ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ 14 ಪ್ರಯಾಣಿಕರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆ

|
Google Oneindia Kannada News

ನವದೆಹಲಿ, ಫೆಬ್ರವರಿ.24: ಜಪಾನ್ ಹಡಗಿನಲ್ಲಿ ಕೊರೊನಾ ವೈರಸ್ ಪತ್ತೆಗೆ ವೈದ್ಯಕೀಯ ತಪಾಸಣೆ ಮುಂದುವರಿಸಲಾಗಿದೆ. ಸೋಮವಾರ ನಡೆಸಿದ ವೈದ್ಯಕೀಯ ತಪಾಸಣೆಯಲ್ಲಿ ಮತ್ತಿಬ್ಬರು ಭಾರತೀಯರಿಗೆ ಸೋಂಕು ತಗಲಿರುವ ಬಗ್ಗೆ ಜಪಾನ್ ರಾಯಭಾರಿ ಕಚೇರಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಜಪಾನ್ ಡೈಮೆಂಡ್ ಪ್ರಿನ್ಸಸ್ ಹಡಗಿನಲ್ಲಿ ಕೊರೊನಾ ವೈರಸ್ ಗೆ ಮೂವರು ಪ್ರಯಾಣಿಕರು ಪ್ರಾಣ ಬಿಟ್ಟಿದ್ದರೆ, ಇದುವರೆಗೂ 850 ಪ್ರಯಾಣಿಕರಿಗೆ ಸೋಂಕು ತಗಲಿರುವ ಬಗ್ಗೆ ವೈದ್ಯಕೀಯ ತಪಾಸಣೆ ವೇಳೆ ತಿಳಿದು ಬಂದಿದೆ.

ಮೃತ್ಯುಕೂಪವಾದ ಜಪಾನ್‌ ಹಡಗು: ಕೊರೊನಾಗೆ ಇಬ್ಬರು ಬಲಿಮೃತ್ಯುಕೂಪವಾದ ಜಪಾನ್‌ ಹಡಗು: ಕೊರೊನಾಗೆ ಇಬ್ಬರು ಬಲಿ

ಹಾಂಗ್ ಕಾಂಗ್ ನಿಂದ ಹೊರಟಿದ್ದ ಡೈಮೆಂಡ್ ಪ್ರಿನ್ಸಸ್ ಹಡಗಿನಲ್ಲಿ 138 ಭಾರತೀಯರು ಸೇರಿದಂತೆ 3,711 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ ಶೇ.20ರಷ್ಟು ಪ್ರಯಾಣಿಕರಿಗೆ ಕೊರೊನಾ ವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ಸ್ಪಷ್ಟವಾಗಿದೆ.

 Two More Indians Get Coronavirus Positive Infected Case Rises 14 In Japan Ship

ಭಾರತೀಯ ರಾಯಭಾರಿ ಅಧಿಕಾರಿಗಳ ಸ್ಪಷ್ಟನೆ:

ಜಪಾನ್ ಹಡಗಿನಲ್ಲಿದ್ದ 138 ಭಾರತೀಯ ಪ್ರಯಾಣಿಕರ ಪೈಕಿ ಮತ್ತಿಬ್ಬರು ಭಾರತೀಯರಲ್ಲಿ ಸೋಂಕು ಪತ್ತೆಯಾಗಿದ್ದು, ಇದರಿಂದ ಭಾರತೀಯ ಸೋಂಕಿತರ ಸಂಖ್ಯೆಯು 14ಕ್ಕೆ ಏರಿಕೆಯಾಗಿದೆ. ಈ ಎಲ್ಲ ಸೋಂಕಿತರನ್ನು ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಜಪಾನ್ ನಲ್ಲಿ ಇರುವ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು, ಮಾರಕ ಕೊರೊನಾ ವೈರಸ್ ಗೆ ಹುಟ್ಟಿಕೊಂಡ ಚೀನಾದಲ್ಲಿ ಮಾರಕ ರೋಗ ಮರಣ ಮೃದಂಗ ಬಾರಿಸುತ್ತಿದೆ. ಸೋಮವಾರದ ಅಂಕಿ-ಅಂಶಗಳ ಪ್ರಕಾರ ಚೀನಾ ಒಂದರಲ್ಲೇ 2,627 ಮಂದಿ ಕೊರೊನಾ ವೈರಸ್ ಗೆ ಪ್ರಾಣ ಬಿಟ್ಟಿದ್ದಾರೆ. 79,731 ಮಂದಿಗೆ ಸೋಂಕು ತಗಲಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.

English summary
Coronavirus: Two More Indians Get Coronavirus Positive Infected Case Rises 14 In Japan Diamond Princess Ship.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X