ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಜ್ ಯಾತ್ರೆಗೆ ಹೋಗಲು ಎರಡು ಡೋಸ್ ಕೊರೊನಾ ಲಸಿಕೆ ಕಡ್ಡಾಯ!

|
Google Oneindia Kannada News

ನವದೆಹಲಿ, ಏಪ್ರಿಲ್ 16: ಕೊರೊನಾವೈರಸ್ ಸೋಂಕಿನ ಹರಡುವಿಕೆ ಆತಂಕ ಹೆಚ್ಚುತ್ತಿರುವ ಹಿನ್ನೆಲೆ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಈ ವರ್ಷ ಹಜ್ ಯಾತ್ರೆಗೆ ಅನುಮತಿ ನೀಡಲಾಗುವುದು ಎಂದು ಭಾರತೀಯ ಹಜ್ ಸಮಿತಿ ಘೋಷಿಸಿದೆ.

2021ನೇ ಸಾಲಿನಲ್ಲಿ ಹಜ್ ಯಾತ್ರೆ ತೆರಳುವುದಕ್ಕಾಗಿ ಅರ್ಜಿ ಸಲ್ಲಿಸಿದ ಸದಸ್ಯರಿಗೆ ಭಾರತೀಯ ಹಜ್ ಸಮಿತಿ ನೋಟಿಸ್ ಜಾರಿಗೊಳಿಸಿದೆ. ಎರಡು ಡೋಸ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಯಾತ್ರೆಗೆ ಹೋಗಲು ಅನುಮತಿ ನೀಡಲಾಗುವುದಿಲ್ಲ ಎಂದು ತಿಳಿಸಿದೆ.

ಕೊರೊನಾ ಲಸಿಕೆ ಪಡೆದವರಿಗಷ್ಟೇ ಮೆಕ್ಕಾ ಭೇಟಿಗೆ ಅವಕಾಶಕೊರೊನಾ ಲಸಿಕೆ ಪಡೆದವರಿಗಷ್ಟೇ ಮೆಕ್ಕಾ ಭೇಟಿಗೆ ಅವಕಾಶ

ಸೌದಿ ಅರೇಬಿಯಾದ ಆರೋಗ್ಯ ಸಚಿವರು ನೀಡಿರುವ ಮಾಹಿತಿ ಮತ್ತು ಸಂದೇಶದ ಬಗ್ಗೆ ಉಲ್ಲೇಖಿಸಲಾಗಿದೆ. ಜೂನ್ ಮಧ್ಯಭಾಗದಲ್ಲಿ ಹಜ್ ಯಾತ್ರೆ ಆರಂಭಿಸುವುದಕ್ಕೂ ಮೊದಲೇ ಎರಡು ಡೋಸ್ ಲಸಿಕೆ ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಸೂಚಿಸಿದೆ.

Two doses Of Corona Vaccine Is Must For Hajj Pilgrimage: Indian Haj Committee

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಸೂಚನೆ:

2021ನೇ ಸಾಲಿನಲ್ಲಿ ಹಜ್ ಯಾತ್ರೆ ಕೈಗೊಳ್ಳುವುದಕ್ಕಾಗಿ ಅರ್ಜಿ ಸಲ್ಲಿಸಿದವರು ಕೂಡಲೇ ಕೊರೊನಾವೈರಸ್ ಲಸಿಕೆ ಹಾಕಿಸಿಕೊಳ್ಳಬೇಕು. ಕೂಡಲೇ ಮೊದಲ ಡೋಸ್ ಲಸಿಕೆ ಹಾಕಿಸಿಕೊಂಡರೆ ಯಾತ್ರೆ ಆರಂಭಕ್ಕೂ ಮೊದಲು ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಅನುಕೂಲವಾಗಲಿದೆ ಎಂದು ಅರ್ಜಿದಾರರಿಗೆ ಸೂಚಿಸಲಾಗಿದೆ.

ಸೌದಿ ಅರೇಬಿಯಾ ಸರ್ಕಾರದಿಂದ 2021ನೇ ಸಾಲಿನ ಹಜ್ ಯಾತ್ರೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಸ್ಪಷ್ಟನೆ ಸಿಕ್ಕಿಲ್ಲ. ಸೌದಿ ಅರೇಬಿಯಾ ಪ್ರಾಧಿಕಾರದಿಂದ ಅನುಮತಿಯನ್ನು ಎದುರು ನೋಡಲಾಗುತ್ತಿದೆ ಎಂದು ಭಾರತೀಯ ಹಜ್ ಸಮಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮಸೂದ್ ಅಹ್ಮದ್ ಖಾನ್ ತಿಳಿಸಿದ್ದಾರೆ.

English summary
Two doses Of Corona Vaccine Is Must For Hajj Pilgrimage: Indian Haj Committee.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X