Parliament session: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ: ಜೋಶಿ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಬರೆದ ಪತ್ರ ಸದ್ಯ ಕೇಂದ್ರ ರಾಜಕಾರಣದಲ್ಲಿ ವಾದ ಪ್ರತಿವಾದಗಳನ್ನು ಹುಟ್ಟುಹಾಕಿದೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಚರ್ಚಿಸುವ ವಿಷಯಗಳ ಪಟ್ಟಿಯೊಂದಿಗೆ ಸೋನಿಯಾ ಗಾಂಧಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದರು.

ಆದರೆ ಇದು ಅನಗತ್ಯ ವಿವಾದ ಸೃಷ್ಟಿಸುವ ಯತ್ನ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಸಂಸತ್ತಿನ ಕಾರ್ಯವೈಖರಿಯನ್ನು ರಾಜಕೀಯಗೊಳಿಸಲು ಮತ್ತು ಅನಗತ್ಯ ವಿವಾದಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಜೋಶಿ ಬುಧವಾರ ವಾಗ್ದಾಳಿ ಮಾಡಿದ್ದಾರೆ.

Trying to create unnecessary controversy: Joshi hits back at Sonia Gandhis letter to PM

ವಿಶೇಷ ಸಂಸತ್ ಅಧಿವೇಶನಕ್ಕೆ ಯಾವುದೇ ಕಾರ್ಯಸೂಚಿಯನ್ನು ಪಟ್ಟಿ ಮಾಡಲಾಗಿಲ್ಲ ಎಂದು ಸೂಚಿಸಿ ಸೋನಿಯಾ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಬಳಿಕ ಜೋಶಿ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಮಣಿಪುರದಲ್ಲಿ ಹಿಂಸಾಚಾರ ಮತ್ತು ಬೆಲೆ ಏರಿಕೆ ಸೇರಿದಂತೆ ಒಂಬತ್ತು ವಿಷಯಗಳನ್ನು ಮುಂಬರುವ ಅಧಿವೇಶನದಲ್ಲಿ ಚರ್ಚೆಗೆ ಪಟ್ಟಿ ಮಾಡಲಾಗುವುದು ಎಂದು ಸೋನಿಯಾ ಗಾಂಧಿಯವರು ಮೋದಿ ಅವರಿಗೆ ಬರೆದ ಪತ್ರದಲ್ಲಿ ಪ್ರಸ್ತಾಪಿಸಿದ್ದರು.

ಪ್ರಧಾನಿಗೆ ಸೋನಿಯಾ ಗಾಂಧಿ ಬರೆದ ಪತ್ರ ಸದ್ಯ ಬಿಜೆಪಿ ವಲಯದಲ್ಲಿ ವಾಗ್ದಾಳಿಗೆ ಎಡೆ ಮಾಡಿದೆ. ಈ ಬಗ್ಗೆ ಕಿಡಿ ಕಾರಿದ ಸಚಿವ ಪ್ರಹ್ಲಾದ್ ಜೋಶಿ 'ಅನಗತ್ಯ ವಿವಾದ ಸೃಷ್ಟಿಸಲು ಯತ್ನ' ಎಂದಿದ್ದಾರೆ.

'ನಮ್ಮ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನ ಕಾರ್ಯನಿರ್ವಹಣೆಯನ್ನು ರಾಜಕೀಯಗೊಳಿಸಲು ಮತ್ತು ಅನಗತ್ಯ ವಿವಾದಗಳನ್ನು ಸೃಷ್ಟಿಸಲು ನೀವು ಪ್ರಯತ್ನಿಸುತ್ತಿರುವುದು ಅತ್ಯಂತ ದುರದೃಷ್ಟಕರ' ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸೋನೊಯಾ ಗಾಂಧಿಗೆ ಪ್ರತಿಕ್ರಿಯಿಸಿದ್ದಾರೆ.

Trying to create unnecessary controversy: Joshi hits back at Sonia Gandhis letter to PM

ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿ ಸೆಪ್ಟೆಂಬರ್ 18 ರಿಂದ ಸಂಸತ್ತಿನ ಅಧಿವೇಶನವನ್ನು ಕರೆಯಲಾಗಿದೆ ಎಂದು ಅವರು ಹೇಳಿದರು. ರಾಜಕೀಯ ಪಕ್ಷಗಳೊಂದಿಗೆ ಈ ಬಗ್ಗೆ ಎಂದಿಗೂ ಮುಂಚಿತವಾಗಿ ಸಮಾಲೋಚಿಸುವುದಿಲ್ಲ ಎಂದು ಜೋಶಿ ಹೇಳಿದರು.

ಪ್ರಧಾನಿಗೆ ಬರೆದ ಪತ್ರದಲ್ಲಿ ಗಾಂಧಿ ಅವರು ಚರ್ಚೆಗಾಗಿ ಪಟ್ಟಿ ಮಾಡಿರುವ ವಿಷಯಗಳ ಬಗ್ಗೆ ಜೋಶಿ ಅವರು, ಮುಂಗಾರು ಅಧಿವೇಶನದಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಈಗಾಗಲೇ ಸರ್ಕಾರದಿಂದ ಸೋನಿಯಾ ಗಾಂಧಿಯವರು ಪತ್ರದಲ್ಲಿ ಸೂಚಿಸಿದ ವಿಷಯಗಳನ್ನು ಚರ್ಚಿಸಲಾಗಿದೆ ಮತ್ತು ಉತ್ತರಿಸಲಾಗಿದೆ ಎಂದು ಹೇಳಿದರು. ಸಂಸತ್ತಿನ ವಿಶೇಷ ಅಧಿವೇಶನವನ್ನು ಸೆಪ್ಟೆಂಬರ್ 18 ರಿಂದ ಸೆಪ್ಟೆಂಬರ್ 22 ರವರೆಗೆ ನಿಗದಿಪಡಿಸಲಾಗಿದೆ.

ಸೋನಿಯಾ ಗಾಂಧಿ ಮೋದಿಗೆ ಬರೆದ ಪತ್ರದಲ್ಲಿ ಏನಿದೆ?

ಸೆಪ್ಟೆಂಬರ್ 18-22 ರಂದು ನಡೆಯಲಿರುವ ಸಂಸತ್ ಅಧಿವೇಶನದ ಕಾರ್ಯಸೂಚಿಯನ್ನು ಕೋರಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪ್ರಧಾನಿ ಮೋದಿಗೆ ಅವರಿಗೆ ಸೋನಿಯಾ ಗಾಂಧಿ ಅವರು ಬರೆದ ಪತ್ರದಲ್ಲಿ ಒಂಬತ್ತು ವಿಷಯಗಳನ್ನು ಪಟ್ಟಿ ಮಾಡಿದ್ದಾರೆ. ಜೊತೆಗೆ ಮುಂಬರುವ ಅಧಿವೇಶನದಲ್ಲಿ ಅವುಗಳ ಬಗ್ಗೆ ಚರ್ಚೆಗೆ ಸಮಯಾವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

"ನೀವು ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನವನ್ನು ಸೆಪ್ಟೆಂಬರ್ 18, 2023 ರಿಂದ ಕರೆದಿರುವಿರಿ. ಈ ವಿಶೇಷ ಅಧಿವೇಶನವನ್ನು ಇತರ ರಾಜಕೀಯ ಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆಯಿಲ್ಲದೆ ಕರೆಯಲಾಗಿದೆ ಎಂದು ನೀವು ಗಮನಿಸಬೇಕು. ನಮ್ಮಲ್ಲಿ ಯಾರಿಗೂ ಅದರ ಕಾರ್ಯಸೂಚಿಯ ಬಗ್ಗೆ ಯಾವುದೇ ಕಲ್ಪನೆ ಇಲ್ಲ" ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಈ ಅಧಿವೇಶನದಲ್ಲಿ ಚರ್ಚೆಗೆ ತೆಗೆದುಕೊಳ್ಳಬೇಕಾದ ಒಂಬತ್ತು ವಿಷಯಗಳನ್ನು ಪಟ್ಟಿ ಮಾಡಿದ ಸೋನಿಯಾ ಗಾಂಧಿ, "ಈ ವಿಷಯಗಳ ಬಗ್ಗೆ ಚರ್ಚೆಗೆ ಸೂಕ್ತ ನಿಯಮಗಳ ಅಡಿಯಲ್ಲಿ ಸಮಯವನ್ನು ನಿಗದಿಪಡಿಸಲಾಗುವುದು ಎಂದು ನಾನು ಪ್ರಾಮಾಣಿಕವಾಗಿ ಭಾವಿಸುತ್ತೇನೆ" ಎಂದು ಹೇಳಿದ್ದಾರೆ.

ಚರ್ಚೆಯ ವಿಷಯಗಳು ಮುಖ್ಯವಾಗಿ-

ಅಗತ್ಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, ರೈತ ಸಂಘಟನೆಗಳಿಗೆ ಮಾಡಿದ ಬದ್ಧತೆ, ಅದಾನಿ ವ್ಯಾಪಾರ ಸಮೂಹದ ವಹಿವಾಟುಗಳ ತನಿಖೆ, ಮಣಿಪುರದ ಜನರು ಎದುರಿಸುತ್ತಿರುವ ನಿರಂತರ ಸಮಸ್ಯೆ, ಹರಿಯಾಣದಂತೆ ವಿವಿಧ ರಾಜ್ಯಗಳಲ್ಲಿ ಕೋಮು ಉದ್ವಿಗ್ನತೆ, ಚೀನಾದಿಂದ ಭಾರತೀಯ ಭೂಪ್ರದೇಶದ ಮುಂದುವರಿದ ಆಕ್ರಮಣ, ಕೇಂದ್ರ-ರಾಜ್ಯ ಸಂಬಂಧಗಳ ಮೇಲೆ ಆಗುತ್ತಿರುವ ಹಾನಿ, ರಾಜ್ಯಗಳಲ್ಲಿ ಆಗುತ್ತಿರುವ ಅತಿವೃಷ್ಟಿ ಮತ್ತು ಅನಾವೃಷ್ಟಿ ಇಂತೆಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸಮಯವಕಾಶ ಕೋರಿ ಸೋನಿಯಾ ಗಾಂಧಿ ಅವರು ಮೋದಿಗೆ ಪತ್ರ ಬರೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+