ಮಧ್ಯಪ್ರದೇಶದಲ್ಲಿ ಅವಳಿ ರೈಲು ದುರಂತ, 29 ಸಾವು
ಭೋಪಾಲ್, ಆಗಸ್ಟ್ 5 : ಅವಳಿ ರೈಲು ದುರಂತದಲ್ಲಿ 29 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಲೋಕಸಭೆಯಲ್ಲಿ ಹೇಳಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಿಗೆ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. [ರೈಲು ದುರಂತದ ಚಿತ್ರಗಳು]
ಸಮಯ 10.30 : ರೈಲು ದುರಂತದಲ್ಲಿ ಮೃತಪಟ್ಟವರ ಶವಗಳನ್ನು ಹೊರತೆಗೆಯಲಾಗುತ್ತಿದೆ. 8 ಪುರುಷ, 10 ಮಹಿಳೆ ಮತ್ತು 5 ಮಕ್ಕಳ ಶವಗಳನ್ನು ಹೊರತೆಗೆಯಲಾಗಿದೆ.
ಸಮಯ 9.30 : ಅವಳಿ ರೈಲು ದುರಂತದಲ್ಲಿ ಮೃತಪಟ್ಟವರಿಗೆ ರೈಲ್ವೆ ಇಲಾಖೆ ಪರಿಹಾರ ಘೋಷಣೆ ಮಾಡಿದೆ. ಮೃತಪಟ್ಟವರಿಗೆ 2 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ಮತ್ತು ಸಣ್ಣ-ಪುಟ್ಟ ಗಾಯಗಳಾದವರಿಗೆ 25 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ.
ಸಮಯ 9 ಗಂಟೆ : ಹರ್ದಾ ಜಿಲ್ಲೆಯ ಕುಡುವಾ ಗ್ರಾಮದ ಬಳಿ ಸಂಭವಿಸಿದ ಅವಳಿ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಜನತಾ ಎಕ್ಸ್‌ಪ್ರೆಸ್ ರೈಲಿನ 10, ಕಾಮಾಯಾನಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 20 ಜನರು ಮೃತಪಟ್ಟಿದ್ದಾರೆ.

ಸಮಯ 8.30 : ಅವಳಿ ರೈಲು ಅಪಘಾತದಿಂದಾಗಿ 25ಕ್ಕೂ ಹೆಚ್ಚು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಮುಂಬೈನಿಂದ ಬರಬೇಕಿದ್ದ ರೈಲುಗಳ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ. ಪಂಜಾಬ್, ಉತ್ತರ ಪ್ರದೇಶ, ಮಧ್ಯಪ್ರದೇಶದಿಂದ ಬರಬೇಕಿದ್ದ 12 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. [ಮಂಗಳೂರಿನಲ್ಲಿ ರೈಲು ಅಪಘಾತ ತಪ್ಪಿಸಿದ ರೈತ]
Horrible #TrainTragedy site at Harda. @NewsEighteen collegue @manojkhandekar reports frm MP.@ibnlive @ibnkhabar pic.twitter.com/kDTgIUIozw
— Pranay Upadhyaya (@JournoPranay) August 5, 2015 ಸಮಯ 8 ಗಂಟೆ : 'ರೈಲ್ವೆ ಅಪಘಾತದಲ್ಲಿ ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಧಿಸುತ್ತೇನೆ. ಪ್ರಯಾಣಿಕರನ್ನು ರಕ್ಷಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡಿದ್ದಾರೆ.
My prayers with the injured. Authorities are doing everything possible on the ground. The situation is being monitored very closely.
— Narendra Modi (@narendramodi) August 5, 2015 ಸಮಯ 7.30 : ಮಚಕ್ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದೆ. ಘಟನೆಯಿಂದಾಗಿ ಹರ್ದಾ ಬಳಿಯ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು 6 ಕಿ.ಮೀ ತನಕ ವಾಹನಗಳು ಸಾಲುಗಟ್ಟಿ ನಿಂತಿವೆ.
ಸಮಯವಾಣಿ ಸಂಖ್ಯೆಗಳು : ಹರ್ದಾ ಬಳಿ ಸಂಭವಿಸಿದ ರೈಲು ದುರಂತದಲ್ಲಿ ಸಿಲುಕಿಕೊಂಡವರ ರಕ್ಷಣಾ ಕಾರ್ಯ ಮುಂದುವರೆದಿದೆ. ಜನರ ಸಹಾಯಕ್ಕಾಗಿ ಮಧ್ಯಪ್ರದೇಶ ಸರ್ಕಾರ ಸಹಾಯವಾಣಿಯನ್ನು ಆರಂಭಿಸಿದೆ.
Two Railway helpline No.s have been issued- 05422503814, 62733: Faheem, Dy Station Supritendent on MP train accident pic.twitter.com/nZESx8UY58
— ANI (@ANI_news) August 5, 2015 ಅವಳಿ ರೈಲು ದುರಂತ, 20 ಸಾವು : ಮಧ್ಯಪ್ರದೇಶದಲ್ಲಿ ಕೆಲವೇ ನಿಮಿಷಗಳ ಅಂತರದಲ್ಲಿ ಎರಡು ರೈಲುಗಳ ಹಳಿ ತಪ್ಪಿದ್ದು ಭಾರೀ ದುರಂತ ಸಂಭವಿಸಿದೆ. ಅಪಘಾತದಲ್ಲಿ ಇದುವರೆಗೂ 20 ಜನರು ಮೃತಪಟ್ಟಿದ್ದು, 300 ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.
ಬುಧವಾರ ಮುಂಜಾನೆ 12.10ರ ಸುಮಾರಿಗೆ ಮಧ್ಯಪ್ರದೇಶದ ಹರ್ದಾ ಬಳಿ ಈ ರೈಲು ಅಪಘಾತ ಸಂಭವಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ, ಸೇನೆ, ಸ್ಥಳೀಯ ಪೊಲೀಸರು ಪ್ರಯಾಣಿಕರ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಮಚಕ್ ನದಿಗೆ ರೈಲಿನ ಬೋಗಿಗಳು ಬಿದ್ದಿರುವುದರಿಂದ ರಕ್ಷಣಾ ಕಾರ್ಯ ಸವಾಲಾಗಿದೆ. ಜನತಾ ಎಕ್ಸ್‌ಪ್ರೆಸ್ ಮತ್ತು ಕಾಮಾಯಾನಿ ಎಕ್ಸ್‌ಪ್ರೆಸ್ ರೈಲುಗಳ ಒಟ್ಟು 16 ಬೋಗಿಗಳು ಹಳಿತಪ್ಪಿದೆ. ಜನತಾ ಎಕ್ಸ್‌ಪ್ರೆಸ್ ರೈಲು ಜಬಲ್ ಪುರದಿಂದ ಮುಂಬೈಗೆ ತೆರಳುತ್ತಿತ್ತು. ಮುಂಬೈನಿಂದ ವಾರಣಾಸಿಗೆ ಕಾಮಾಯಾನಿ ರೈಲು ತೆರಳುತ್ತಿತ್ತು. [ವಿಶ್ವದ ಅತಿ ದೊಡ್ಡ ಸಂಸ್ಥೆಗಳ ಪೈಕಿ ಭಾರತದ ಆರ್ಮಿ, ರೈಲ್ವೆ]
Deeply saddened by this tragic train accident near Harda. My heartfelt condolences to the families of deceased in this unfortunate tragedy.
— ShivrajSingh Chouhan (@ChouhanShivraj) August 5, 2015 ಅಪಘಾತ ನಡೆದಿದ್ದು ಹೇಗೆ? : ಕಾಮಾಯಾನಿ ರೈಲು ಮಚಕ್ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಮೇಲೆ ಬರುತ್ತಿದ್ದಂತೆ ಸೇತುವೆ ಕುಸಿದಿದ್ದು, S1 ನಿಂದ S11 ವರೆಗಿನ ಬೋಗಿಗಳು ಹಳಿತಪ್ಪಿ ನದಿಗೆ ಉರುಳಿವೆ. ಇದೇ ಸೇತುವೆ ಮೇಲೆ ಮತ್ತೊಂದು ಕಡೆಯಿಂದ ಬರುತ್ತಿದ್ದ ಜನತಾ ಎಕ್ಸ್‌ಪ್ರೆಸ್ ರೈಲಿನ ಎಂಜಿನ್ ಹಳಿ ತಪ್ಪಿದ್ದರಿಂದ 4 ಬೋಗಿಗಳು ನದಿಗೆ ಉರುಳಿವೆ.
Rushing emergency medical & other relief personnel to spot. darkness,water creating hurdles but ordered all possible help. Trying our best
— Suresh Prabhu (@sureshpprabhu) August 4, 2015 ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಮತ್ತು ಕೇಂದ್ರ ರೈಲೈ ಸಚಿವ ಸುರೇಶ್ ಪ್ರಭು ಅವರು ರಕ್ಷಣಾ ಕಾರ್ಯಚರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. 'ಕಾರ್ಯಾಚರಣೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ' ಎಂದು ಸುರೇಶ್ ಪ್ರಭು ಹೇಳಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications