ಬಿಹಾರ: ಹಳಿ ತಪ್ಪಿದ ಸಹರ್ಸ-ಪಾಟ್ನಾ ರಾಜ್ಯರಾಣಿ ಎಕ್ಸ್ ಪ್ರೆಸ್ ರೈಲು!
ಪಾಟ್ನಾ, ಏಪ್ರಿಲ್ 23 : ಬಿಹಾರದ ಸಹರ್ಸ ಬಳಿ ಭಾನುವಾರ ಸಹರ್ಸ-ಪಾಟ್ನಾ ರಾಜ್ಯರಾಣಿ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು, ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
ಬೆಳಗ್ಗೆ ಸುಮಾರು 9.30ಕ್ಕೆ ರಾಜ್ಯರಾಣಿ ಎಕ್ಸ್ ಪ್ರೆಸ್ ರೈಲು, ಸಹರ್ಸ ರೈಲು ನಿಲ್ದಾಣದಿಂದ ಪಾಟ್ನಾದತ್ತ ಹೊರಟಿದ್ದ ವೇಳೆ ರೈಲಿನ 2 ಬೋಗಿಗಳು ಹಳಿ ತಪ್ಪಿವೆ. ಇದರಿಂದ ಸುಮಾರು 3 ಗಂಟೆಗಳ ಕಾಲ ಈ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯವಾಗಿತ್ತು.

ತಾಂತ್ರಿಕ ಕಾರಣದಿಂದಾಗಿ ರೈಲು ಹಳಿ ತಪ್ಪಿದೆ ಎಂದು ಅಧಿಕಾಗಿಳು ತಿಳಿಸಿದ್ದಾರೆ. ಕೂಡಲೇ ಸ್ಥಳದಲ್ಲೇ ಇದ್ದ ರೈಲ್ವೇ ಅಧಿಕಾರಿಗಳು ಘಟನೆಯನ್ನು ಪರಿಶೀಲಿಸುತ್ತಿದ್ದು, ಹಳಿ ಸರಿ ಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ರೈಲು ಹಳಿ ತಪ್ಪಿದ ಕಾರಣ ಸಹರ್ಸ-ಮಾನ್ಸಿ, ಸಹರ್ಸ-ಮಾಧೇಪುರ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತವಾಗಿದ್ದು, ರೈಲ್ವೇ ಸಿಬ್ಬಂದಿ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ.
ಅಧಿಕಾರಿಗಳು ನೀಡಿರುವ ಮಾಹಿತಿಯಂತೆ 2 ಬೋಗಿಗಳು ಹಳಿ ತಪ್ಪಿವೆಯಾದರೂ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ.
ಹಾಗೂ ರೈಲಿನ ಎರಡು ಬೋಗಿಗಳು ವರೆತು ಪಡಿಸಿ ಉಳಿದ ಬೇರಾವುದೇ ಕೋಚ್ ಗಳಿಗೆ ಧಕ್ಕೆಯಾಗಿಲ್ಲ ಎಂದು ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications