TTD: ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ: ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ ಸಿಸಿಬಿ
TTD: ತಿರುಪತಿ ಲಡ್ದು ಪ್ರಸಾದದಲ್ಲಿ ಕಲಬೆರಿಕೆ ತುಪ್ಪ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ತನಿಖಾ ತಂಡ ಅಂತಿಮ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ನಲ್ಲೂರು ಎಸಿಬಿ ನ್ಯಾಯಾಲಯಕ್ಕೆ ಸಿಬಿಐ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ ಒಟ್ಟು 36 ಪ್ರಮುಖ ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಇವರಲ್ಲಿ ಕಲಬೆರಿಕೆ ತುಪ್ಪ ಪೂರೈಸಿದ ಡೈರಿ ಮಾಲೀಕರು, ಮಾಜಿ ಟಿಟಿಡಿ ಅಧಿಕಾರಿಗಳು ಕೂಡ ಇದ್ದಾರೆ.
15 ತಿಂಗಳುಗಳ ಕಾಲ 12 ರಾಜ್ಯಗಳಲ್ಲಿ ನಡೆಸಿದ ತನಿಖೆ ಬಳಿಕ ಸಿಬಿಐ ಅಧಿಕಾರಿಗಳು ಅಂತಿಮ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 2019ರಿಂದ 2024ರವರೆಗೆ ಟಿಟಿಡಿಗೆ ಸರಬರಾಜು ಮಾಡಲಾದ ಸುಮಾರು 250 ಕೋಟಿ ರೂ ಮೌಲ್ಯದ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ ಆಗಿತ್ತು ಎಂದು ಉಲ್ಲೇಖಿಸಲಾಗಿದೆ.

ಶುದ್ಧ ಹಾಲಿನ ತುಪ್ಪದ ಬದಲಿಗೆ ಪಾಮ್ ಆಯಿಲ್, ಕರ್ನಲ್ ಆಯಿಲ್, ರಾಸಾಯನಿಕ ಮಿಶ್ರಣಗಳು, ಪ್ರಾಣಿ ಕೊಬ್ಬು ಮತ್ತು ಇಅತರ ಕಡಿಮೆ ದರದ ಮಿಶ್ರಣಗಳನ್ನು ಬಳಸಿ ಕಲಬೆರಿಕೆ ತುಪ್ಪ ತಯಾರಿಸಿ ಕೊಡಲಗಿತ್ತು. ಇದನ್ನು ಶುದ್ಧ ತುಪ್ಪದಂತೆ ಕಾಣುವಂತೆ ಮಾಡಲಾಗಿತ್ತು ಎಂದು ಸಿಬಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಉತ್ತರಾಖಂಡದ ಭೋಲೆ ಬಾಬಾ ಆರ್ಗಾನಿಕ್ ಡೈರಿ (ನಿರ್ದೇಶಕರು ಪೊಮಿಲ್ ಜೈನ್ ಮತ್ತು ವಿಪಿನ್ ಜೈನ್) ಈ ನಕಲಿ ತುಪ್ಪದ ರಾಕೇಟ್‌ನ ಮುಖ್ಯ ಕೇಂದ್ರ ಎಂದು ತನಿಖೆ ಗುರುತಿಸಿದೆ. ವೈಷ್ಣವಿ ಡೈರಿ (ಸಿಇಒ ಅಪೂರ್ವ ವಿನಾಯಕಾಂತ್ ಚಾವ್ಡಾ), ಎಆರ್ ಡೈರಿ (ಎಂಡಿ ಆರ್ ರಾಜಶೇಖರನ್), ದೆಹಲಿಯ ವ್ಯಾಪಾರಿ ಅಜಯ್ ಕುಮಾರ್ ಸುಗಂಧ್ (ರಾಸಾಯನಿಕ ಸರಬರಾಜುದಾರ), ಮಾಜಿ ಟಿಟಿಡಿ ಅಧಿಕಾರಿಗಳಾದ ಪ್ರಳಯ ಕಾವೇರಿ ಮುರಳಿ ಕೃಷ್ಣ, ಆರ್‌ಎಸ್‌ಎಸ್‌ವಿಆರ್ ಸುಬ್ರಹ್ಮಣ್ಯಂ ಮತ್ತು ಇತರರು ಪ್ರಮುಖ ಆರೋಪಿಗಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ.












Click it and Unblock the Notifications