ದಾಳಿಗೆ ಸಂಚು ರೂಪಿಸುತ್ತಿದ್ದ ಇಬ್ಬರು ಉಗ್ರರನ್ನು ಹತ್ಯೆಗೈದ ಸೇನೆ

Posted By:
Subscribe to Oneindia Kannada

ಶೋಪಿಯಾನ್, (ಜಮ್ಮು ಮತ್ತು ಕಾಶ್ಮೀರ), ಡಿಸೆಂಬರ್ 19 : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಅವಿತು ದಾಳಿಗೆ ಸಂಚು ರೂಪಿಸುತ್ತಿದ್ದ ಇಬ್ಬರು ಉಗ್ರರನ್ನು ಮಂಗಳವಾರ ಬೆಳಗ್ಗೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಹೊಡೆದುರುಳಿಸಿದೆ.

ಶೋಪಿಯಾನ್ ಜಿಲ್ಲೆಯ ಕೆಲ್ಲರ್ ತೆಹ್ಸೀಲ್ ನ ಬತ್ಮುರ್ರನ್ ಗ್ರಾಮದಲ್ಲಿ ಉಗ್ರರು ಅವಿತಿರುವ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭಾರತೀಯ ಸೇನೆಯ 44 ರಾಷ್ಟ್ರೀಯ ರೈಫಲ್ಸ್ ನ ಯೋಧರು, ಜಮ್ಮು ಮತ್ತು ಕಾಶ್ಮೀರ ವಿಶೇಷ ಕಾರ್ಯಾಚರಣೆ ಪಡೆ ಮತ್ತು ಕೇಂದ್ರೀಯ ಮೀಸಲು ಪಡೆ (ಸಿಆರ್ ಪಿಎಫ್) ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Two terrorists killed in Shopian encounter in Jammu and Kashmir

ಮೃತ ಉಗ್ರರು ಜೈಶ್ ಇ-ಮೊಹಮದ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅವಿತಿರುವ ಶಂಕೆ ಮೇರೆಗೆ ಬಾರತೀಯ ಸೇನೆ ಶೋಧ ಕಾರ್ಯ ನಡೆಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Two terrorists killed in Shopian encounter in Jammu and Kashmir on Tuesday morning. Search operation underway.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ