ಟ್ರಾಫಿಕ್ ಪೊಲೀಸ್‌ನನ್ನು ಎಳೆದೊಯ್ದ ಕಾರು ಚಾಲಕ- ವಿಡಿಯೋ ವೈರಲ್
ಫರಿದಾಬಾದ್ ಜೂನ್ 22: ಟ್ರಾಫಿಕ್ ಪೊಲೀಸ್‌ನನ್ನು ಕಾರಿನಲ್ಲಿ ಎಳೆದೊಯ್ದ ಭಯಾನಕ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಕುಡಿದು ವಾಹನ ಚಲಾಯಿಸುತ್ತಿದ್ದ ಚಾಲಕನ ಕಾರು ನಿಲ್ಲಿಸಿ ವಿಚಾರಣೆ ಮಾಡುವಾಗ ಈ ಘಟನೆ ನಡೆದಿದೆ.
ಬಲ್ಲಭಗಢ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಚಾಲಕನೊಬ್ಬನನ್ನು ಅಡ್ಡಗಟ್ಟಿ ಪೊಲೀಸರು ತಪಾಸಣೆ ನಡೆಸುತ್ತಿದ್ದರು. ವಾಹನ ಪರವಾನಿಗೆ ನೀಡುವಂತೆ ಪೊಲೀಸರು ಕಾರು ಚಾಲಕನಿಗೆ ಕೇಳಿದ್ದಾರೆ. ಈ ವೇಳೆ ಚಾಲಕ ಅಲ್ಲಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಇದನ್ನು ತಡೆಯಲು ಮುಂದಾದ ಟ್ರಾಫಿಕ್ ಪೊಲೀಸ್‌ನನ್ನು ಚಾಲಕ ಎಳೆದೊಯ್ದಿದ್ದಾನೆ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಅಲ್ಲಿದ್ದ ವ್ಯಕ್ತಿಯೊಬ್ಬರು ಈ ಘಟನೆಯ ವಿಡಿಯೋ ಮಾಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾರ್ ಡ್ರೈವರ್ ಸಬ್ ಇನ್ಸ್ ಪೆಕ್ಟರ್ ಅವರನ್ನು ಸ್ವಲ್ಪ ದೂರದವರೆಗೆ ಎಳೆದೊಯ್ದಿದ್ದನ್ನು ವೀಡಿಯೋದಲ್ಲಿ ನೋಡಬಹುದು. ಈ ಘಟನೆಯು ಸ್ಥಳದಲ್ಲಿ ಭೀತಿಯನ್ನುಂಟು ಮಾಡಿದೆ. ಅದೇ ವೇಳೆ ಅಲ್ಲಿದ್ದ ವ್ಯಕ್ತಿಯೊಬ್ಬರು ಈ ವಿಡಿಯೋವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಮಾಹಿತಿಯ ಪ್ರಕಾರ, ಈ ಚಾಲಕ ಬಲ್ಲಭಗಢ ಬಸ್ ನಿಲ್ದಾಣದ ಮುಂಭಾಗದ ರಸ್ತೆಯ ಮಧ್ಯದಲ್ಲಿ ನಿಂತಿದ್ದ ಕಾರಣ ರಸ್ತೆಯಲ್ಲಿ ಜಾಮ್ ಆಗಿತ್ತು. ಈ ಬಗ್ಗೆ ಸಂಚಾರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ವಾಹನವನ್ನು ತೆಗೆಯುವಂತೆ ಹೇಳಿ ವಾಹನದ ದಾಖಲೆಗಳನ್ನು ಕೇಳಿದರು.

ಈ ವೇಳೆ ಕಾರು ಚಾಲಕ ಹಾಗೂ ಸಂಚಾರಿ ಪೊಲೀಸ್ ಸಿಬ್ಬಂದಿ ನಡುವೆ ವಾಗ್ವಾದ ಆರಂಭವಾಯಿತು. ಇದೇ ವೇಳೆ ಹೆದ್ದಾರಿಯಲ್ಲಿದ್ದ ಪೊಲೀಸರ ಪ್ರಾಣವನ್ನೂ ಲೆಕ್ಕಿಸದೇ ಅತಿವೇಗದಲ್ಲಿ ಕಾರು ಚಲಾಯಿಸಲು ಮುಂದಾಗಿದ್ದಾನೆ. ಟ್ರಾಫಿಕ್ ಪೊಲೀಸ್‌ನನ್ನು ರಸ್ತೆಯಲ್ಲಿ ಎಳೆದೊಯ್ದಿದ್ದಾನೆ. ಈ ವೇಳೆ ಪ್ರಾಣದ ಹಂಗು ತೊರೆದು ಪೊಲೀಸರು ಕಾರನ್ನು ನಿಲ್ಲಿಸಿದ್ದಾರೆ.
ಸ್ಥಳದಲ್ಲಿದ್ದ ಜನರ ಪ್ರಕಾರ, ಈ ಕಾರು ಚಾಲಕನು ತನ್ನ ಕಾರಿನಲ್ಲಿ ಪೊಲೀಸ್‌ನನ್ನು ಎಳೆದೊಯ್ಯುತ್ತಿದ್ದನು. ಕಾರು ಚಾಲಕ ತಪ್ಪು ದಾರಿಯಲ್ಲಿ ಕಾರು ಚಲಾಯಿಸಿದಾಗ ಹಿಂಬದಿಯ ಪ್ರಯಾಣಿಕರು ತಮ್ಮ ವಾಹನ ನಿಲ್ಲಿಸಿ ಕಾರಿನತ್ತ ಓಡಿಬಂದರು. ನಂತರ ಹ್ಯಾಂಡಲ್ ಬ್ರೇಕ್ ಎಳೆದು ಕಾರನ್ನು ನಿಲ್ಲಿಸಲಾಗಿದೆ. ಇದರಿಂದ ವಾಹನ ನಿಂತಿದ್ದು ಪೊಲೀಸ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
VIDEO | #Haryana: A cab driver tried to flee when traffic police asked for the documents of the vehicle he was driving in Ballabgarh. He was nabbed by traffic cops after a short chase. The incident reportedly took place yesterday.
— Press Trust of India (@PTI_News) June 22, 2024
(Source: Third Party) pic.twitter.com/eJILVSsqMJ
ಈ ಘಟನೆಯ ವಿಡಿಯೋದಲ್ಲಿ ಚಾಲಕ ಕಾರನ್ನು ಓಡಿಸಲು ಯತ್ನಿಸುತ್ತಿರುವುದು ಕಂಡು ಬಂದಿದೆ. ಟ್ರಾಫಿಕ್ ಪೋಲೀಸ್ ಕಾರನ್ನು ನಿಲ್ಲಿಸಲು ಪ್ರಯತ್ನಿಸಿದಾಗ ಕಾರು ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿಯೇ ಪೊಲೀಸರು ಮತ್ತು ಚಾಲಕನ ನಡುವೆ ಮಾತಿನ ಚಕಮಕಿ ನಡೆಯುತ್ತಿರುವುದು ಕಂಡು ಬಂದಿದೆ.
ಅಷ್ಟರಲ್ಲಿ ಕಾರಿನಲ್ಲಿದ್ದವರು ಕೂಡ ಕಾರಿನಿಂದ ಜಿಗಿದಿದ್ದಾರೆ. ಚಾಲಕ ಪೊಲೀಸರನ್ನು ಎಳೆದೊಯ್ಯುತ್ತಿರುವುದು ಕಂಡು ಬಂದಿದೆ. ನಂತರ ಇತರ ಪೊಲೀಸರ ಸಹಾಯದಿಂದ ಕಾರಿನೊಳಗಿದ್ದ ಚಾಲಕನನ್ನು ನಿಯಂತ್ರಿಸಲಾಯಿತು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications