ಪುಲ್ವಾಮಾ ದಾಳಿಗೆ ಪ್ರತ್ಯುತ್ತರ, ವಾಯುಸೇನೆಗೆ ಬಹುಪರಾಕ್

ನವೆದೆಹಲಿ, ಫೆಬ್ರವರಿ 26 : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಗೆ ಭಾರತ ಪ್ರತ್ಯುತ್ತರ ನೀಡಿದೆ. ಭಾರತೀಯ ವಾಯು ಸೇನೆ ಪೈಲಟ್ ಗಳಿಗೆ ನನ್ನ ನಮನ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ. ವಾಯುಸೇನೆಯ ದಾಳಿ ಕುರಿತಂತೆ ಟ್ವಿಟ್ಟರ್ ನಲ್ಲಿ ಹಲವಾರು ಪ್ರತಿಕ್ರಿಯೆಗಳು ಬಂದಿವೆ.

ಭಾರತೀಯ ವಾಯುಸೇನೆಯು ಭಯೋತ್ಪಾದಕ ನೆಲೆಯ ಮೇಲೆ 1000 ಕೆಜಿ ಬಾಂಬ್ ಅನ್ನು ಎಸೆದಿರುವುದಾಗಿ ಖಚಿತ ಮಾಹಿತಿ ಲಭ್ಯವಾಗಿದೆ ಎಂದು ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ಐಎಎಫ್(ಭಾರತೀಯ ವಾಯುಸೇನೆ) ಮೂಲಗಳು ಮಾಹಿತಿ ನೀಡಿರುವುದಾಗಿ ಅದು ಉಲ್ಲೇಖಿಸಿದೆ.

ಫೆಬ್ರವರಿ 14 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಆದಿಲ್ ದಾರ್ ಎಂಬ ಆತ್ಮಾಹುತಿ ದಾಳಿಕೋರ ಕಾರ್ ಬಾಂಬ್ ಸ್ಫೋಟಿಸಿ 44 ಯೋಧರ ಬಲಿದಾನಕ್ಕೆ ಕಾರಣವಾಗಿದ್ದ. ಅದರ ಪ್ರತೀಕಾರ ಎಂಬಂತೆ ಭಾರತ ಈಗ ಉಗ್ರನೆಲೆ ಮೇಲೆ ದಾಳಿ ನಡೆಸಿದೆ.

ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮಾಡಿ, ಭಾರತೀಯ ವಾಯು ಸೇನೆ ಪೈಲಟ್ ಗಳ ಬಗ್ಗೆ ಹೆಮ್ಮೆಯಿದೆ. ಪಾಕಿಸ್ತಾನ ಬೆಂಬಲಿತ ಉಗ್ರರ ನೆಲೆ ಮೇಲೆ ದಾಳಿ ನಡೆಸಿದ್ದು ಸಂತಸದ ತಂದಿದೆ ಎಂದಿದ್ದಾರೆ.

ಓಮರ್ ಅಬ್ದುಲ್ಲಾ ಪ್ರತಿಕ್ರಿಯೆ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಮಾಜಿ ಶಾಸಕ ಒಮರ್ ಅಬ್ದುಲ್ಲಾ ಅವರು ಪ್ರತಿಕ್ರಿಯೆ ನೀಡಿ, ವಾಹ್! ಈ ಸುದ್ದಿ ನಿಜವೇ ಆದರೆ, ಬಹಳ ಸಂತೋಷ, ಇಷ್ಟು ದೊಡ್ಡ ಪ್ರಮಾಣದ ದಾಳಿಯನ್ನು ಉಗ್ರರು ಊಹಿಸಲು ಸಾಧ್ಯವಿಲ್ಲ. ಅಧಿಕೃತ ಮಾಹಿತಿಗಾಗಿ ಕಾಯುತ್ತಿದ್ದೇನೆ ಎಂದಿದ್ದಾರೆ.

ಪಾಕಿಸ್ತಾನದ ಉತ್ತರ ಏನಿರುತ್ತೆ

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಭಾರತಕ್ಕೆ ಉತ್ತರ ನೀಡುತ್ತೇವೆ ಎಂದಿದ್ದಾರೆ. ಯಾವ ರೀತಿ ಉತ್ತರ ಎಂದು ತಿಳಿಯಲು ಉತ್ಸುಕನಾಗಿದ್ದೇನೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಇದು ಮೋದಿಯ ಭಾರತ

ಇದು ಮೋದಿಯ ಭಾರತ, ಉಗ್ರರ ನೆಲೆಯನ್ನು ಧ್ವಂಸಗೊಳಿಸದೇ ಬಿಡುವುದಿಲ್ಲ. ವಾಯುಸೇನೆ ಪೈಲಟ್ ಗಳು ಗಡಿ ನಿಯಂತ್ರಣ ರೇಖೆ(ಎಲ್ ಒ ಸಿ)ದಾಟಿ ಉಗ್ರರ ನೆಲೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.

ಮುಶ್ರಫ್ ಜೈದಿ ಟ್ವೀಟ್

ದಾಳಿ ನಡೆದ ಸ್ಥಳದ ಬಗ್ಗೆ ಚರ್ಚೆ ಹುಟ್ಟಿಕೊಂಡಿದ್ದು, Balakot ಬಗ್ಗೆ ಸ್ಪಷ್ಟ ಚಿತ್ರಣ ನೀಡಿ ಮುಶ್ರಫ್ ಜೈದಿ ಅವರು ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+