ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ: ಇಬ್ಬರು ಸೈನಿಕರು ಸಾವು, ನಾಲ್ವರಿಗೆ ಗಂಭೀರ ಗಾಯ, ಇಂಟರ್ನೆಟ್ ಸ್ಥಗಿತ
ನವದೆಹಲಿ, ಮೇ, 05: ಶುಕ್ರವಾರ (ಮೇ 05) ಪಿರ್ ಪಂಜಾಲ್ ಕಣಿವೆಯ ರಾಜೌರಿ ಸೆಕ್ಟರ್‌ನ ಕಂಡಿ ಅರಣ್ಯದಲ್ಲಿ ಭಯೋತ್ಪಾದಕರು ಗುಂಡಿನ ಚಕಮಕಿ ನಡೆಸಿದ್ದು, ಈ ದಾಳಿಯಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದು, ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜೌರಿ ಸೆಕ್ಟರ್‌ನ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನಾ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
#WATCH | Jammu: An encounter has started in the Kandi area of Rajouri. Security forces on the spot.
— ANI (@ANI) May 5, 2023
(Visuals deferred by unspecified time) pic.twitter.com/WGsPJXGh2w
ಇನ್ನು ಗಾಯಗೊಂಡ ಯೋಧರನ್ನು ಚಿಕಿತ್ಸೆಗಾಗಿ ಉಧಂಪುರದ ಕಮಾಂಡ್ ಆಸ್ಪತ್ರೆಗೆ ವಿಮಾನದಲ್ಲಿ ಸ್ಥಳಾಂತರಿಸಲಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸದ್ದಾರೆ. ಈ ಘಟನೆ ಸಂಭವಿಸಿದ ಬಳಿಕ "ಸುರಕ್ಷತಾ ಕ್ರಮವಾಗಿ" ರಜೌರಿಯಲ್ಲಿ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ಬೆಳಗ್ಗೆ 7:30ರ ಸುಮಾರಿಗೆ ಕಂಡಿ ಅರಣ್ಯದ ಗುಹೆಯಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರ ಗುಂಪಿನೊಂದಿಗೆ ಸೇನೆ ಶೋಧ ತಂಡ ಸಂಪರ್ಕವನ್ನು ಸಾಧಿಸಿದಾಗ ಈ ಘಟನೆ ನಡೆದಿದೆ ಎಂದು ಸೇನೆ ತಿಳಿಸಿದೆ.

ಇನ್ನು ಭಯೋತ್ಪಾದಕರ ಗುಂಪಿನಲ್ಲೂ ಕೂಡ ಸಾವು ನೋವುಗಳು ಸಂಭವಿಸಿರುವ ಸಾಧ್ಯತೆಯಿದೆ. ಆದರೆ, ಇನ್ನೂ ಯಾವುದೇ ಮೃತದೇಹಗಳು ಪತ್ತೆಯಾಗಿಲ್ಲ. ಈ ಪ್ರದೇಶದಲ್ಲಿ ಎರಡರಿಂದ, ನಾಲ್ವರು ಉಗ್ರರು ಅಡಗಿರುವ ಸಾಧ್ಯತೆ ಇದೆ ಎಂದು ಸಂಶಯವನ್ನು ವ್ಯಕ್ತಪಡಿಸಿದೆ. ಈ ಪ್ರದೇಶವು ಕಲ್ಲಿನ ಮತ್ತು ಕಡಿದಾದ ಬಂಡೆಗಳು, ದಟ್ಟವಾದ ಸಸ್ಯಗಳಿಂದ ಕೂಡಿದೆ. ಮತ್ತೊಂದೆಡೆ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನೆ ತಿಳಿಸಿದೆ.
ಏಪ್ರಿಲ್ 20 ರಂದು ರಾಜೌರಿಯಲ್ಲಿ ನಡೆದ ದಾಳಿಯ ನಂತರ ಬೆಟ್ಟಗಳ ನಡುವೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಆಗ 100ಕ್ಕೂ ಹೆಚ್ಚು ಸ್ಥಳೀಯರಿಂದ ಮಾಹಿತಿ ಪಡೆಯುವ ಮೂಲಕ ದಾಳಿಕೋರರ ಜಾಡುಗಳನ್ನು ಪತ್ತೆಹಚ್ಚಿ ಕೆಲವು ಉಗ್ರರನ್ನು ಬಂಧಿಸಿ ಮಟ್ಟಹಾಕಲಾಯಿತು. ಇದಕ್ಕೂ ಮೊದಲು ಜನವರಿ 1 ರಂದು ರಾಜೌರಿಯ ಧಂಗ್ರಿ ಪ್ರದೇಶದಲ್ಲಿ ನಿರ್ದಿಷ್ಟ ಸಮುದಾಯದ ಹಳ್ಳಿಯೊಂದರ ಮೇಲೆ ಉಗ್ರಗಾಮಿಗಳು ದಾಳಿ ಮಾಡಿದ್ದು, ಈ ವೇಳೆ ಏಳು ಜನರು ಸಾವನ್ನಪ್ಪಿದರು.
ಇನ್ನು ಉತ್ತರ ಕಾಶ್ಮೀರದ ಕುಪ್ವಾರದಲ್ಲಿ ಇಬ್ಬರು ಹಾಗೂ ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರು ಎರಡು ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾರೆ. ಇದೀಗ ಉಗ್ರರ ದಾಳಿಯಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದು, ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿರುವುದು ಜಮ್ಮು ಮತ್ತು ಕಾಶ್ಮೀರಾವು ಮತ್ತೆ ರಕ್ತಪಾತಕ್ಕೆ ಸಾಕ್ಷಿಯಾಗಿದೆ. ಅಷ್ಟಕ್ಕೂ ನಮ್ಮ ಸೈನಿಕರೇನು ಸುಮ್ಮನೆ ಕುಳಿತಿಲ್ಲ, ಬದಲಾಗಿ ಉಗ್ರರನ್ನು ಮಟ್ಟಹಾಕಲು ಕಾರ್ಯಾಚರಣೆಯನ್ನು ಚುಕುರುಕುಗೊಳಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications