₹10,000ಕ್ಕೆ ಭಾರತದ ಮಹತ್ವದ ಮಾಹಿತಿ ಪಾಕಿಸ್ತಾನಕ್ಕೆ ಕೊಡುತ್ತಿದ್ದ ಇಬ್ಬರು ಅರೆಸ್ಟ್
ಪಾಕಿಸ್ತಾನದೊಂದಿಗೆ ಭಾರತವು ಯುದ್ಧಕ್ಕೆ ಸಜ್ಜಾಗುತ್ತಿದೆ. ಮತ್ತೊಂದೆಡೆ ಪಾಕ್ ಇಲ್ಲಿನ ಗುಪ್ತ ಮಾಹಿತಿಗಳನ್ನು ಪಡೆಯಲು ಖತರ್ನಾಕ್ ಕೆಲಸ ಮಾಡಿದೆ. ಪಾಕಿಸ್ತಾನಕ್ಕೆ ಮಹತ್ವದ ಮಾಹಿತಿಗಳನ್ನು ರವಾನಿಸುತ್ತಿದ್ದ ಇಬ್ಬರು ಪಂಜಾಬ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಅಮೃತಸರದ ಸೇನಾ ಕಂಟೋನ್ಮೆಂಟ್ ಪ್ರದೇಶಗಳು ಮತ್ತು ವಾಯುನೆಲೆಗಳ ಸೂಕ್ಷ್ಮ ಮಾಹಿತಿ ಮತ್ತು ಫೋಟೋಗಳನ್ನು ಸೋರಿಕೆ ಮಾಡುವಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಅಮೃತಸರ ಗ್ರಾಮೀಣ ಪೊಲೀಸರು ಪಲಾಕ್ ಶೇರ್ ಮಸಿಹ್ ಮತ್ತು ಸೂರಜ್ ಮಸಿಹ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಹರ್‌ಪ್ರೀತ್ ಸಿಂಗ್ ಮೂಲಕ ಸ್ಥಾಪಿಸಲಾದ ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರೊಂದಿಗೆ ಅವರ ಸಂಪರ್ಕವಿದೆ ಎಂದು ತಿಳಿದುಬಂದಿದೆ. ಸದ್ಯ ಅವರು ಅಮೃತಸರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಪಾಕಿಸ್ತಾನ ಗುಪ್ತಚರ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದ್ದ ಪಾಲಕ್ ಶೇರ್ ಮಸಿಹ್ ಮತ್ತು ಸೂರಜ್ ಮಸಿಹ್ ಅವರ ಬಗ್ಗೆ ಅಂತಹ ಒಂದು ಮಾಹಿತಿ ಬಂದಿತ್ತು. ಅವರು ಸೂಕ್ಷ್ಮ ಸ್ಥಳಗಳ ಬಗ್ಗೆ ಮಾಹಿತಿಯನ್ನು ಸೋರಿಕೆ ಮಾಡಿದ್ದರು. ನಾವು ಅವರಿಬ್ಬರನ್ನೂ ಬಂಧಿಸಿದ್ದೇವೆ. ಅವರಿಂದ ಸಾಕಷ್ಟು ಡೇಟಾ ವಶಪಡಿಸಿಕೊಂಡಿದ್ದೇವೆ ಎಂದು ಅಮೃತಸರ ಗ್ರಾಮೀಣ ಎಸ್‌ಎಸ್‌ಪಿ ಮಣೀಂದರ್ ಸಿಂಗ್ ಹೇಳಿದ್ದಾರೆ.

ಅವರಿಗೆ ಐಎಸ್‌ಐ ಜೊತೆ ಸಂಪರ್ಕವಿರುವ ತಂದ ಹರ್‌ಪ್ರೀತ್ ಎಂಬ ಮತ್ತೊಬ್ಬನ ನಂಟಿದೆ. ಅವನನ್ನು ಅಮೃತಸರ ಜೈಲಿನಿಂದ ವಾರಂಟ್‌ನಲ್ಲಿ ಕರೆತರುತ್ತೇವೆ. ಅವನ ವಿರುದ್ಧ ಈಗಾಗಲೇ ಒಂದು ಎನ್‌ಡಿಪಿಎಸ್ ಪ್ರಕರಣ ದಾಖಲಾಗಿದೆ. ನಾವು ಅಧಿಕೃತ ರಹಸ್ಯ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದೇವೆ. ಈ ವಿಷಯವನ್ನು ತೀವ್ರವಾಗಿ ತನಿಖೆ ಮಾಡುತ್ತಿದ್ದೇವೆ. ಪಂಜಾಬ್ ಸಿಎಂ ಭಗವಂತ್ ಮಾನ್ ಮತ್ತು ಡಿಜಿಪಿ ಗೌರವ್ ಯಾದವ್ ಅವರು ನಮಗೆ ಮಾಹಿತಿ ಸಿಕ್ಕರೆ ತಕ್ಷಣ ಬಂಧಿಸಿ ಜೈಲಿಗೆ ಹಾಕುವಂತೆ ಸೂಚನೆ ನೀಡಿದ್ದಾರೆ ಎಂದಿದ್ದಾರೆ.
10,000 ರೂಪಾಯಿಗೆ ಮಾಹಿತಿ ರವಾನೆ
ಆರಂಭಿಕ ತನಿಖೆಯ ಪ್ರಕಾರ ಅವರು 5000 ರೂಪಾಯಿಯಿಂದ ಹೆಚ್ಚು ಸೂಕ್ಷ್ಮ ಮಾಹಿತಿಗಾಗಿ 10,000 ರೂಪಾಯಿಗಳನ್ನು ಪಡೆದರು. ಅವರಿಂದ ನಾವು ಬಹಳಷ್ಟು ಶಸ್ತ್ರಾಸ್ತ್ರಗಳು ಮತ್ತು ಆರ್‌ಡಿಎಕ್ಸ್ ಅನ್ನು ವಶಪಡಿಸಿಕೊಂಡಿದ್ದೇವೆ. ಮೊದಲು, ಅವರು ಗಡಿಯಿಂದ ಹೆರಾಯಿನ್ ಸರಕುಗಳನ್ನು ತೆಗೆದುಕೊಳ್ಳುತ್ತಿದ್ದರು. ಈಗ ಅಂತಹ ಮಾಹಿತಿಯನ್ನು ಕೇಳಲಾಯಿತು. ನಮಗೆ ಈ ಮಾಹಿತಿ ಸಿಕ್ಕಾಗ, ಪಂಜಾಬ್ ಪೊಲೀಸರು ತ್ವರಿತವಾಗಿ ಕಾರ್ಯನಿರ್ವಹಿಸಿ ಅವರನ್ನು ಬಂಧಿಸಿದರು. ಅವರು ಸೂಕ್ಷ್ಮ ಸೇನಾ ನೆಲೆಗಳು ಮತ್ತು ಚಲನವಲನಗಳ ಬಗ್ಗೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು. ಅಲ್ಲದೆ ಶತ್ರುಗಳ ಯೋಜನೆಯನ್ನು ಬಲಪಡಿಸಲು ಸಹಾಯ ಮಾಡುತ್ತಿದ್ದರು. ನಾವು ಅವರನ್ನು ಬಂಧಿಸಿದ್ದು, ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಪಂಜಾಬ್ ಪೊಲೀಸರು ಹೇಳಿದ್ದಾರೆ.

ವಾಯುಪಡೆಯ ಮುಖ್ಯಸ್ಥ-ಮೋದಿ ಮಹತ್ವದ ಸಭೆ
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಭಾರತೀಯ ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಎಪಿ ಸಿಂಗ್ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ. ಪ್ರಧಾನ ಮಂತ್ರಿ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ನಡುವಿನ ಪ್ರತ್ಯೇಕ ಸಭೆಯ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ವಾಯುಪಡೆಯ ಮುಖ್ಯಸ್ಥರೊಂದಿಗೆ ಸಭೆ ನಡೆದಿದೆ. ಕಳೆದ ವಾರ ಪ್ರಧಾನಿ ಮೋದಿ ಅವರು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಭೇಟಿ ಮಾಡಿದ್ದರು.

ಚೆನಾಬ್ ನದಿ ನೀರು ಹರಿವು ಸ್ಥಗಿತ!
ಪಾಕಿಸ್ತಾನಕ್ಕೆ ಒಂದೊಂದಾಗಿ ಬಿಸಿ ಮುಟ್ಟಿಸುತ್ತಿರುವ ಭಾರತವು ಮೊದಲಿಗೆ ಸಿಂಧೂ ನದಿಯ ನೀರು ಹರಿವು ನಿಲ್ಲಿಸಿತ್ತು. ಇದೀಗ ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ಮೂಲಕ ನೀರಿನ ಹರಿವನ್ನು ಸ್ಥಗಿತಗೊಳಿಸಿದೆ. ಅಲ್ಲದೆ ಝೀಲಂ ನದಿಯ ಕಿಶನ್‌ಗಂಗಾ ಅಣೆಕಟ್ಟಿನಲ್ಲೂ ಇದೇ ರೀತಿಯ ಕ್ರಮಗಳನ್ನು ಯೋಜಿಸುತ್ತಿದೆ ಎಂದು ವರದಿಯಾಗಿದೆ. ಜಮ್ಮುವಿನ ರಾಂಬನ್‌ನಲ್ಲಿರುವ ಬಾಗ್ಲಿಹಾರ್ ಮತ್ತು ಉತ್ತರ ಕಾಶ್ಮೀರದ ಕಿಶನ್‌ಗಂಗಾ ಎಂಬ ಈ ಜಲವಿದ್ಯುತ್ ಅಣೆಕಟ್ಟುಗಳು ಭಾರತಕ್ಕೆ ನೀರು ಬಿಡುಗಡೆಯ ಸಮಯವನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ನೀಡುತ್ತವೆ ಎನ್ನಲಾಗಿದೆ.
ಭಾರತಕ್ಕೆ ಬೆದರಿಕೆ ಹಾಕಿದ ಪಾಕ್ ರಾಯಭಾರಿ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ಭಾರತೀಯ ಮಿಲಿಟರಿ ದಾಳಿಯ ವರದಿಗಳಿಗೆ ಪ್ರತಿಕ್ರಿಯೆಯಾಗಿ ರಷ್ಯಾದಲ್ಲಿನ ಪಾಕಿಸ್ತಾನ ರಾಯಭಾರಿ ಪರೋಕ್ಷ ಪರಮಾಣು ಬೆದರಿಕೆಯೊಡ್ಡಿದ್ದಾರೆ. ಪಾಕ್ ರಾಯಭಾರಿ ಮುಹಮ್ಮದ್ ಖಾಲಿದ್ ಜಮಾಲಿ, ಪಾಕಿಸ್ತಾನದೊಳಗೆ ಗುರಿಯಿಟ್ಟು ದಾಳಿ ನಡೆಸುವ ಭಾರತದ ಉದ್ದೇಶವನ್ನು ಸೂಚಿಸುವ ಸೋರಿಕೆಯಾದ ದಾಖಲೆಗಳು ಇಸ್ಲಾಮಾಬಾದ್‌ಗೆ ಲಭ್ಯವಿವೆ ಎಂದಿದ್ದಾರೆ.
ಯುದ್ಧ ಸನ್ನಿಹಿತ ಎಂದು ಘೋಷಿಸಿರುವ ಅವರು, ಪ್ರಚೋದಿಸಿದರೆ ಪಾಕಿಸ್ತಾನವು ಪರಮಾಣು ಶಸ್ತ್ರಾಸ್ತ್ರಗಳ ಬಳಕೆ ಸೇರಿದಂತೆ ಪೂರ್ಣ ಪ್ರಮಾಣದ ಶಕ್ತಿಯೊಂದಿಗೆ ಪ್ರತಿಕ್ರಿಯಿಸುತ್ತದೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ವಿಷಯಕ್ಕೆ ಬಂದಾಗ ನಾವು ಮಿಲಿಟರಿ ಶಕ್ತಿಯನ್ನು ಹೋಲಿಸಲು ಬಯಸುವುದಿಲ್ಲ. ಆದರೆ ದಾಳಿ ಮಾಡಿದರೆ, ನಾವು ನಮ್ಮಲ್ಲಿರುವ ಸಾಂಪ್ರದಾಯಿಕ ಮತ್ತು ಪರಮಾಣು ಪ್ರತಿಯೊಂದು ಆಯ್ಕೆಯನ್ನು ಬಳಸಿ ಪ್ರತಿಕ್ರಿಯಿಸುತ್ತೇವೆ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ (ಎಲ್‌ಒಸಿ) ವಿವಿಧ ವಲಯಗಳಲ್ಲಿ ಪಾಕಿಸ್ತಾನಿ ಪಡೆಗಳು ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿಯನ್ನು ಮುಂದುವರೆಸಿವೆ. ಇದಕ್ಕೆ ಭಾರತೀಯ ಸೇನೆಯಿಂದ ಪರಿಣಾಮಕಾರಿ ಪ್ರತೀಕಾರ ವ್ಯಕ್ತವಾಗಿದೆ. ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿಯಲ್ಲಿ ಕೇಂದ್ರಾಡಳಿತ ಪ್ರದೇಶದ ಐದು ಜಿಲ್ಲೆಗಳ ಎಂಟು ಸ್ಥಳಗಳಲ್ಲಿ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆ ವರದಿಯಾಗಿದೆ. ಆದರೆ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications