ತ್ರಿವಳಿ ತಲಾಖ್ ಮಸೂದೆ ಮಂಡನೆ : ಬಿಸಿ-ಬಿಸಿ ಚರ್ಚೆ

Posted By: Gururaj
Subscribe to Oneindia Kannada

ನವದೆಹಲಿ, ಡಿಸೆಂಬರ್ 28 : ತ್ರಿವಳಿ ತಲಾಖ್ ನಿಷೇಧ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಮಂಡನೆ ಮಾಡಲಾಗಿದೆ. ಸಂಸತ್ತಿನಲ್ಲಿ ಮಸೂದೆ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ತ್ರಿವಳಿ ತಲಾಕ್ : ಮುಸ್ಲಿಂ ಮಹಿಳೆ ರಕ್ಷಣಾ ಮಸೂದೆಯಲ್ಲೇನಿದೆ?

ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಗುರುವಾರ ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಮಂಡನೆ ಮಾಡಿದರು. 'ಮಹಿಳೆಯರು ಮತ್ತು ಅವರಿಗೆ ನ್ಯಾಯ ಒದಗಿಸಲು ಮಸೂದೆ ಸಹಾಯಕವಾಗಲಿದೆ' ಎಂದರು.

ತಲಾಖ್ ವಿರುದ್ಧ ಗೆದ್ದ 5 ಮುಸ್ಲಿಂ ಮಹಿಳೆಯರು ಇವರೇ

Triple Talaq bill tabled in Lok Sabha

ಮುಸ್ಲಿಂ ಪುರುಷ ತನ್ನ ಪತ್ನಿಗೆ ತ್ರಿವಳಿ ತಲಾಖ್ ನೀಡುವುದನ್ನು ಅಪರಾಧ ಎಂದು ಪರಿಗಣಿಸುವ 'ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ರಕ್ಷಣೆ ಮಸೂದೆ 2017' ಇದಾಗಿದೆ. ಈ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ.

ತ್ರಿವಳಿ ತಲಾಖ್ ಮಸೂದೆಗೆ ಕೇಂದ್ರ ಸಂಪುಟದ ಸಭೆಯಲ್ಲಿ ಅಂಗೀಕಾರ

ಮಸೂದೆ ಮಂಡನೆಯಾಗುತ್ತಿದ್ದಂತೆ ಸಂಸದ ಅಸಾದುದ್ದೀನ್ ಓವೈಸಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. 'ಮಸೂದೆ ಸಂಸತ್ತಿನಲ್ಲಿ ಅಂಗೀಕಾರವಾದರೆ ಮುಸ್ಲಿಂ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುತ್ತದೆ' ಎಂದರು.

ಮಸೂದೆ ಬಗ್ಗೆ ಮಾತನಾಡಿದ ರವಿಶಂಕರ್ ಪ್ರಸಾದ್, 'ಇಂದು ನಾವು ಇತಿಹಾಸ ನಿರ್ಮಾಣ ಮಾಡಿದ್ದೇವೆ. ಈ ಮಸೂದೆ ಮಹಿಳೆಯರ ಹಕ್ಕು ಮತ್ತು ನ್ಯಾಯಕ್ಕೆ ಸಂಬಂಧಿಸಿದ್ದು. ಇದು ಯಾವುದೇ ಮತ, ಪಂಥಕ್ಕೆ ಸಂಬಂಧಿಸಿದ್ದಲ್ಲ' ಎಂದು ಸ್ಪಷ್ಟಪಡಿಸಿದರು.

ಏನಿದು ತ್ರಿವಳಿ ತಲಾಖ್? ಏಕೆ ಇದರ ಬಗ್ಗೆ ಚರ್ಚೆ?

ತ್ರಿವಳಿ ತಲಾಖ್ ಮಸೂದೆಯನ್ನು ಬಿಜೆಪಿ ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಂಡಿದೆ. ಲೋಕಸಭೆಯಲ್ಲಿ ಇದನ್ನು ಅಂಗೀಕಾರ ಮಾಡಲು ಎಲ್ಲಾ ಸದಸ್ಯರಿಗೆ ಕಲಾಪದಲ್ಲಿ ಹಾಜರಿರಬೇಕು ಎಂದು ವಿಪ್ ಜಾರಿ ಮಾಡಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Union law minister Ravi Shankar Prasad tabled Triple Talaq bill in Lok Sabha on December 28, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ