ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರ ಬಲಿ
ಕುಪ್ವಾರ, ಆಗಸ್ಟ್ 2: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾ ನಿರ್ದೇಶಕ ಶೇಷಪಾಲ್ ವೈದ್ ಇದನ್ನು ಖಚಿತಪಡಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಲೋಲಾಬ್ ಕುಪ್ವಾರದಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಾಕಾ ಚೆಕ್ಕಿಂಗ್ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಕುಪ್ವಾರ ಜಿಲ್ಲೆಯ ಮೈದನಾಪುರ ಪ್ರದೇಶದ ಕಂದಹಾರ್ ರಸ್ತೆಯಲ್ಲಿ ನಿಯೋಜಿಸಲಾಗಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಕೆಲವು ದಿನಗಳ ಬಳಿಕ ಈ ದಾಳಿ ನಡೆದಿದೆ. ಆ ಸಂದರ್ಭದಲ್ಲಿ ಉಗ್ರರು ಭದ್ರತಾ ಅಧಿಕಾರಿಯೊಬ್ಬರಿಂದ ಐಎನ್ಎಸ್‌ಎಎಸ್ ರೈಫಲ್‌ಅನ್ನು ಕದ್ದಿದ್ದರು.
ಕಳೆದ ಶನಿವಾರ ಆವಂತಿಪೊರಾದಲ್ಲಿ ಸಿಆರ್‌ಪಿಎಫ್ ಪಡೆ ಮೇಲೆ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ನಾಲ್ಬವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.












Click it and Unblock the Notifications