

ಸತತ 12ನೇ ದಿನ ಭಾರತದಲ್ಲಿ 30 ಸಾವಿರಕ್ಕಿಂತ ಕಡಿಮೆ ಸೋಂಕಿತರ ಪ್ರಕರಣಗಳು ದಾಖಲಾಗಿದೆ. ಹಾಗೆಯೇ ಗುರುವಾರದಂದು 24,661 ಮಂದಿ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 97,17,834ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,81,919ಕ್ಕೆ ಇಳಿಕೆಯಾಗಿದೆ. ಒಟ್ಟು ಸಾವಿನ ಸಂಖ್ಯೆ 1,47,097ಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಗುರುವಾರ 1,143 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. ವೈರಸ್‌ನಿಂದ ಕೇವಲ ಒಬ್ಬರು ನಿನ್ನೆ ಮೃತಪಟ್ಟಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ದೇಶದಾದ್ಯಂತ ಲಸಿಕೆ ಪ್ರಕ್ರಿಯೆ ಜಾರಿಗೊಳಿಸಲು ಭಾರತ ವ್ಯಾಪಕ ಸಿದ್ಧತೆ ನಡೆಸಿದೆ. ಇದುವರೆಗೂ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸುಮಾರು 7,000ಕ್ಕೂ ಅಧಿಕ ಜಿಲ್ಲಾ ಮಟ್ಟದ ಟ್ರೈನಿಗಳಿಗೆ ರಾಜ್ಯಮಟ್ಟದ ತರಬೇತಿ ನೀಡಲಾಗಿದೆ.

Total 23,068 New Coronavirus Cases, 336 Deaths in Last 24 Hours

ಮೆಕ್ಸಿಕೋದಲ್ಲಿ 12,485 ಹೊಸ ಪ್ರಕರಣಗಳು, 861 ಸಾವುಗಳು ವರದಿಯಾಗಿವೆ. ಜರ್ಮನಿಯಲ್ಲಿನ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 25,333ಕ್ಕೆ ಏರಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+