Train Accident: ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಿ

Train Accident: ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಒಡಿಶಾದ ಬಾಲ್ಸೋರಿನಲ್ಲಿ ಬೀಕರ ರೈಲು ಅಫಘಾತವೊಂದು ಸಂಭವಿಸಿತ್ತು. ಹಾಗೆಯೇ ಇದೀಗ ಪಂಜಾಬ್‌ನ ಸಿರ್ಹಿಂದ್ ಮಾಧೋಪುರ ಬಳಿ ಭಾನುವಾರ (ಜೂನ್‌ 02) ಬೆಳಗ್ಗೆ ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಈ ವೇಳೆ ಅಪಘಾತದಲ್ಲಿ ಇಬ್ಬರು ಲೋಕೋ ಪೈಲಟ್‌ಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹಾಗಾದರೆ ಈ ಅಪಘಾತ ಹೇಗೆ ಆಯಿತು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಇನ್ನು ಈ ಭೀಕರ ರೈಲು ಅಪಘಾತದಲ್ಲಿ ಗೂಡ್ಸ್ ರೈಲಿನ ಇಂಜಿನ್ ಪಲ್ಟಿಯಾಗಿ ಅದರಲ್ಲಿ ಪ್ಯಾಸೆಂಜರ್ ರೈಲು ಸಿಕ್ಕಿಹಾಕಿಕೊಂಡಿರುವ ಘಟನೆ ನಡೆದಿದೆ.

Train Accident Goods trains collided in Punjab 2 loco pilots injured

ಅಪಘಾತದಲ್ಲಿ ಗಾಯಗೊಂಡ ಇಬ್ಬರು ಲೋಕೋ ಪೈಲಟ್‌ಗಳನ್ನು ಉತ್ತರ ಪ್ರದೇಶದ ಸಹಾರನ್ಪುರದ ವಿಕಾಸ್ ಕುಮಾರ್(37), ಹಿಮಾಂಶುಕುಮಾರ್(31) ಎಂದು ಗುರುತಿಸಲಾಗಿದ್ದು, ಇವರಿಬ್ಬರ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಫತೇಘರ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಪಟಿಯಾಲಾದ ರಾಜೇಂದ್ರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ಹಿನ್ನೆಲೆ: ಒಂದು ಗೂಡ್ಸ್ ರೈಲಿನ ಇಂಜಿನ್ ಸಡಿಲಗೊಂಡು ಮತ್ತೊಂದು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಈ ವೇಳೆ ಅಂಬಾಲಾದಿಂದ ಜಮ್ಮು ತಾವಿಗೆ ಹೋಗುತ್ತಿದ್ದ ವಿಶೇಷ ಪ್ಯಾಸೆಂಜರ್ ರೈಲು ಸಿಕ್ಕಿಹಾಕಿಕೊಂಡಿದೆ. ಇನ್ನಯ ಸ್ಥಳಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇನ್ನು ಹೆಚ್ಚಿನ ಮಾಹಿತಿ ತಿಳಿದುಬರೆಬೇಕಿದೆ.

ಲಾರಿಗೆ ಕುರಿ ತುಂಬಿದ್ದ ಅಶೋಕ್ ಲೇಲ್ಯಾಂಡ್ ಡಿಕ್ಕಿ: ಮುಂದೆ ಚಲಿಸುತ್ತಿದ್ದ ಲಾರಿಗೆ ಕುರಿ ತುಂಬಿದ್ದ ಅಶೋಕ್ ಲೈಲಾಂಡ್ ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ನಗರದ ಹೊರವಲಯದ ಆರ್.ಕೆ.ಪವರ್ ಜಿನ್ ಬಳಿ ಘಟನೆ ನಡೆದಿದೆ.

ಮೃತರನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರಮೇಶ್(55) ಹಾಗೂ ಬೆಳೆಗೆರೆ ಶಿವಲಿಂಗಪ್ಪ (65) ಮೃತರು ಎಂದು ಗುರುತಿಸಲಾಗಿದೆ. ಇನ್ನು ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಚಳ್ಳಕೆರೆಯ ತಾಲೂಕಿನ ತನ್ನ ಗ್ರಾಮದಿಂದ ಹಿರಿಯೂರು ಕುರಿ ಸಂತೆಗೆ ಕುರಿ ವ್ಯಾಪಾರ ಮಾಡಲು ಅಶೋಕ್ ಲೈಲ್ಯಾಂಡ್ ಗಾಡಿಯಲ್ಲಿ ಕುರಿ ತುಂಬಿಕೊಂಡು ಬರುತ್ತಿರುವಾಗ ಮುಂದೆ ಚಲಿಸುತ್ತಿದ್ದ ಲಾರಿಗೆ ಅಶೋಕ್ ಲೈಲಾಂಡ್ ಗಾಡಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಅಸುನೀಗಿದ್ದಾರೆ.

ಇನ್ನು ಅಪಘಾತದ ರಭಸಕ್ಕೆ ಅಶೋಕ್ ಲೈಲ್ಯಾಂಡ್ ವಾಹನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+