ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಅನಂತನಾಗ್, ಆಗಸ್ಟ್ 29: ಜಮ್ಮು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಇಂದು(ಆಗಸ್ಟ್ 29) ಬೆಳಿಗ್ಗಿನ ಜಾವ ಇಲ್ಲಿನ ಮುನ್ವಾರ್ಡ್ ಹಳ್ಳಿಯಲ್ಲಿ ಸಿಆರ್ ಪಿಎಫ್ ಯೋಧರು ಮತ್ತು ಪೊಲೀಸರು ಜಂಟಿಯಾಗಿ ನಡೆಸಿದ ಎನ್ ಕೌಂಟರ್ ದಾಳಿಯಲ್ಲಿ ಮೃತರಾದ ಇಬ್ಬರು ಉಗ್ರರನ್ನು ಇಂಡಿಯನ್ ಮುಜಾಹಿದ್ದಿನ್ ಉಗ್ರ ಸಂಘಟನೆಗೆ ಸೇರಿದವರೆಂದು ಗುರುತಿಸಲಾಗಿದೆ.
ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಮತ್ತಷ್ಟು ಭಯೋತ್ಪಾದಕರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಇತ್ತೀಚೆಗಷ್ಟೇ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್ ಕೌಟರ್ ದಾಳಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಬಲಿಹಾಕಲಾಗಿತ್ತು.












Click it and Unblock the Notifications