ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ವರು ಉಗ್ರರ ಹತ್ಯೆ, 3 ಯೋಧರು ಹುತಾತ್ಮ

ಶ್ರೀನಗರ, ಆಗಸ್ಟ್ 07 : ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ವರು ಉಗ್ರರನ್ನು ಯೋಧರು ಹತ್ಯೆ ಮಾಡಿದ್ದಾರೆ. ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಒಬ್ಬರು ಮೇಜರ್ ಸೇರಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಜಮ್ಮು ಕಾಶ್ಮೀರದ ಗುರೇಜ್ ಸೆಕ್ಟರ್‌ನಲ್ಲಿ ಮಂಗಳವಾರ ಬೆಳಗ್ಗೆ ಉಗ್ರರ ವಿರುದ್ಧ ಸೇನೆ ಕಾರ್ಯಾಚರಣೆ ನಡೆಸುತ್ತಿದೆ. 8 ಉಗ್ರರು ಗಡಿಯಿಂದ ಒಳನುಸುಳಿರುವ ಮಾಹಿತಿ ಸಿಕ್ಕಿದ್ದು, ನಾಲ್ವರನ್ನು ಹತ್ಯೆ ಮಾಡಲಾಗಿದೆ.

Two terrorists killed in Gurez sector Jammu and Kashmir

ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಒಬ್ಬರು ಮೇಜರ್ ಸೇರಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ತಲೆಮರೆಸಿಕೊಂಡಿರುವ ನಾಲ್ವರು ಉಗ್ರರಿಗಾಗಿ ಯೋಧರು ಹುಡುಕಾಟ ನಡೆಸುತ್ತಿದ್ದು, ಕಾರ್ಯಾಚರಣೆಯ ಇನ್ನೂ ನಡೆಯುತ್ತಿದೆ.

69 ಉಗ್ರರು ಒಳ ನುಸುಳಿದ್ದಾರೆ : 2018ರ ಜೂನ್ ಅಂತ್ಯದ ತನಕ ಜಮ್ಮು ಮತ್ತು ಕಾಶ್ಮೀರಕ್ಕೆ 69 ಉಗ್ರರು ಅಕ್ರಮವಾಗಿ ನುಸುಳಿದ್ದಾರೆ ಎಂದು ಲೋಕಸಭೆಗೆ ಸರ್ಕಾರ ಮಾಹಿತಿ ನೀಡಿದೆ. ಗಡಿಯುದ್ದಕ್ಕೂ 133 ಒಳ ನುಸುಳುವಿಕೆ ಪ್ರಯತ್ನಗಳು ನಡೆದಿವೆ ಎಂದು ಮಾಹಿತಿ ನೀಡಲಾಗಿದೆ.

ಮಂಗಳವಾರ ಲೋಕಸಭೆ ಕಲಾಪದಲ್ಲಿ ಗೃಹಖಾತೆ ರಾಜ್ಯ ಸಚಿವ ಹನ್ಸರಾಜ್ ಗಂಗಾರಾಮ್ ಈ ಕುರಿತು ಮಾಹಿತಿ ನೀಡಿದ್ದಾರೆ. ಜೂನ್ ತಿಂಗಳ ತನಕ 14 ಉಗ್ರರನ್ನು ಹತ್ಯೆ ಮಾಡಲಾಗಿದೆ. 2017ರಲ್ಲಿ 406 ಅಕ್ರಮ ಒಳನುಸುಳುವಿಕೆ ಯತ್ನಗಳು ನಡೆದಿವೆ ಎಂದು ಮಾಹಿತಿ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+