ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್ 18ರಿಂದ ಟ್ರಕ್ ಮಾಲೀಕರ ಅನಿರ್ದಿಷ್ಠಾವಧಿ ಮುಷ್ಕರ

By Nayana
|
Google Oneindia Kannada News

ಬೆಂಗಳೂರು, ಜೂನ್ 15: ಅವೈಜ್ಞಾನಿಕವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದು ಮತ್ತು ಮೂರನೇ ಪಾರ್ಟಿ ಪ್ರೀಮಿಯಂ ದರವನ್ನು ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಅಖಿಲ ಭಾರತ ಟ್ರಕ್ ಮಾಲೀಕರ ಮಹಾ ಒಕ್ಕೂಟ ಜೂನ್ 18ರಿಂದ ದೇಶಾದ್ಯಂತ ಅನಿರ್ದಿಷ್ಠಾವಧಿ ಮುಷ್ಕರ ನಡೆಸಲು ನಿರ್ಧರಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘಗಳ ಅಧ್ಯಕ್ಷ ಬಿ.ಚನ್ನಾರೆಡ್ಡಿ ಅವರು, ಕೇಂದ್ರ ಸರ್ಕಾರ ಪದೇಪದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡುತ್ತಲೇ ಬರುತ್ತಿದೆ.

ಜಿಎಸ್ಟಿ ಜಾರಿಯಾದರೆ ಪೆಟ್ರೋಲ್ ಬೆಲೆ ಎಷ್ಟಾಗಲಿದೆ?ಜಿಎಸ್ಟಿ ಜಾರಿಯಾದರೆ ಪೆಟ್ರೋಲ್ ಬೆಲೆ ಎಷ್ಟಾಗಲಿದೆ?

ಅಲ್ಲದೇ, ಅವೈಜ್ಞಾನಿಕ ರೀತಿಯಲ್ಲಿ ಮೂರನೇ ಪಾರ್ಟಿ ಇನ್ಶೂುರೆನ್ಸ್ ಪ್ರೀಮಿಯಂ ದರವನ್ನು ಹೆಚ್ಚಳ ಮಾಡಿದೆ. ಇದರಿಂದ ಟ್ರಕ್ ಮಾಲೀಕರು ಮತ್ತು ಸಿಬ್ಬಂದಿ ಭಾರೀ ಪ್ರಮಾಣದಲ್ಲಿ ಹೊರೆಯಾಗುತ್ತಿದೆ ಎಂದು ದೂರಿದರು.

Truck owners Association hold protest against fuel price hike

ಈ ಹಿನ್ನೆಲೆಯಲ್ಲಿ ಹೆಚ್ಚಳವಾಗಿರುವ ತೈಲ ಬೆಲೆ ಇಳಿಕೆ ಮತ್ತು ಮೂರನೇ ಪಾರ್ಟಿ ಇನ್ಶೂರೆನ್ಸ್ ಪ್ರೀಮಿಯಂ ದರವನ್ನು ರದ್ದು ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಲವು ಬಾರಿ ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಇಡೀ ದೇಶಾದ್ಯಂತ ಟ್ರಕ್ ಮಾಲೀಕರು ಬೇಡಿಕೆ ಈಡೇರುವವರೆಗೆ ಮುಷ್ಕರ ನಡೆಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

2012 ರಿಂದ ಡೀಸೆಲ್ ಬೆಲೆ ಸಾಕಷ್ಟು ಹೆಚ್ಚಳವಾಗಿದ್ದು, ಥರ್ಡ್ ಪಾರ್ಟಿ ಇನ್ಶೂರೆನ್ಸ್ ಪ್ರೀಮಿಯಂನಲ್ಲಿ ಭಾರೀ ಹೆಚ್ಚಳ ಮಾಡಿರುವುದರಿಂದ ವಾಹನಗಳ ಮಾಲೀಕರಿಗೆ ಭಾರೀ ಪ್ರಮಾಣದಲ್ಲಿ ಹೊರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಎರಡು ಪ್ರಮುಖ ಬೇಡಿಕೆಗಳು ಸೇರಿದಂತೆ ವಾಹನ ಮಾಲೀಕರ ಇನ್ನಿತರೆ ಬೇಡಿಕೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.

ರಸ್ತೆ ಸಾರಿಗೆ ವ್ಯವಸ್ಥೆ ಭಾರತದ ಆರ್ಥಿಕತೆಯ ಅವಿಭಾಜ್ಯ ಅಂಗವಾಗಿದೆ. ಇದಲ್ಲದೇ, ರೈಲ್ವೆ, ವೈಮಾನಿಕ ಸರಕು ಸಾಗಣೆ ಮತ್ತು ಬಂದರು ಸಾಗಣೆ ವ್ಯವಸ್ಥೆಯೂ ಪ್ರಮುಖ ಸರಕು ಸಾಗಣೆ ವ್ಯವಸ್ಥೆಗಳಾಗಿವೆ. ಆದರೆ, ರೈಲ್ವೆ, ವೈಮಾನಿಕ ಮತ್ತು ಶಿಪ್ಪಿಂಗ್ಗೆದ ರಸ್ತೆ ಸಾರಿಗೆ ಸರಕು ಸಾಗಣೆ ಅಗತ್ಯವಿದೆ.

ಇದಿಲ್ಲದಿದ್ದರೆ ಈ ಮೂರೂ ಕ್ಷೇತ್ರಗಳಲ್ಲಿ ಸರಕು ಸಾಗಣೆಗೆ ಅವಕಾಶವೇ ಇರುವುದಿಲ್ಲ. ಟ್ರಕ್ಗಿಳಿಂದ ಈ ಮೂರೂ ಕ್ಷೇತ್ರಗಳಿಗೆ ಸರಕು ಸಾಗಿಸಿದರೆ ಮಾತ್ರ ಸರಕು ಸಾಗಣೆ ವ್ಯವಸ್ಥೆ ಸುಗಮವಾಗಿ ಸಾಗಲು ಸಾಧ್ಯವಾಗುತ್ತದೆ. ಇಂತಹ ಅತ್ಯಂತ ಪ್ರಮುಖವಾದ ಸರಕು ಸಾಗಣೆ ವ್ಯವಸ್ಥೆಯಾಗಿರುವ ಟ್ರಕ್‌ಗಳಿಗೆ ಭಾರೀ ಹೊಡೆತ ನೀಡುತ್ತಿರುವುದು ಗಣನೀಯವಾಗಿ ಹೆಚ್ಚಳವಾಗುತ್ತಿರುವ ಇಂಧನದ ಬೆಲೆ. ಇದಲ್ಲದೇ, ಹೆದ್ದಾರಿಗಳಲ್ಲಿ ದುಬಾರಿ ಟೋಲ್ ಕಟ್ಟಲೇಬೇಕಾಗಿರುವುದು.

2012 ರಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 45.73 ರೂಪಾಯಿ ಇದ್ದರೆ, 2018 ರಲ್ಲಿ 66.37 ರೂಪಾಯಿ ಇದೆ. ಅದೇ ರೀತಿ 2012 ರಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 73.5 ರೂಪಾಯಿ ಇದ್ದರೆ, ಪ್ರಸ್ತುತ 75.06 ರೂಪಾಯಿ ಇದೆ. ಬೇರೆ ರಾಜ್ಯಗಳಲ್ಲಿ ಈ ಬೆಲೆ ಇನ್ನೂ ಹೆಚ್ಚಿದೆ.

ಈ ಬೆಲೆ ಏರಿಕೆಯನ್ನು ಗಮನಿಸಿದರೆ ರಸ್ತೆ ಸಾರಿಗೆಗೆ ಅಗತ್ಯವಾಗಿ ಬೇಕಾಗಿರುವ ಡೀಸೆಲ್ ಬೆಲೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಹೆಚ್ಚಳವಾಗುತ್ತಲೇ ಬರುತ್ತಿದೆ. ಆದರೆ, ಕೇಂದ್ರ ಪೆಟ್ರೋಲಿಯಂ ಇಲಾಖೆ ಈ ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಲೇ ಬರುತ್ತಿದೆ. ಇದರೊಂದಿಗೆ ಡೀಸೆಲ್ ಮೇಲೆ ಅಪಾರ ಪ್ರಮಾಣದ ತೆರಿಗೆಗಳನ್ನು ವಿಧಿಸುತ್ತಿದೆ.

ಇದರ ಪರಿಣಾಮ ಟ್ರಕ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಟ್ರಕ್ ಮಾಲೀಕರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಡೀಸೆಲ್ ಮೇಲೆ ವಿಧಿಸುತ್ತಿರುವ ವಿನಾ ಕಾರಣದ ದುಬಾರಿ ತೆರಿಗೆಗಳನ್ನು ಕಡಿಮೆ ಮಾಡಿ, ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕೆಂದು ಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘಗಳ ಮಹಾ ಒಕ್ಕೂಟದ ಮುಖ್ಯ ಕಾರ್ಯದರ್ಶಿ ಗೋಪಾಲಸ್ವಾಮಿ ಆಗ್ರಹಿಸಿದರು.

English summary
To protest against the abrupt fuel rise, truck operators of all over India are going for an indefinite strike on June 1.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X