ಕಾಶ್ಮೀರದ ಟ್ರಾಲ್ ನಲ್ಲಿ ಉಗ್ರರ ಗುಂಡಿಗೆ ಪೊಲೀಸ್ ಬಲಿ, ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಟ್ರಾಲ್ ನಲ್ಲಿ ನಡೆದ ಎನ್ಕೌಂಟರಿನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಶನಿವಾರ ಸಂಜೆ ಆರಂಭವಾದ ಎನ್ಕೌಂಟರ್ ಈಗಷ್ಟೇ ಮುಗಿದಿದ್ದು ಓರ್ವ ಪೊಲೀಸ್ ಅಧಿಕಾರಿ ಹಾಗೂ ಇಬ್ಬರು ಸೈನಿಕರಿಗೂ ಗಾಯಗಳಾಗಿವೆ.
ಬೆಂಗಳೂರು, ಮಾರ್ಚ್ 5: ಜಮ್ಮು ಮತ್ತು ಕಾಶ್ಮೀರದ ಟ್ರಾಲ್ ನಲ್ಲಿ ನಡೆದ ಎನ್ಕೌಂಟರಿನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಶನಿವಾರ ಸಂಜೆ ಆರಂಭವಾದ ಎನ್ಕೌಂಟರ್ ಈಗಷ್ಟೇ ಮುಗಿದಿದ್ದು ಓರ್ವ ಪೊಲೀಸ್ ಅಧಿಕಾರಿ ಹಾಗೂ ಇಬ್ಬರು ಸೈನಿಕರಿಗೂ ಗಾಯಗಳಾಗಿವೆ.
ಶನಿವಾರ ರಾತ್ರಿಯಿಂದ ಶಿಕಾಗರ್ ಮತ್ತು ಟ್ರಾಲ್ ನಲ್ಲಿ ಆರಂಭವಾದ ಎನ್ಕೌಂಟರ್ ನಲ್ಲಿ ಇಬ್ಬರು ಬಂಡುಕೋರರೂ ಸಾವನ್ನಪ್ಪಿದ್ದಾರೆ. ಇವರನ್ನು ಹಿಜ್ಬುಲ್ಲಾ ಮುಜಾಹಿದ್ದೀನ್ ಉಗ್ರ ಹಾಗೂ ಬುರ್ಹಾನ್ ವನಿಯ ಉತ್ತರಾಧಿಕಾರಿ ಸಬ್ಜರ್ ಭಟ್ ಹಾಗೂ ಅಕೀಬ್ ಎಂದು ಗುರುತಿಸಲಾಗಿದೆ. ಉಗ್ರರು ಅಡಗಿಕೊಂಡಿದ್ದ ಮನೆಯನ್ನು ಭದ್ರತಾ ಪಡೆಗಳು ಕೆಡವಿ ಹಾಕಿವೆ. [ಯೋಧರ ಶೋಚನೀಯ ಸ್ಥಿತಿ ತೆರೆದಿಟ್ಟಿದ್ದ ಸೈನಿಕ ಅನುಮಾನಾಸ್ಪದ ಸಾವು]

ಟ್ರಾಲ್ ನಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಗುಪ್ತಚರ ದಳದ ಖಚಿತ ಮಾಹಿತಿಯ ಮೇಲೆ ಪೊಲೀಸರು ಮತ್ತು ಸೇನೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿತ್ತು.
ಎನ್ಕೌಂಟರ್ ವೇಳೆ ಸ್ಥಳದಲ್ಲಿ ಸ್ಥಳೀಯರು ರಕ್ಷಣಾ ಪಡೆಗಳತ್ತ ಕಲ್ಲು ತೂರಾಟವನ್ನೂ ನಡೆಸಿದರು. ಇದರಿಂದ ಕಾರ್ಯಾಚರಣೆಗೆ ಅಡ್ಡಿಯುಂಟಾಗಿತ್ತು. ಸ್ಥಳೀಯರು ಸಹಾಯಕ ಸಬ್ ಇನ್ಸ್ ಪೆಕ್ಟರ್ ಒಬ್ಬರ ಮೇಲೆ ಹಲ್ಲೆ ಮಾಡಿ ಆತನ ಎಕೆ-47 ರೈಫಲನ್ನು ಕಿತ್ತುಕೊಂಡಿದ್ದರು. ನಂತರ ಸ್ಥಳದಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಕಾರ್ಯಾಚರಣೆ ಮುಂದುವರಿಸಲಾಗಿತ್ತು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications