Breaking; 3 ರಾಜ್ಯಗಳಿಗೆ ಮಧ್ಯಾಹ್ನ ಚುನಾವಣಾ ದಿನಾಂಕ ಘೋಷಣೆ
ನವದೆಹಲಿ, ಜನವರಿ 18; ಕೇಂದ್ರ ಚುನಾವಣಾ ಆಯೋಗ ಬುಧವಾರ ಮಧ್ಯಾಹ್ನ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಮಧ್ಯಾಹ್ನ 2.30ಕ್ಕೆ ಪತ್ರಿಕಾಗೋಷ್ಠಿ ನಡೆಯಲಿದೆ.
ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಬುಧವಾರ ಮಧ್ಯಾಹ್ನ 2.30ಕ್ಕೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ.
ಮೂರು ರಾಜ್ಯಗಳಲ್ಲಿ ಮಾರ್ಚ್ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಯಾವ ರಾಜ್ಯದಲ್ಲಿ ಯಾವಾಗ ಚುನಾವಣೆ ನಡೆಯಲಿದೆ? ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಲಾಗುತ್ತದೆ.

ಮೇಘಾಲಯ ರಾಜ್ಯದ 60 ವಿಧಾನಸಭಾ ಕ್ಷೇತ್ರಗಳಿಗೆ 16 ಮಾರ್ಚ್ 2018ರಲ್ಲಿ ಚುನಾವಣೆ ನಡೆದಿತ್ತು. ಈಗ ಅವಧಿ ಮುಗಿದಿದ್ದು, ಮಾರ್ಚ್ 15, 2023ರೊಳಗೆ ಮತ್ತೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ.
ನಾಗಾಲ್ಯಾಂಡ್ ರಾಜ್ಯದಲ್ಲಿ 60 ವಿಧಾನಸಭಾ ಕ್ಷೇತ್ರಗಳಿವೆ. 13 ಮಾರ್ಚ್ 2018ರಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. 12 ಮಾರ್ಚ್ 2023ರೊಳಗೆ ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ.
ತ್ರಿಪುರ ರಾಜ್ಯದಲ್ಲಿಯೂ ಸಹ 60 ವಿಧಾನಸಭಾ ಕ್ಷೇತ್ರಗಳಿವೆ. 23 ಮಾರ್ಚ್ 2023ರಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. 22 ಮಾರ್ಚ್ 2023ರೊಳಗೆ ಹೊಸ ಸರ್ಕಾರ ರಾಜ್ಯದಲ್ಲಿ ಅಧಿಕಾರವಹಿಸಿಕೊಳ್ಳಬೇಕಿದೆ.
2023ರಲ್ಲಿ ದೇಶದ 9 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿದೆ. ವಿವಿಧ ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳು ಬ್ಯುಸಿಯಾಗಲಿವೆ. 2024ರಲ್ಲಿ ಲೋಕಸಭೆ ಚುನಾವಣೆಗೆ ಪೂರ್ವದಲ್ಲಿ ನಡೆಯುವ ಚುನಾವಣೆಗಳು ಕುತೂಹಲಕ್ಕೆ ಕಾರಣವಾಗಿವೆ.
ದೆಹಲಿಯಲ್ಲಿ ಎರಡು ದಿನಗಳ ಕಾಲ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ವಿಧಾನಸಭೆ ಚುನಾವಣೆಗಳ ಕುರಿತು ಚರ್ಚೆ ನಡೆದಿತ್ತು. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯುವುದರಿಂದ 9 ರಾಜ್ಯಗಳ ಚುನಾವಣೆಯಲ್ಲಿ ಪಕ್ಷ ಜಯಗಳಿಸಬೇಕು ಎಂದು ಗುರಿ ಹಾಕಿಕೊಳ್ಳಲಾಗಿತ್ತು.
2023ರಲ್ಲಿ ಕರ್ನಾಟಕ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿಯೂ ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.












Click it and Unblock the Notifications