ನಿರ್ಮಾಣ ಹಂತದ ಫ್ಲೈ ಓವರ್ ಕುಸಿದು ಒಡಿಶಾದಲ್ಲಿ ಇಬ್ಬರ ದುರ್ಮರಣ
ಭುವನೇಶ್ವರ, ಸೆಪ್ಟೆಂಬರ್ 10: ಒಡಿಶಾ ರಾಜಧಾನಿ ಭುವನೇಶ್ವರದಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ನ ಒಂದು ಭಾಗ ಕುಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭುವನೇಶ್ವರದ ಬೊಮಿಖಲ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಕುಸಿದ ಮೇಲ್ಸೇತುವೆ ಅಡಿಯಲ್ಲಿ ಇನ್ನೂ ಹಲವಾರು ಜನ ಸಿಲುಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಇವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಮೇಲ್ಸೇತುವೆ ಕುಸಿದ ವೇಳೆ ಸ್ಥಳದಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ.
ಘಟನೆಯಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.












Click it and Unblock the Notifications