Train Accident: ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ, ಐವರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

Train Accident: ಕಳೆದ ವರ್ಷ ಬಾಲ್ಸೂರಿನಲ್ಲಿ ರೈಲುಗಳ ಭೀಕರ ಅಪಘಾತವಾಗಿದ್ದು, ಈ ವೇಳೆ ಅಪಾರ ಪ್ರಾಣಹಾನಿ ಸಂಭವಿಸಿತ್ತು. ಇದೀಗ ಅಂತಹದ್ದೇ ಘಟನೆಯೊಂದು ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿಯಲ್ಲಿ ನಡೆದಿದೆ.

ಇಂದು (ಜೂನ್‌ 17) ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿಯಲ್ಲಿ 13174 ಅಗರ್ತಲಾ-ಸೀಲ್ದಾ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದ್ದು, ಈ ವೇಳೆ ಐವರು ಪ್ರಯಾಣಿಕರು ಸಾವನ್ನಪ್ಪಿದ್ದು, ಸುಮಾರು 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Train Accident Goods train hits Kanchanjunga Express Five death more than 30 injured

ಇನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟ್ವೀಟ್‌ನಲ್ಲಿ "ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು," ಎಂದು ತಿಳಿಸಿದ್ದಾರೆ.

ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎನ್ನುವ ಮಾಹಿತಿ ತಿಳಿದ ತಕ್ಷಣ ಸ್ರಕ್ಷಣಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ತಿಳಿಸಿದ್ದಾರೆ. ಇನ್ನು ಈ ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಕಾರ್ಯಾಚರಣೆಯ ಮೇಲ್ವಿಚಾರಣೆಗೆ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ.

ಇನ್ನು ಈ ಅಪಘಾತ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಘೋಷಣೆ ಮಾಡಿದ್ದಾರೆ.

ಘಟನೆ ಬಗ್ಸಾಗೆ ಟ್ವೀಟ್‌ ಮೂಲಕ ಪೋಸ್ಟ್ ಮಾಡಿರುವ ಅವರು, ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಡೆದ ರೈಲ್ವೆ ಅಪಘಾತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದ ಸ್ಥಳಕ್ಕೆ ತೆರಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+