ಕತುವಾ ಅತ್ಯಾಚಾರ-ಕೊಲೆ ಪ್ರಕರಣ: ಇಂದಿನಿಂದ ಆರೋಪಿಗಳ ವಿಚಾರಣೆ
ಕತುವಾ, ಏಪ್ರಿಲ್ 16: ಜಮ್ಮು ಕಾಶ್ಮೀರದ ಕತುವಾದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಎಂಟು ಆರೋಪಿಗಳನ್ನು ಇಲ್ಲಿನ ಚೀಫ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ ಇಂದಿನಿಂದ ವಿಚಾರಣೆ ನಡೆಸಲಾಗುತ್ತಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಪ್ರಕರಣ ಕೋಮು ಗಲಭೆಯಾಗಿ ಬದಲಾಗಿರುವುದರಿಂದ ಜಮ್ಮು-ಕಾಶ್ಮೀರ ಸರ್ಕಾರ ವಿಚಾರಣೆಗಾಗಿ ಇಬ್ಬರು ಸಿಕ್ಖ್ ವಿಶೇಷ ವಕೀಲರನ್ನು ನೇಮಿಸಿದೆ. ಹಿಂದು-ಮುಸ್ಲಿಂ ಮತಗಳ ನಡುವೆ ಗಲಭೆ ನಡೆಯುತ್ತಿರುವುದರಿಂದ ಪ್ರಕರಣ ಪೂರ್ಗ್ರಹಮುಕ್ತವಾಗಿರಬೇಕೆಂಬ ಕಾರಣದಿಂದ ಸಿಕ್ಖ್ ವಕೀಲರನ್ನು ನೇಮಿಸುವ ಯತ್ನಕ್ಕೆ ಸರ್ಕಾರ ಕೈಹಾಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಎಫ್ ಐಆರ್ ಗಳನ್ನು ಸಲ್ಲಿಸಲಾಗಿದೆ. ಒಂದು ಎಂಟು ಆರೋಪಿಗಳ ವಿರುದ್ಧ. ಮತ್ತು ಇನ್ನೊಂದು, ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸುವುದಕ್ಕೆ ಅಡ್ಡಿಪಡಿಸಿದ ವಕೀಲರ ವಿರುದ್ಧ.

ಇಡೀ ದೇಶವನ್ನು ಬೆಚ್ಚಿ ಬೀಳಿಸಿದ ಕತುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಭವಿಸಿದ್ದು ಇದೇ ವರ್ಷದ ಜನವರಿ ತಿಂಗಳಿನಲ್ಲಿ. ಕತುವಾದ ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಗೆ ಮತ್ತು ಬರುವ ಔಷಧ ನೀಡಿ, ದೇವಾಲಯದಲ್ಲಿ ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ನಂತರ ಆಕೆಯನ್ನು ಕೊಲೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 60 ರ್ಷದ ನಿವೃತ್ತ ಸರ್ಕಾರಿ ನೌಕರ ಸಾಂಜಿ ರಾಮ್, ಪೊಲೀಸ್ ಅಧಿಕಾರಿಗಳಾದ ಸುರೇಂದರ್ ವರ್ಮಾ, ಆನಂದ ದತ್ತ, ತಿಲಕ್ ರಾಜ್ ಮತ್ತು ಖಾಜುರಿಯಾ, ಅಲ್ಲದೆ ಸಾಂಜಿ ರಾಮ್ ಪುತ್ರ ವಿಶಾಲ್, ಸಂಬಂಧಿ ಒಬ್ಬ ಅಪ್ರಾಪ್ತ ಹುಡುಗ, ಆತನ ಸ್ನೇಹಿತ ಪರ್ವೇಶ್ ಕುಮಾರ್ ಸೇರಿದಂತೆ ಒಟ್ಟು ಎಂಟು ಜನರನ್ನು ಬಂಧಿಸಲಾಗಿತ್ತು.












Click it and Unblock the Notifications