ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Posted By:
Subscribe to Oneindia Kannada

ಬಾರಾಮುಲ್ಲಾ, ಫೆಬ್ರವರಿ 04 : ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಭದ್ರತಾ ಸಿಬ್ಬಂದಿ ಯಶಸ್ವಿಯಾಗಿದೆ. ಶನಿವಾರ ನಡೆದ ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಕೂಡ ಗಾಯಗೊಂಡಿದ್ದಾರೆ.

ಉಗ್ರರು ಇಲ್ಲಿ ಅವಿತುಕೊಂಡಿದ್ದಾರೆ ಎಂದು ತಿಳಿದುಬಂದ ಸುಳಿವಿನ ಮೇರೆಗೆ ಬಾರಾಮುಲ್ಲಾ ಜಿಲ್ಲೆಯ ಅಮರ್‌ಘರ್ ಎಂಬಲ್ಲಿ ಭಾರತೀಯ ಭದ್ರತಾ ಸಿಬ್ಬಂದಿ ಶನಿವಾರ ಬೆಳಿಗ್ಗೆ ಕಾರ್ಯಾಚರಣೆ ಆರಂಭಿಸಿತು.

Two militants gunned down in Baramulla in Jammu and Kashmir

ಉಗ್ರರನ್ನು ಹುಡುಕುತ್ತಿದ್ದಾಗ ಎರಡೂ ಬಣಗಳ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ. ಇದರಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಯಶಸ್ವಿಯಾದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆ ಇಬ್ಬರು ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ. ಎರಡೂ ತಂಡಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸಬ್ ಇನ್‌ಸ್ಪೆಕ್ಟರ್ ಮತ್ತು ಮತ್ತೊಬ್ಬ ಅಧಿಕಾರಿ ಗಾಯಗೊಂಡಿದ್ದಾರೆ. ಇಬ್ಬರು ಉಗ್ರರಿಂದ ಎಕೆ 47 ರೈಫಲ್, ಪಿಸ್ತೂಲು ಮತ್ತಿತರ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Two militants gunned down in Baramulla in Jammu and Kashmir by Indian security personnel in an encounter on Saturday. In the incident two police men too were injured.
Please Wait while comments are loading...