ತ್ರಿಪುರಾದಲ್ಲಿ ವಿಧಾನಸಭೆ ಚುನಾವಣೆ, ಮತದಾನ ಆರಂಭ
ಬೆಂಗಳೂರು, ಫೆಬ್ರವರಿ 18 : ತ್ರಿಪುರ ವಿಧಾನಸಭೆಯ 60 ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಮಾರ್ಚ್ 3ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಭಾನುವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. 25,73,143 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. 13,05,375 ಪುರುಷರು, 12,68,027 ಮಹಿಳಾ ಮತದಾರರಿದ್ದಾರೆ.
3,214 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. 47 ಮತಗಟ್ಟೆಗಳನ್ನು ಮಹಿಳೆಯರು ನಿರ್ವಹಣೆ ಮಾಡಲಿದ್ದಾರೆ. ಸಿಪಿಎಂ ಅಭ್ಯರ್ಥಿ ಅಕಾಲಿಕವಾಗಿ ಸಾವನ್ನಪ್ಪಿದ ಕಾರಣದಿಂದಾಗಿ ಚಾರಿಲಂ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮತದಾನ ನಡೆಯುತ್ತಿಲ್ಲ. ಮಾರ್ಚ್ 12ರಂದು ಅಲ್ಲಿ ಚುನಾವಣೆ ನಡೆಯಲಿದೆ.

ತ್ರಿಪುರದಲ್ಲಿ ನಿರಂತರ 25 ವರ್ಷಗಳಿಂದ ಅಧಿಕಾರದಲ್ಲಿರುವ ಎಡರಂಗ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಇದೆ. ಬಿಜೆಪಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 4 ಸಮಾವೇಶಗಳನ್ನು ಉದ್ದೇಶಿಸಿ ಪ್ರಚಾರ ಭಾಷಣ ಮಾಡಲಿದ್ದಾರೆ.
ಸಿಪಿಎಂ ನಾಯಕ ಮಾಣಿಕ್ ಸರ್ಕಾರ್ 5ನೇ ಬಾರಿ ಸರ್ಕಾರ ರಚಿಸುವ ಉತ್ಸಾಹದಲ್ಲಿದ್ದಾರೆ. 50 ಕ್ಕೂ ಹೆಚ್ಚು ಸಮಾವೇಶಗಳನ್ನು ನಡೆಸುವ ಮೂಲಕ ಚುನಾವಣಾ ಪ್ರಚಾರ ನಡೆಸಿದ್ದಾರೆ.












Click it and Unblock the Notifications