ತ್ರಿವಳಿ ತಲಾಖ್ ಲೋಕಸಭೆಯಲ್ಲಿ ಪಾಸ್, ಮುಂದೇನು?

ನವದೆಹಲಿ, ಡಿಸೆಂಬರ್ 27 : 'ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) ಮಸೂದೆ -2018' ಲೋಕಸಭೆಯಲ್ಲಿ ಗುರುವಾರ ಅಂಗೀಕಾರವಾಗಿದೆ. ಆದರೆ, ಇದು ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಬೇಕಿದೆ.

ತ್ರಿವಳಿ ತಲಾಖ್ ನಿಷೇಧಿಸುವ ಸಂಬಂಧ ಹಿಂದೆಯೇ ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾಗಿತ್ತು. ಆದರೆ, ರಾಜ್ಯಸಭೆಯಲ್ಲಿ ಅನುಮೋದನೆ ಸಿಗದ ಕಾರಣ ಕಾಯ್ದೆಯಾಗಿ ರೂಪಗೊಂಡಿರಲಿಲ್ಲ. ಆದ್ದರಿಂದ, ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ತಂದಿತ್ತು.

ಸುಗ್ರಿವಾಜ್ಞೆಗೆ ಜಾರಿಗೆ ಬಂದ 6 ತಿಂಗಳಿನಲ್ಲಿ ಎರಡೂ ಸದನಗಳ ಒಪ್ಪಿಗೆ ಪಡೆಯಬೇಕು. ಆದ್ದರಿಂದ, ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ ಮಾಡಲಾಗಿತ್ತು. ತ್ರಿವಳಿ ತಲಾಖ್ ವಿಧೇಯಕದ ಪರವಾಗಿ 245 ಮತ್ತು ವಿರುದ್ಧವಾಗಿ ಕೇವಲ 11 ಮತಗಳು ಚಲಾವಣೆಯಾದವು.

Lok Sabha

ಕಾಂಗ್ರೆಸ್ ಮತ್ತು ಎಐಎಡಿಎಂಕೆ ಪಕ್ಷದ ಸಂಸದರು ಕಲಾಪವನ್ನು ಬಹಿಷ್ಕಾರ ಮಾಡಿ ಹೊರ ನಡೆದರು. ಬಳಿಕ ಮಸೂದೆ ಪರವಾಗಿ ಮತದಾನ ನಡೆಯಿತು. ಈಗ ರಾಜ್ಯಸಭೆಯಲ್ಲಿ ಮಸೂದೆ ಅನುಮೋದನೆ ಆಗಲಿದೆಯೇ? ಎಂದು ಕಾದು ನೋಡಬೇಕು.

ಅಧಿವೇಶನ ಆರಂಭವಾದ 42 ದಿನಗಳಲ್ಲಿ ಹೊಸ ಮಸೂದೆಗೆ ಅಂಗೀಕಾರ ಪಡೆಯುವುದು ಕಡ್ಡಾಯ. ಇಲ್ಲದಿದ್ದರೆ ಸುಗ್ರೀವಾಜ್ಞೆ ರದ್ದಾಗಲಿದೆ. ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ಮಸೂದೆ ಅಂಗೀಕಾರಕ್ಕೆ ಒಪ್ಪಿಗೆ ಕೊಡಲಿವೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+