TV9 Bharatvarsh Opinion Poll: ಹೊರಬಿತ್ತು ಮತ್ತೊಂದು ಲೋಕಸಭಾ ಚುನಾವಣೆ ಸಮೀಕ್ಷೆ- ಮತ್ತೆ ಮೋದಿ ಕಮಾಲ್‌?

ನವದೆಹಲಿ, ಮಾರ್ಚ್ 16: 2024ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಈ ಬಾರಿ ದೇಶದ ಆಡಳಿತ ಚುಕ್ಕಾಣಿ ಹಿಡಿಯುವ ಪಕ್ಷ ಯಾವುದು ಎನ್ನುವ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನೇಕ ಚುನಾವಣಾ ಪೂರ್ವ ಸಮೀಕ್ಷೆಗಳ ನಡೆಯುತ್ತಿದ್ದು, ಈ ಪೈಕಿ ಇಂದು ಟಿವಿ 9 ಭಾರತ್‌ ವರ್ಷ ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ.

ಪೀಪಲ್ಸ್ ಇನ್‌ಸೈಟ್ ಮತ್ತು ಪೋಲ್‌ ಸ್ಮಾಟ್ ಸಹಯೋಗದೊಂದಿಗೆ 543 ಲೋಕಸಭಾ ಕ್ಷೇತ್ರಗಳಲ್ಲಿ ಟಿವಿ9 ಭಾರತವರ್ಷ ಅಭಿಪ್ರಾಯ ಸಂಗ್ರಹಿಸಿದೆ. ಈ ಸಮೀಕ್ಷೆಯಲ್ಲಿ ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ 73 ಸ್ಥಾನಗಳನ್ನು ಎನ್‌ಡಿಎ ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ.

TV9 Bharatvarsh Opinion Poll Regarding Lok Sabha Election 2024

ದೇಶದ ಅತ್ಯಂತ ಪ್ರಮುಖ ಮತ್ತು ದೊಡ್ಡ ರಾಜ್ಯವಾದ ಉತ್ತರ ಪ್ರದೇಶ ಹಿಡಿದು ಹತ್ತಕ್ಕೂ ಹೆಚ್ಚು ರಾಜ್ಯಗಳಲ್ಲಿ ಈ ಸಮೀಕ್ಷೆ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಕ್ಲೀನ್ ಸ್ವೀಪ್‌ ಮಾಡುವ ಸುಳಿವು ಸಿಕ್ಕಿದ್ದು, ಕಾಂಗ್ರೆಸ್‌ಗೆ ಭಾರೀ ಹಿನ್ನೆಡೆಯಾಗಲಿದೆ ಎನ್ನಲಾಗಿದೆ. ಬಿಜೆಪಿ ಬರೋಬ್ಬರಿ 70 ಸ್ಥಾನಗಳಲ್ಲಿ ಗೆಲ್ಲಲಿದ್ದು, ಎನ್‌ಡಿಎ ಒಕ್ಕೂಟ ಒಟ್ಟು 73 ಸ್ಥಾನಗಳಲ್ಲಿ ಗೆಲ್ಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಇಂಡಿಯಾ ಒಕ್ಕೂಟದಲ್ಲಿ ಕಾಂಗ್ರೆಸ್ ಕೇವಲ 1 ಸ್ಥಾನವನ್ನು ಗೆಲ್ಲುತ್ತದೆ ಎಂದು ಸಮೀಕ್ಷೆ ಹೇಳಿದೆ. ಇನ್ನು ಇಂಡಿಯಾ ಮೈತ್ರಿಕೂಟದ ಪಾಲುದಾರ ಅಖಿಲೇಶ್ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷ (ಎಸ್‌ಪಿ) ಸುಮಾರು 6 ಸ್ಥಾನಗಳನ್ನು ಗೆಲ್ಲಲಿದ್ದು, ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ಮತ್ತು ಇತರ ಸಣ್ಣ ಪಕ್ಷಗಳು ಒಂದೇ ಒಂದು ಕ್ಷೇತ್ರದಲ್ಲಿ ಗೆಲವು ಸಾಧಿಸಲು ಸಾಧ್ಯವಿಲ್ಲ ಎಂದು ಸಮೀಕ್ಷೆ ತಿಳಿಸಿದೆ.

TV9 Bharatvarsh Opinion Poll Regarding Lok Sabha Election 2024

ಬಿಹಾರದಲ್ಲಿ 17 ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ರಾಜ್ಯದ ಒಟ್ಟು 40 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 38 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಈ ಪೈಕಿ ಬಿಜೆಪಿ 17 ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆಯಿದ್ದರೆ, ಇತರ ಪಕ್ಷಗಳು 15, 5 ಮತ್ತು 1 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಸಮೀಕ್ಷೆ ತಿಳಿಸಿದೆ.

ಪಂಜಾಬ್‌ನಲ್ಲಿ ಎಎಪಿ ಅಲೆ

ಆಮ್ ಆದ್ಮ ಪಕ್ಷ (ಎಎಪಿ) ಆಡಳಿತವಿರುವ ಪಂಜಾಬ್‌ನಲ್ಲಿ ಬಿಜೆಪಿ ಕೇವಲ ಎರಡು ಸ್ಥಾನಗಳನ್ನು ಪಡೆಯಲಿದ್ದು, ರಾಜ್ಯದ ಒಟ್ಟು 13 ಲೋಕಸಭಾ ಸ್ಥಾನಗಳಲ್ಲಿ ಸುಮಾರು 11 ಸ್ಥಾನಗಳನ್ನು ಎಎಪಿ ಪಕ್ಷ ಗೆಲ್ಲುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಹರಿಯಾಣ, ಉತ್ತರಾಖಂಡ ಮತ್ತು ಛತ್ತೀಸ್‌ಗಢ ಕೇಸರಿ ಮಯ

ಹರಿಯಾಣ, ಉತ್ತರಾಖಂಡ ಮತ್ತು ಛತ್ತೀಸ್‌ಗಢದಲ್ಲೂ ಬಿಜೆಪಿ ಮತ್ತು ಎನ್‌ಡಿಎ ಭರ್ಜರಿ ಜಯ ಸಾಧಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. ಈ ರಾಜ್ಯಗಳಲ್ಲಿ ಎನ್‌ಡಿಎ ಒಕ್ಕೂಟ 25ರಲ್ಲಿ 24 ಸ್ಥಾನಗಳನ್ನು ಗಳಿಸಲು ಸಜ್ಜಾಗಿದೆ ಎಂದು ಸಮೀಕ್ಷೆಯ ಫಲಿತಾಂಶಗಳು ತಿಳಿಸಿದೆ.

ರಾಜಸ್ಥಾನ & ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಭರ್ಜರಿ ಜಯ

ಸಮೀಕ್ಷೆಯ ಪ್ರಕಾರ ರಾಜಸ್ಥಾನದಲ್ಲಿ ಬಿಜೆಪಿಗೆ 23 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೊಂದು ಕ್ಲೀನ್ ಸ್ವೀಪ್ ಮಾಡಲಿದ್ದು, ಇಲ್ಲಿನ 29 ಕ್ಷೇತ್ರಗಳಲ್ಲಿ 29 ಕ್ಷೇತ್ರದಲ್ಲಿಯೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+