Mamata Banerjee: ಗಾಯಗೊಂಡ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮನೆಯಲ್ಲಿ ಬಿದ್ದ ನಂತರ ಅವರ ಹಣೆಗೆ "ದೊಡ್ಡ ಗಾಯ" ವಾಗಿದೆ. ಅವರ ಹಣೆಗೆ ಹೊಲಿಗೆ ಹಾಕಿದ್ದು, ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಆಸ್ಪತ್ರೆಯ ಹಾಸಿಗೆಯ ಮೇಲೆ ಮಮತಾ ಬ್ಯಾನರ್ಜಿ ಅವರ ಹಣೆಯ ಮಧ್ಯದಲ್ಲಿ ಆಳವಾದ ಗಾಯವಾಗಿರುವ ಮತ್ತು ಮುಖದ ಮೇಲೆ ರಕ್ತವಿರುವ ಫೋಟೋಗಳನ್ನು ಹಂಚಿಕೊಂಡಿದೆ. ಮಮತಾ ಬ್ಯಾನರ್ಜಿ ಅವರ ಮನೆಯಲ್ಲಿ ಗಾಯಗೊಂಡಿದ್ದು, ಅವರನ್ನು ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

"ನಮ್ಮ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರಿಗೆ ದೊಡ್ಡ ಗಾಯವಾಗಿದೆ. ದಯವಿಟ್ಟು ಅವರಗಾಗಿ ನೀವು ಪ್ರಾರ್ಥನೆ ಮಾಡಿ" ಎಂದು ಪಕ್ಷವು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
Our chairperson @MamataOfficial sustained a major injury.
— All India Trinamool Congress (@AITCofficial) March 14, 2024
Please keep her in your prayers 🙏🏻 pic.twitter.com/gqLqWm1HwE
"ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಶೀಘ್ರವಾಗಿ ಉತ್ತಮ ಆರೋಗ್ಯಕ್ಕೆ ಮರಳಲು ನಮ್ಮ ಪ್ರಾರ್ಥನೆಗಳು ಅವರೊಂದಿಗೆ ಇವೆ" ಎಂದು ತೃಣಮೂಲ ಕಾಂಗ್ರೆಸ್‌ನ ರಾಜ್ಯ ಅಧ್ಯಕ್ಷ ಸುಕಾಂತ ಮಜುಂದಾರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಗತ್ಯ ಪರೀಕ್ಷೆಗಳನ್ನು ನಡೆಸಿದ ನಂತರ ಮುಖ್ಯಮಂತ್ರಿಯನ್ನು ಅವರ ನಿವಾಸಕ್ಕೆ ಕರೆದೊಯ್ಯಲಾಯಿತು. ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಮತ್ತು ಇತರ ಕುಟುಂಬ ಸದಸ್ಯರು ಅವರ ಜೊತೆಗಿದ್ದರು.
I pray for a quick recovery and the best health for Mamata Didi. @MamataOfficial
— Narendra Modi (@narendramodi) March 14, 2024
ಪ್ರಧಾನಿ ನರೇಂದ್ರ ಮೋದಿ ಅವರು ಮಮತಾ ಬ್ಯಾನರ್ಜಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ ಮತ್ತು ಮಮತಾ ದೀದಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಮುಖ್ಯಮಂತ್ರಿಗಳ ಆರೋಗ್ಯ ವಿಚಾರಿಸಿ ತೀವ್ರ ದುಃಖ ವ್ಯಕ್ತಪಡಿಸಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.












Click it and Unblock the Notifications