ಹಜರಿಬಾಗ್ ರೈಲ್ವೆ ನಿಲ್ದಾಣದಲ್ಲಿ ಅವಳಿ ಸ್ಫೋಟ, ಕೈ ಕಳೆದುಕೊಂಡ ಬಾಲಕ

ಗಿರಿದಿಹ್ (ಜಾರ್ಖಂಡ್) , ಮೇ 22 : ಜಾರ್ಖಂಡ್ ನ ಹಜರಿಬಾಗ್ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ತಡರಾತ್ರಿ ಅವಳಿ ಸ್ಫೋಟ ಸಂಭವಿಸಿದೆ.

ಹಜರಿಬಾಗ್ ರೈಲ್ವೆ ನಿಲ್ದಾಣದಲ್ಲಿ ಜನಜಂಗುಳಿ ಮಧ್ಯೆ ಎರಡು ಸ್ಫೋಟಗಳು ಸಂಭವಿಸಿವೆ. ಸ್ಫೋಟದ ರಭಸಕ್ಕೆ ಜನರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಈ ಸ್ಫೋಟದಲ್ಲಿ ಓರ್ವ ಬಾಲಕ ತನ್ನ ಬಲಗೈ ಕಳೆದುಕೊಂಡಿದ್ದು, ಧನ್ ಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Twin blasts hit Jharkhand railway station, cause unknown

ಸ್ಫೋಟಕ್ಕೆ ಕಾರಣವಾದ ವಸ್ತುವನ್ನು ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್‌ನಲ್ಲಿ ಸುತ್ತಿ ಎಸೆಯಲಾಗಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಆದರೆ, ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಬಾಂಬ್ ಸ್ಫೋಟಗೊಂಡ ರೈಲ್ವೆ ನಿಲ್ದಾಣದ ಮೂಲಕ ದೆಹಲಿಯಿಂದ ಕೋಲ್ಕತ್ತಾಗೆ ಹೋಗುವ ರೈಲುಗಳು ಸಂಚರಿಸುತ್ತವೆ. ಸದ್ಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ.

{promotion-urls}

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+