ಇಂಜಿನಿಯರ್ಸ್ ಡೇ : ಸರ್ ಎಂವಿ ಸಾಧನೆ ಸ್ಮರಿಸಿದ ಟ್ವೀಟ್ ಲೋಕ
ಬೆಂಗಳೂರು, ಸೆಪ್ಟೆಂಬರ್ 15: ಭಾರತದ ಇಂಜಿನಿಯರ್ ಕ್ಷೇತ್ರದಲ್ಲಿ ಸರ್ ಎಂವಿ ಅವರು ಸಲ್ಲಿಸಿರುವ ಅಪಾರ ಕೊಡುಗೆಯ ಸ್ಮರಣೆಗಾಗಿ ಇವರ ಜನ್ಮ ದಿನವನ್ನು (ಸೆಪ್ಟೆಂಬರ್ 15) ಭಾರತದಲ್ಲಿ ಪ್ರತಿವರ್ಷ ಇಂಜಿನಿಯರ್ಸ್ ದಿನವಾಗಿ ಆಚರಿಸಲಾಗುತ್ತದೆ.
ದೇಶದೆಲ್ಲೆಡೆಯಿಂದ ಸರ್. ಎಂ. ವಿಶ್ವೇಶ್ವರಯ್ಯ ಅವರ ಕೊಡುಗೆಯನ್ನು ಸಾರ್ವಜನಿಕರು ಸ್ಮರಿಸುತ್ತಿದ್ದಾರೆ. ಟ್ವಿಟ್ಟರ್ ನಲ್ಲಿ #engineersday ಟಾಪ್ ಟ್ರೆಂಡಿಂಗ್ ನಲ್ಲಿತ್ತು.
ನದಿ ನೀರು ಹಂಚಿಕೆ ಸಮಸ್ಯೆ ಬಗ್ಗೆ ಮುಂಚಿತವಾಗಿ ಯೋಚನೆ ಮಾಡಿದ್ದ ಸರ್ ಎಂವಿ ಅವರು ಭಾರತದ ನದಿಗಳನ್ನು ಜೋಡಿಸುವ ಯೋಜನೆಯನ್ನು ರೂಪಿಸಿ ಅಂದಿನ ಪ್ರಧಾನಿ ಪಂಡಿತ್ ನೆಹರೂ ಅವರಿಗೆ ನೀಡಿದ್ದರು ಎಂದು ಸ್ಮರಿಸಲಾಗಿದೆ. ವಿಶ್ವೇಶ್ವರಯ್ಯ ಅವರಿಗಿದ್ದ ದೂರದೃಷ್ಟಿಯ ಫಲವನ್ನು ಉಣ್ಣುತ್ತಿರುವ ಜನತೆ ಪಾಲಿಗೆ ಪ್ರಾತಃ ಸ್ಮರಣೀಯರಾಗಿದ್ದಾರೆ.
ಕೃಷ್ಣರಾಜಸಾಗರ ನಿರ್ಮಾಣ, ಭದ್ರಾವತಿಯ ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಅಭಿವೃದ್ಧಿ, ಮೈಸೂರು ಸಾಬೂನು ಕಾರ್ಖಾನೆ, ಮೈಸೂರು ವಿಶ್ವವಿದ್ಯಾಲಯ, ಮೈಸೂರು ಬ್ಯಾಂಕ್, ಮೈಸೂರು ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಗ್ರಂಥಾಲಯಗಳ ಸ್ಥಾಪನೆ, ಮೈಸೂರು ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ, ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆ, ಶ್ರೀ ಜಯಚಾಮರಾಜೇಂದ್ರ ವೃತ್ತಿಶಿಕ್ಷಣ ತರಬೇತಿ ಸಂಸ್ಥೆಯ ಸ್ಥಾಪನೆ ಹೀಗೆ ವಿಶ್ವೇಶ್ವರಯ್ಯನವರ ಪ್ರಾಮಾಣಿಕತೆ, ವೃತ್ತಿಪರತೆಗಳು ಕೂಡ ದಂತೆಕತೆಗಳಾಗಿ ಹೋಗಿವೆ.
|
ವಿಶ್ವೇಶ್ವರಯ್ಯ ಅವರ ಕೊಡುಗೆ ಅಪಾರ
ಸರ್ ಎಂ. ವಿಶ್ವೇಶ್ವರಯ್ಯ ಅವರ ಕೊಡುಗೆ ಅಪಾರ, ಅವರು ಮೈಸೂರು ರಾಜ್ಯಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಹೈದರಾಬಾದ್, ಪುಣೆ, ಮುಂಬೈನಲ್ಲಿ ಜಲಾಶಯ, ಒಳ ಚರಂಡಿ ವ್ಯವಸ್ಥೆ ರೂಪಿಸಿದರು.
|
ಇಂಜಿನಿಯರ್ ಸಬ್ಜೆಕ್ಟ್ ಬಗ್ಗೆ ಟ್ವೀಟ್
ಇಂಜಿನಿಯರ್ ಸಬ್ಜೆಕ್ಟ್ ಬಗ್ಗೆ ಟ್ವೀಟ್ ಮಾಡಿ ಎಷ್ಟು ಕಷ್ಟ ಈ ವ್ಯಾಸಂಗ. ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಂದನೆ ಎಂದಿದ್ದಾರೆ.
|
ಸಾಧಕನ ತಾಯಿಯ ಚಿತ್ರ ನೋಡಿದ್ದೀರಾ
ಸರ್ ಎಂ ವಿಶ್ವೇಶ್ವರಯ್ಯ ಅವರ ಸಾಧನೆ ಜತೆಗೆ ಅಂಥಾ ಭಾರತ ರತ್ನರಿಗೆ ಜನ್ಮ ನೀಡಿದ ತಾಯಿಯನ್ನು ಸ್ಮರಿಸೋಣ ಎಂದು ಸರ್ ಎಂವಿ ಅವರ ತಾಯಿಯ ಚಿತ್ರ ಟ್ವೀಟ್ ಮಾಡಿದ್ದಾರೆ.
|
ನಿಜವಾದ ಸೇವೆ ಬಗ್ಗೆ ಸರ್ ಎಂವಿ ಮಾತು
ದುಡ್ಡಿನಿಂದ ಅಳೆಯಲಾಗದ, ಕೊಂಡು ತರಲಾದ ಸೇವೆಯೇ ನಿಜವಾದ ಸೇವೆ ಎಂಬ ಸರ್ ಎಂವಿ ಮಾತುಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಲಾಗಿದೆ.
|
ವಿಶ್ವೇಶ್ವರಯ್ಯ ಅವರ ನುಡಿಮುತ್ತುಗಳು
ಭಾರತರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ನುಡಿಮುತ್ತುಗಳನ್ನು ಬಳಸಿಕೊಂಡು ಟ್ವೀಟ್ ಮಾಡುತ್ತಿರುವ ಸಾರ್ವಜನಿಕರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications